ಪ್ರಜ್ವಲ್ ಪ್ರಕರಣ | ನಾಲ್ಕು ಮಂತ್ರಿಗಳ ಕಮಿಟಿ ಮಾಡಿ, ಪೆನ್‌ಡ್ರೈವ್‌ ರೆಡಿ ಮಾಡಿದ್ದೇ ಡಿಕೆಶಿ: ದೇವರಾಜೇಗೌಡ ಹೊಸ ಆರೋಪ

Date:

Advertisements

ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಪೆನ್‌ಡ್ರೈವ್‌ ಪ್ರಕರಣದ ಬಗ್ಗೆ ವಕೀಲ ದೇವರಾಜೇಗೌಡ ಹೊಸ ಹೇಳಿಕೆ ನೀಡುವ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. “ನಾಲ್ಕು ಮಂತ್ರಿಗಳ ಕಮಿಟಿ ಮಾಡಿ, ಪೆನ್‌ಡ್ರೈವ್‌ ರೆಡಿ ಮಾಡಿದ್ದೇ ಡಿ.ಕೆ.ಶಿವಕುಮಾರ್‌” ಎಂದು ಗಂಭೀರ ಆರೋಪ ಮಾಡಿದ್ದಾರೆ.

ಹಾಸನ ಜೆಎಂಎಫ್‌ಸಿ ಕೋರ್ಟ್‌ ಹೊರಗೆ ಪೊಲೀಸ್‌ ವ್ಯಾನ್‌ನೊಳಗಿದ್ದ ವೇಳೆಯಲ್ಲಿಯೇ ವಕೀಲ ದೇವರಾಜೇಗೌಡ ಮಾಧ್ಯಮದವರೊಂದಿಗೆ ಮಾತನಾಡಿದ್ದು, “ಎಲ್.ಆರ್. ಶಿವರಾಮೇಗೌಡ ಮೂಲಕ 100 ಕೋಟಿ ರೂಪಾಯಿ ಆಫರ್ ಮಾಡಿದ್ದರು. ಡಿ.ಕೆ. ಶಿವಕುಮಾರ್ ನೇರವಾಗಿ ನನ್ನ ಜೊತೆಗೆ ಮಾತನಾಡಿಲ್ಲ” ಎಂದು ಹೇಳಿದರು.

“ಡಿ.ಕೆ.ಶಿವಕುಮಾರ್ ಅವರು ನನ್ನನ್ನು ಕರೆಸಿ ಮಾತನಾಡಿದ್ದರು. ನೀನು ಎಚ್.ಡಿ.ಕುಮಾರಸ್ವಾಮಿ ಅವರ ಮೇಲೆ ಹೇಳು. ಪೆನ್‌ಡ್ರೈವ್‌ನ ಕುಮಾರಸ್ವಾಮಿ ಹಂಚಿದ್ದರು ಅಂತ ಹೇಳು. ನಿನಗೆ ಸಮಸ್ಯೆ ಆಗಲ್ಲ. ಸೆಕ್ಯೂರ್ ಮಾಡ್ತೀನಿ ಅಂತ ಭರವಸೆ ನೀಡಿದ್ದರು” ಎಂದು ದೇವರಾಜೇಗೌಡ ಆರೋಪಿಸಿದ್ದಾರೆ.

Advertisements

“ದೊಡ್ಡಮಟ್ಟದ ಹಣದ ಆಫರ್ ಕೊಟ್ಟರು. ಕಾರ್ತಿಕ್ ಕರೆಸಿಕೊಂಡು ಸಂಪೂರ್ಣ ಮಾಹಿತಿ ಪಡೆದು ಪೆನ್‌ಡ್ರೈವ್ ರೆಡಿ ಮಾಡಿದ್ದೇ ಡಿ.ಕೆ.ಶಿವಕುಮಾರ್. ನಾಲ್ಕು ಜನ ಮಂತ್ರಿಗಳ ಕಮಿಟಿ ಮಾಡಿದ್ದರು. ಚಲುವರಾಯಸ್ವಾಮಿ, ಕೃಷ್ಣಬೈರೇಗೌಡ, ಪ್ರಿಯಾಂಕ್‌ ಖರ್ಗೆ ಮತ್ತು ಇನ್ನೊಬ್ಬ ಸಚಿವರು. ನಾಲ್ಕು ಮಂತ್ರಿಗಳ ತಂಡ ರಚನೆ ಮಾಡಿ ಇದನ್ನು ನೋಡಿಕೊಳ್ಳಲೆಂದು ಬಿಟ್ಟಿದ್ದರು” ಎಂದು ದೂರಿದ್ದಾರೆ.

