ಪ್ರಜ್ವಲ್ ಪ್ರಕರಣ | ಉಪ್ಪು ತಿಂದವನು ನೀರು ಕುಡಿಯಲೇಬೇಕು: ಎಚ್ ಡಿ ಕುಮಾರಸ್ವಾಮಿ

Date:

ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಪ್ರಕರಣದ ತನಿಖೆಯನ್ನು ಎಸ್​ಐಟಿಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಈ ಬಗ್ಗೆ ಪ್ರಜ್ವಲ್ ರೇವಣ್ಣ ಅವರ ಚಿಕ್ಕಪ್ಪ, ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಮಾಧ್ಯಮಗಳ ಜೊತೆ ಮಾತನಾಡಿದ್ದು, “ಉಪ್ಪು ತಿಂದವನು ನೀರು ಕುಡಿಯಲೇಬೇಕು” ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, “ನಾನಾಗಲಿ ದೇವೇಗೌಡರಾಗಲಿ ಎಂದೂ ಸಹ ಹೆಣ್ಣು ಮಕ್ಕಳ ವಿಚಾರದಲ್ಲಿ ಅತ್ಯಂತ ಗೌರವಯುತವಾಗಿ ನಡೆದುಕೊಂಡಿದ್ದೇವೆ. ಯಾರಾದರೂ ಕಷ್ಟ ಹೇಳಿಕೊಂಡು ಬಂದರೆ ಅವರ ಕಷ್ಟ ಪರಿಹರಿಸಿ ಕಳುಹಿಸಿದ್ದೇವೆ. ನಾವಂತೂ ಮಹಿಳೆಯರಿಗೆ ಅತ್ಯಂತ ಹೆಚ್ಚಿನ ಗೌರವ ನೀಡಿದ್ದೇವೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಈ ಬಗ್ಗೆ ಎಸ್ಐಟಿ ತನಿಖೆಗೆ ಈಗಾಗಲೇ ಸರ್ಕಾರ ಆದೇಶ ಮಾಡಿದೆ. ಎಸ್‌ಐಟಿ ತನಿಖೆಯಿಂದ ವಾಸ್ತವಾಂಶ ಹೊರಗೆ ಬರಲಿ. ಈ ನೆಲದ ಕಾನೂನಿನಲ್ಲಿ ಯಾರೇ ತಪ್ಪು ಮಾಡಿದರು ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ನಾವಂತೂ ಯಾವುದಕ್ಕೂ ತಪ್ಪು ಮಾಡಿದ ವಿಷಯದಲ್ಲಿ ಯಾರಿಗೂ ಕ್ಷಮಿಸುವ ಪ್ರಶ್ನೆಯಿಲ್ಲ. ತನಿಖೆಯ ವರದಿ ಸಂಪೂರ್ಣ ಹೊರಗೆ ಬರಲಿ ಬಂದ ನಂತರ ಮಾತನಾಡುತ್ತೇನೆ” ಎಂದು ಹೇಳಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಹಿರಂಗ ಚರ್ಚೆಗೆ ಸಿದ್ಧ ಎಂದ ರಾಹುಲ್ ಗಾಂಧಿ; ಬರುವರೇ ಮೋದಿ?

ಬಿಜೆಪಿ ಮತ್ತು ಕಾಂಗ್ರೆಸ್‌ ನಡುವಿನ ಆರೋಪ-ಪ್ರತ್ಯಾರೋಪಗಳನ್ನು ಗಮನಿಸಿರುವ ಮಾಜಿ ನ್ಯಾಯಾಧೀಶರು ಮತ್ತು...

ಪಂಜಾಬ್ | ಚುನಾವಣಾ ಸ್ಪರ್ಧೆಯಲ್ಲಿ ಪಕ್ಷಾಂತರಿಗಳ ದರ್ಬಾರ್

ಪಂಜಾಬ್‌ನಲ್ಲಿ ನಾಲ್ಕು ಪ್ರಮುಖ ರಾಜಕೀಯ ಪಕ್ಷಗಳು - ಎಎಪಿ, ಬಿಜೆಪಿ, ಕಾಂಗ್ರೆಸ್...

ಅತ್ಯಾಚಾರ ಪ್ರಕರಣ | ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ

ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಂಧಿತನಾಗಿರುವ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡಗೆ...

ವಿಧಾನ ಪರಿಷತ್ ಚುನಾವಣೆ | ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ: ಒಂದು ಕ್ಷೇತ್ರ ಜೆಡಿಎಸ್‌ಗೆ

ಕರ್ನಾಟಕ ವಿಧಾನಪರಿಷತ್‌ನಲ್ಲಿ ಖಾಲಿ ಇರುವ ಆರು ಸ್ಥಾನಗಳಿಗೆ ಜೂನ್ 3ರಂದು ಮತದಾನ...