ಪ್ರಜ್ವಲ್‌ ಪ್ರಕರಣ | ದೇವರಾಜೇಗೌಡ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವೆ: ಸಚಿವ ಚಲುವರಾಯಸ್ವಾಮಿ

Date:

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ನನ್ನ ಯಾವ ಪಾತ್ರವೂ ಇಲ್ಲ. ದೇವರಾಜೇಗೌಡ ಅವರ ಮಾತುಗಳಿಗೆ ಮಾನ್ಯತೆ ಕೊಡುವ ಅಗತ್ಯವಿಲ್ಲ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ ಹೇಳಿದ್ದಾರೆ.

- Advertisement -

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಸಚಿವ ಎನ್‌ ಚಲುವರಾಯಸ್ವಾಮಿ ಪಾತ್ರ ಕೂಡ ಇದೆ ಎಂದು ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಆರೋಪಕ್ಕೆ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಸ್ಪಷ್ಟನೆ ನೀಡಿರುವ ಅವರು, “ದೇಜರಾಜೇಗೌಡ ಈಗಾಗಲೇ ಬಂಧಿತನಾಗಿದ್ದು, ಆರೋಪಿ ಸ್ಥಾನದಲ್ಲಿರುವುದರಿಂದ ರಾಜ್ಯದ ಜನರ ಗಮನ ಬೇರೆಡಗೆ ಸೆಳೆಯಲು ಈ ರೀತಿ ಕುತಂತ್ರದ ಆರೋಪ ಮಾಡಿದ್ದಾನೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಬೇರೆಯವರಿಗೆ ಪರೋಕ್ಷವಾಗಿ ಅನುಕೂಲ ಮಾಡಿಕೊಡಲು ನನ್ನ ಹಾಗೂ ನನ್ನ ಸಹೋದ್ಯೋಗಿ ಮಿತ್ರರಾದ ಡಿಕೆ ಶಿವಕುಮಾರ್‌, ಕೃಷ್ಣ ಬೈರೇಗೌಡ ಹಾಗೂ ಪ್ರಿಯಾಂಕ್‌ ಖರ್ಗೆ ಅವರ ಮೇಲೆ ಕೂಡ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ದೇವರಾಜೇಗೌಡ ಅವರ ಮಾತುಗಳಿಗೆ ಮಾನ್ಯತೆ ಕೊಡುವ ಅಗತ್ಯವಿಲ್ಲ” ಎಂದು ಹೇಳಿದ್ದಾರೆ.

“ಈಗಾಗಲೇ ನಾನು ದೇವರಾಜೇಗೌಡ ಅವರ ವಿರುದ್ಧ ಮಾನನಷ್ಟ ಮೊಕ್ಕದ್ದಮೆ ದಾಖಲಿಸಲು ನಿರ್ಧರಿಸಿರುವೆ. ಪ್ರಕರಣದ ಬಗ್ಗೆ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಸತ್ಯಾಂಶ ಆದಷ್ಟು ಬೇಗ ಹೊರ ಬರಲಿದೆ” ಎಂದು ಹೇಳಿದ್ದಾರೆ.

https://x.com/Chaluvarayaswam/status/1791693835971747993

ದೇವರಾಜೇಗೌಡ ಆರೋಪ ಏನು?

ಹಾಸನದ ನ್ಯಾಯಾಲಯದ ಬಳಿ ಪೊಲೀಸ್‌ ವಾಹನದ ಒಳಗಿನಿಂದಲೇ ಶುಕ್ರವಾರ ಸರ್ಕಾರದ ಹಲವು ಪ್ರಮುಖ ಸಚಿವರ ಮೇಲೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಸ್ಫೋಟಕ ಆರೋಪವನ್ನು ಮಾಡಿದ್ದರು.

ಅಶ್ಲೀಲ ವಿಡಿಯೋ ಪೆನ್‌ಡ್ರೈವ್‌ ಹಂಚಿಕೆ ವಿಷಯದಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೆಸರು ಹೇಳುವಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ತಮ್ಮನ್ನು ಕರೆಸಿ 100 ಕೋಟಿ ರೂ. ಆಫರ್‌ ನೀಡಿದ್ದರು ಎಂದು ಆರೋಪಿಸಿದ್ದರು.

ಅದಲ್ಲದೇ ಡಿಸಿಎಂ ಡಿಕೆ ಶಿವಕುಮಾರ್‌ ಜೊತೆ ಸಚಿವರಾದ ಎನ್‌ ಚಲುವರಾಯಸ್ವಾಮಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್‌ ಖರ್ಗೆ ಹಾಗೂ ಮತ್ತೊಬ್ಬ ಸಚಿವರು ಹಾಗೂ ಎಲ್‌ಆರ್‌ ಶಿವರಾಮೇಗೌಡ ಅವರ ಟೀಂ ಪೆನ್‌ಡ್ರೈವ್‌ ಪ್ರಕರಣದ ಹಿಂದೆ ಇದೆ ಎಂದು ಆರೋಪ ಮಾಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...