“ನಾನು ಒಪ್ಪದೇ ಇದ್ದಾಗ, ಈಗಾಗಲೇ ದೊಡ್ಡ ಹಗರಣ ಆಗಿರುವುದರಿಂದ ಮೋದಿಗೆ, ಬಿಜೆಪಿಗೆ, ಕುಮಾರಸ್ವಾಮಿಗೆ ಕೆಟ್ಟ ಹೆಸರು ತರಲು ಮಾಡಿದ್ರು. ನನಗೆ ಸುಮಾರು ನೂರು ಕೋಟಿ ಆಫರ್ ಕೊಟ್ರು. ಐದು ಕೋಟಿ ರೂಪಾಯಿ ಅಡ್ವಾನ್ಸ್ ದುಡ್ಡನ್ನು ಬೌರಿಂಗ್ ಕ್ಲಬ್‌ನ 110 ರೂಂಗೆ ಕಳಿಸಿದ್ದರು” ಎಂದು ತಿಳಿಸಿದ್ದಾರೆ.

“ಚನ್ನರಾಯಪಟ್ಟಣದ ಗೋಪಾಲಸ್ವಾಮಿ ಅವರನ್ನು ಸಂಧಾನಕ್ಕೆ ಕಳುಹಿಸಿದ್ದರು. ಐದು ಕೋಟಿ ಕ್ಯಾಶ್ ಕೊಟ್ಟು ಡಿಕೆಶಿ ಕಳಿಸಿದ್ದರು. ದೇಶದಲ್ಲಿ ಮೋದಿಯವರಿಗೆ ಕಳಂಕ ತರಬೇಕು. ರಾಸಲೀಲೆ ಹಗರಣದಲ್ಲಿ ಮೋದಿಯವರನ್ನು ಬಿಂಬಿಸಿ ಬಿಜೆಪಿಗೆ ಕೆಟ್ಟ ಹೆಸರು ತರಬೇಕು ಅಂತ ಮಾಡಿದರು. ಡಿ.ಕೆ.ಶಿವಕುಮಾರ್ ಮುಖ್ಯ ಉದ್ದೇಶ ಎಚ್.ಡಿ.ಕುಮಾರಸ್ವಾಮಿ ನಾಯಕತ್ವವನ್ನು ರಾಜ್ಯದಲ್ಲಿ ಹಾಳು ಮಾಡಬೇಕು ಎನ್ನುವುದು. ಇದು ಸತ್ಯ. ನಾನು ಹೊರಗಡೆ ಬಂದರೆ ಸರ್ಕಾರ ಪತನವಾಗಲಿದೆ” ಎಂದು ದೇವರಾಜೇಗೌಡ ಪೊಲೀಸ್ ವ್ಯಾನ್‌ನೊಳಗಿನಿಂದಲೇ ಕುಳಿತುಕೊಂಡು ಸುಮಾರು ಮೂರು ನಿಮಿಷ ಹೇಳಿಕೆ ನೀಡಿದ್ದಾರೆ.

ಈ ಹೇಳಿಕೆಯನ್ನು ಟ್ವೀಟ್ ಮಾಡಿರುವ ಜೆಡಿಎಸ್ ಐಟಿ ಸೆಲ್, , “CD ಶಿವಕುಮಾರ್ ಪೆನ್‌ಡ್ರೈವ್ ಗ್ಯಾಂಗ್” ಆರೋಪ ಮಾಡಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X