ಪ್ರಜ್ವಲ್ ಪ್ರಕರಣ | ಪಾಸಪೋರ್ಟ್ ರದ್ದು ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕಿದೆ: ಸಚಿವ ಪರಮೇಶ್ವರ್‌

Date:

ಸಂಸದ ಪ್ರಜ್ವಲ್ ರೇವಣ್ಣ ವಿಚಾರವಾಗಿ ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ ಬರೆದಿದೆ. ಪಾಸಪೋರ್ಟ್ ರದ್ದು ಮಾಡಬೇಕಾಗುತ್ತೆ. ಪಾಸ್‌ಪೋರ್ಟ್ ರದ್ದು ಮಾಡುವ ಅಧಿಕಾರ ಕೇಂದ್ರಕ್ಕೆ ಮಾತ್ರ ಇದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ತಿಳಿಸಿದರು.

- Advertisement -

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಈ ವಿಚಾರವಾಗಿ ಪಿಎಂಗೆ ಪತ್ರ ಬರೆದಿದ್ದಾರೆ. ತಕ್ಷಣ ಕೇಂದ್ರ ಸರ್ಕಾರ ಸ್ಪಂದನೆ ಮಾಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ವಿದೇಶದಲ್ಲಿರುವ ಸಂಸದ ಪ್ರಜ್ವಲ್‌ನನ್ನು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ದೇಶಕ್ಕೆ ವಾಪಸ್ ಆಗುವಂತೆ ಕರೆದಿದ್ದು ಅವರ ಕುಟುಂಬ ವಿಚಾರ. ಅವರು ವಿದೇಶದಿಂದ ವಾಪಸ್ ಬಂದು ತನಿಖೆಯನ್ನು ಎದುರಿಸಲಿ” ಎಂದು ಹೇಳಿದರು.

“ಎಚ್‌ಡಿಕೆ ಕುಟುಂಬದ ಪೋನ್ ಟ್ಯಾಪ್ ಮಾಡಿಲ್ಲ. ನಿಖರ ಮಾಹಿತಿ ಇದ್ದರೆ ಕೊಡಲಿ, ತನಿಖೆ ಮಾಡುತ್ತೇವೆ. ಈ ವಿಚಾರವಾಗಿ ಎಸ್‌ ಐಟಿ ನಿರಂತರ ತನಿಖೆ ಮಾಡುತ್ತಿದೆ. ಎಸ್‌ಐಟಿಗೆ ನಾವು ಫ್ರೀಡಂ ಕೊಟ್ಟಿದ್ದೇವೆ. ಸರ್ಕಾರಕ್ಕೆ ಬಹಳ ಕೆಲಸ ಇದೆ. ಇಷ್ಟು ದಿನ ಬರಗಾಲ ಇತ್ತು ನೀರು, ಮೇವು ಕೋಡಬೇಕಿತ್ತು. ಸರ್ಕಾರದ ಮುಂದೆ ಕೆಲಸ ಬಹಳ ಇದೆ” ಎಂದರು.

ಸರ್ಕಾರ ವಿಫಲವಾಗಿದೆ, ರಾಜ್ಯಪಾಲರು ವಜಾ ಮಾಡಬೇಕೆಂಬ ಬಿಜೆಪಿ ಆಗ್ರಹಕ್ಕೆ ಪ್ರತಿಕ್ರಿಯಿಸಿ, “ಒಂದು ವರ್ಷದಲ್ಲಿ ಸರ್ಕಾರ ಅನೇಕ ಸಾಧನೆ ಮಾಡಿದೆ. ಅಭಿವೃದ್ಧಿ, ನೀರಾವರಿ ಕೆಲಸಗಳು ನಿಂತಿಲ್ಲ. ಎಲ್ಲಿ ವಿಫಲರಾಗಿದ್ದೀವಿ ಅಂತ ಬಿಜೆಪಿಯವರು ಹೇಳಲಿ? ವಿಪಕ್ಷ ಆಗಿ ಸುಮ್ನೆ ಆರೋಪ ಮಾಡುವುದು ಸರಿಯಲ್ಲ” ಎಂದರು.

