ಜೆಡಿಎಸ್‌ ನಾಯಕರ ಕುಟುಂಬದ ಒಳ ಜಗಳದಿಂದ ಪ್ರಜ್ವಲ್‌ ಪ್ರಕರಣ ಬೆಳಕಿಗೆ: ಡಿಸಿಎಂ ಡಿಕೆ ಶಿವಕುಮಾರ್‌

Date:

ಜೆಡಿಎಸ್‌ ನಾಯಕರ ಕುಟುಂಬದ ಒಳಗಿನ ಜಗಳದಿಂದಾಗಿಯೇ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಪ್ರಕರಣ ಹೊರಬಂದಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

- Advertisement -

‘ಮೇ 7ರ ಬಳಿಕ ಪ್ರಕರಣ ಎಲ್ಲಿಗೆ ಹೋಗುತ್ತದೆ ಕಾದು ನೋಡಿ’ ಎಂಬ ಎಚ್‌ ಡಿ ಕುಮಾರಸ್ವಾಮಿ ಅವರ ಆರೋಪದ ಕುರಿತು ಶನಿವಾರ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, “ಮೇ 7 ಅಲ್ಲ. ಅಲ್ಲಿವರೆಗೂ ಏಕೆ ಕಾಯಬೇಕು. ಇದರ ಮೂಲ, ಹಿನ್ನೆಲೆ ಏನು ಎಂಬುದನ್ನು ಬಿಚ್ಚಬೇಕಾ? ಇದು ಅವರ ಕುಟುಂಬದ ಆಂತರಿಕ ವಿಷಯ”ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ವಿಡಿಯೊಗಳು ಬಹಿರಂಗವಾದ ಬಳಿಕ ಉಪ್ಪು ತಿಂದವರು ನೀರು ಕುಡಿಯಬೇಕು ಎಂದು ಹೇಳಿದವರು ಯಾರು? ರಾಜ್ಯದ ಜನರ ಕ್ಷಮೆ ಕೇಳಿದ್ದು ಯಾರು? ಅವರ ಕುಟುಂಬ ಮತ್ತು ನಮ್ಮ ಕುಟುಂಬ ಬೇರೆ ಬೇರೆ ಎಂದು ಹೇಳಿದವರು ಯಾರು? ಬಿಜೆಪಿಯವರು ಗಂಟೆಗೊಂದು ಗಳಿಗೆಗೊಂದು ಮಾತನಾಡುತ್ತಿದ್ದಾರೆ. ಜೆಡಿಎಸ್‌ನವರೂ ಅದೇ ರೀತಿ ಮಾತನಾಡುತ್ತಿದ್ದಾರೆ” ಎಂದು ಹೇಳಿದರು.

ಒಕ್ಕಲಿಗ ನಾಯಕತ್ವ ಪಡೆಯಲು ಪ್ರಜ್ವಲ್‌ ಪ್ರಕರಣ ಹೊರ ಹಾಕಲಾಗಿದೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದ ಅವರು, “ನನಗೆ ಕಾಂಗ್ರೆಸ್‌ ನಾಯಕ ಎಂಬುದೇ ಸಾಕು. ಒಕ್ಕಲಿಗ ನಾಯಕನ ಪಟ್ಟ ಬೇಕಿಲ್ಲ. ಒಕ್ಕಲಿಗನಾಗಿ ಹುಟ್ಟಿದ್ದೇನೆ. ಆ ಸಮಾಜಕ್ಕೆ ಗೌರವ ಕೊಡುವುದು, ಸಹಾಯ ಮಾಡುವುದು ನನ್ನ ಕರ್ತವ್ಯ ಅದನ್ನು ಮಾಡುತ್ತೇನೆ. ಆದರೆ, ಒಕ್ಕಲಿಗ ನಾಯಕ ಎಂದು ಕರೆಸಿಕೊಳ್ಳಲು ನನಗೆ ಇಷ್ಟವಿಲ್ಲ” ಎಂದು ತಿಳಿಸಿದರು.

ಜೆಡಿಎಸ್‌ ಶಾಸಕರನ್ನು ಕಾಂಗ್ರೆಸ್‌ ನಾಯಕರು ಸಂಪರ್ಕಿಸುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಕೇಳಿದಾಗ, “ಜೆಡಿಎಸ್‌ ಪಕ್ಷದ ಯಾರ ಜತೆಗೂ ನಾನು ಸಂಪರ್ಕದಲ್ಲಿಲ್ಲ. ಅವರ ಪಕ್ಷದ ವಿಚಾರಕ್ಕೆ ನಾನು ತಲೆ ಹಾಕುವುದಿಲ್ಲ. ಅವರ ಶಾಸಕರು, ಕುಟುಂಬದವರು ಹತಾಶರಾಗಿದ್ದಾರೆ. ಹೀಗಾಗಿ ಏನೇನೋ ಮಾತನಾಡುತ್ತಿದ್ದಾರೆ. ಅದಕ್ಕೆ ನಾನು ಪ್ರತಿಕ್ರಿಯಿಸುವುದಿಲ್ಲ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...