‌ಪ್ರಜ್ವಲ್‌ ಪ್ರಕರಣ | ತ್ವರಿತಗತಿಯಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ: ಗೃಹ ಸಚಿವ ಪರಮೇಶ್ವರ್‌

Date:

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ಎಸ್ಐಟಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು‌.

- Advertisement -

ಸದಾಶಿವನಗರದ ತಮ್ಮ ನಿವಾಸದ ಬಳಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದ ತಂಡ ಪ್ರಕರಣದ ತನಿಖೆಯನ್ನು ಕೈಗೊಂಡಿದೆ. ಪೆನ್‌ಡ್ರೈವ್‌ಗಳನ್ನು ವಶಪಡಿಸಿಕೊಂಡು ವೈಜ್ಞಾನಿಕ ವರದಿಗಾಗಿ ಎಫ್‌ಎಸ್‌ಎಲ್‌ಗೆ ರವಾನಿಸಲಿದ್ದಾರೆ‌. ಸಾಕ್ಷಿಗಳ ಹೇಳಿಕೆಯನ್ನು ಪಡೆಯಲಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಎಸ್ಐಟಿ ತಂಡವು ಮುಕ್ತವಾಗಿ ಕೆಲಸ ಮಾಡಲಿದೆ. ಪ್ರಕರಣದ ವರದಿ ಸಲ್ಲಿಸಲು ಯಾವುದೇ ರೀತಿಯ ಸಮಯ ನಿಗಧಿಪಡಿಸಿಲ್ಲ. ತನಿಖೆ ವಿಳಂಬವಾಗಬಾರದು ಎಂಬ ದೃಷ್ಟಿಯಿಂದ ತ್ವರಿತಗತಿಯಲ್ಲಿ ತನಿಖೆ ನಡೆಸುವಂತೆ ಮೌಖಿಕವಾಗಿ ತಿಳಿಸಲಾಗಿದೆ. ವರದಿಯನ್ನು ನಾಳೆಯೇ ಕೊಡಿ, ನಾಡಿದ್ದು ಕೊಡಿ ಎಂದು ದಿನ ನಿಗಧಿಪಡಿಸಿಲ್ಲ” ಎಂದು ಸ್ಪಷ್ಟಪಡಿಸಿದರು.

“ಮಹಿಳಾ ಆಯೋಗವು ಬರೆದ ಪತ್ರದ ಆಧಾರದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ರೀತಿಯ ದೂರುಗಳನ್ನು ಎಸ್‌ಐಟಿ ಪಡೆಯಲಿದೆ. ಸಂತ್ರಸ್ತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಎಸ್‌ಐಟಿ ಕೆಲಸ ಮಾಡಲಿದೆ. ಸಂತ್ರಸ್ತರಿಗೆ ಜೀವ ಭಯವಿದ್ದರೆ ಪೊಲೀಸ್ ಭದ್ರತೆ ನೀಡಲಾಗುವುದು” ಎಂದು ತಿಳಿಸಿದರು‌.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...