ರೇವ್‌ ಪಾರ್ಟಿ; ಗಾಂಜಾ, ಡ್ರಗ್ಸ್ ಹಾಗೂ ಸಿಂಥೆಟಿಕ್ ಡ್ರಗ್ಸ್ ಸಿಕ್ಕಿದೆ

ಬೆಂಗಳೂರು ನಗರದ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಫಾರ್ಮ್‌ ಹೌಸ್‌ನಲ್ಲಿ ನಡೆದ ರೇವ್‌ ಪಾರ್ಟಿಯ ಮೇಲೆ ಪೊಲೀಸ್ ದಾಳಿಯ ಸಂದರ್ಭದಲ್ಲಿ ಗಾಂಜಾ, ಡ್ರಗ್ಸ್ ಹಾಗೂ ಸಿಂಥೆಟಿಕ್ ಡ್ರಗ್ಸ್ ಸಿಕ್ಕಿದೆ ಎಂದು ಇದೇ ವೇಳೆ ಪರಮೇಶ್ವರ್ ತಿಳಿಸಿದರು.

“ರೇವ್ ಪಾರ್ಟಿಗೆ ಯಾವೆಲ್ಲಾ ವ್ಯಕ್ತಿಗಳು ಬಂದಿದ್ದರು ಎಂಬ ಮಾಹಿತಿ ಪೊಲೀಸರ ಬಳಿ ಇದೆ. ನಾನು ಕರ್ನಾಟಕವನ್ನು ಡ್ರಗ್ಸ್ ಫ್ರೀ ರಾಜ್ಯ ಮಾಡಬೇಕು ಎಂದಿದ್ದೇವೆ. ಸಾವಿರಾರು ಕೋಟಿ ಮೌಲ್ಯದ ಡ್ರಗ್ಸ್ ಈವರೆಗೆ ವಶಕ್ಕೆ ಪಡೆದುಕೊಂಡಿದ್ದೇವೆ. ಡ್ರಗ್ ಮಾಫಿಯಾವನ್ನು ಹತ್ತಿಕ್ಕುವ ಕೆಲಸ ಆಗುತ್ತಿದೆ” ಎಂದು ವಿವರಿಸಿದರು.

“ಗಾಂಜಾ ಎಲ್ಲಿಂದ ಬರುತ್ತದೆ ಅಂತ ಮಾಹಿತಿ ಆಧಾರದಲ್ಲಿ ಆರೋಪಿಗಳ ಬಂಧನ ಆಗುತ್ತಿದೆ. ಹೊರ ರಾಜ್ಯದಿಂದಲೂ ಗಾಂಜಾ ಪೂರೈಕೆ ಆಗುತ್ತಿದೆ. ಇದನ್ನು ಹಿಡಿಯಲು ಪ್ರತ್ಯೇಕ ಘಟಕ ಇದೆ. ಕೆಲವರು ಮನೆಯ ಟೆರೇಸ್‌ ಮೇಲೆ ಕೂಡ ಗಾಂಜಾ ಬೆಳೆಯುತ್ತಾರೆ. ಪೆಡ್ಲರ್ಸ್ ಯಾರಿದ್ದಾರೆ ಅವರನ್ನು ಹಿಡಿಯವುದು ಬಹಳ ಮುಖ್ಯ. ವಿದ್ಯಾರ್ಥಿಗಳ ಸೋಗಿನಲ್ಲಿ ಇಲ್ಲಿ ಬಂದು ಕೃತ್ಯ ಎಸಗುತ್ತಿದ್ದಾರೆ. ಅವರ ಮೇಲೆ ನಿಗಾ ಇಟ್ಟಿದ್ದೇವೆ” ಎಂದು ಮಾಹಿತಿ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಸ್ಲಿಮರನ್ನು ಗುರಿಯಾಗಿಸಿ ಮತದಾನದ ಹಕ್ಕು ಕಸಿಯುವ ತಂತ್ರವೇ ‘SIR’: ಶಿವಸುಂದರ್

“SIR ರದ್ದಾಗಬೇಕು; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂಬುದಷ್ಟೇ ನಮ್ಮ ಹೋರಾಟವಲ್ಲ,...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

SIR ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ INDIA ಮೈತ್ರಿಕೂಟ ಸಜ್ಜು; ಸಮನ್ವಯ ಸಮಿತಿ ರಚನೆಗೆ ನಿರ್ಧಾರ

ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಕರ್ನಾಟಕದಲ್ಲಿ INDIA ಮೈತ್ರಿಕೂಟದ...

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...