ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ | ಎಸ್‌ಐಟಿ ತಂಡದ ವಿರುದ್ಧವೇ ದೂರು ದಾಖಲಿಸುವೆ: ವಕೀಲ ದೇವರಾಜೇಗೌಡ

Date:

Advertisements

ಸಂಸದ ಪ್ರಜ್ವಲ್‌ ಮತ್ತು ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಯರ ಕಣ್ಣೀರು ಒರೆಸುವ ಬದಲು ರಾಜಕೀಯ ತೆವಲಿಗಾಗಿ ಬೇಕಾಬಿಟ್ಟಿ ಹೇಳಿಕೆಗಳನ್ನು ಜನಪ್ರತಿನಿಧಿಗಳು ಮತ್ತು ಈ ಪ್ರಕರಣದಲ್ಲಿ ಸಾಕ್ಷಿಗಳಾಗಿರುವವರು ನೀಡುತ್ತಿದ್ದಾರೆ.

ಪ್ರಜ್ವಲ್‌ ಪೆನ್‌ ಡ್ರೈವ್‌ ಪ್ರಕರಣ ಬಗ್ಗೆ ಮೊದಲು ರಾಜ್ಯದ ಗಮನಕ್ಕೆ ತಂದಿದ್ದ ಹಾಗೂ ಬಿಜೆಪಿ ಹೈಕಮಾಂಡ್‌ಗೆ ಪತ್ರ ಬರೆದು ಮನವರಿಕೆ ಮಾಡಿದ್ದ ಬಿಜೆಪಿ ನಾಯಕ ಮತ್ತು ವಕೀಲ ದೇವರಾಜೇಗೌಡ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ.

ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಬುಧವಾರ ತುರ್ತು ಸುದ್ದಿಗೋಷ್ಠಿ ಕರೆದು ಮಾತನಾಡಿದ ವಕೀಲ ದೇವರಾಜೇಗೌಡ, “ಪ್ರಜ್ವಲ್‌ ಪೆನ್‌ ಡ್ರೈವ್‌ ಪ್ರಕರಣ ಇನ್ನೂ ಎಸ್‌ಐಟಿಗೆ ಹಸ್ತಾಂತರವೇ ಆಗಿಲ್ಲ. ಕಿಡ್ನಾಪ್‌ ಮತ್ತು ಅತ್ಯಾಚಾರ ಆರೋಪವಾಗಿ ಎಸ್‌ಐಟಿ ತನಿಖೆ ನಡೆಸುತ್ತಿದೆ. ಈ ತನಿಖೆ ಏಕಮುಖವಾಗಿ ಮಾತ್ರ ನಡೆಯುತ್ತಿದ್ದು, ಪೆನ್‌ ಡ್ರೈವ್‌ ಹಂಚಿಕೆ ಮಾಡಿದವರನ್ನು ಈವರೆಗೂ ಬಂಧಿಸಿಲ್ಲ. ಹೀಗಾಗಿ ಗುರುವಾರ ಎಸ್‌ಐಟಿ ತನಿಖಾ ತಂಡದ ವಿರುದ್ಧವೇ ಪ್ರಕರಣ ದಾಖಲಿಸುತ್ತೇನೆ” ಎಂದರು.

Advertisements

“ಯಾವುದೇ ನಾಯಕರಿಗಾಗಲಿ, ರಾಜ್ಯ ಸರ್ಕಾರಕ್ಕಾಗಲಿ ನಾನು ಹೆದರುವುದಿಲ್ಲ. ರೇವಣ್ಣವರ ಬಂಧನದಿಂದ ರಾಷ್ಟ್ರೀಯ ಮಟ್ಟದಲ್ಲಿ ಒಕ್ಕಲಿಗ ಸಮುದಾಯ ತಲೆತಗ್ಗಿಸುವಂತಾಗಿದೆ. ಐದಾರು ಸಚಿವರು ತಮ್ಮ ನಾಯಕನ ರಕ್ಷಣೆಗೆ ರಾಜ್ಯದ ಮೂಲೆ ಮೂಲೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ” ಎಂದರು.

“ಪೆನ್‌ಡ್ರೈವ್‌ ಹಂಚಿದ ಕಾರ್ತಿಕ್‌ ಪರವಾಗಿ ಈ ಹಿಂದೆ ನಾನು ವಕಾಲತ್ತು ವಹಿಸಿದ್ದೆ. ಅದು ಅವನ ಪತ್ನಿಗೆ ಅನ್ಯಾಯವಾಗಿರುವ ಪ್ರಕರಣ. ಆಗ ನನಗೆ ಕಾರ್ತಿಕ ಪೆನ್‌ ಡ್ರೈವ್‌ ಕೊಟ್ಟಿದ್ದ. ಅದನ್ನು ನಾನು ಈವರಗೂ ತೆಗೆದು ನೋಡಿಲ್ಲ” ಎಂದು ಹೇಳಿದರು.

“ಹಾಸನದ ಗಡಿ ಭಾಗದಲ್ಲಿ ಸಂತ್ರಸ್ತೆ ಮಹಿಳೆಯರಿಗೆ ಪೆನ್‌ ಡ್ರೈವ್‌ ಸಿಕ್ಕವರು ಕಾಲ್‌ ಮಾಡಿ ಬ್ಲ್ಯಾಕ್‌ ಮೇಲ್‌ ಮಾಡುತ್ತಿದ್ದಾರೆ. ಈ ಬಗ್ಗೆ ಈಗಾಗಲೇ ಇಬ್ಬರು ಸಂತ್ರಸ್ತೆಯರು ಪ್ರಕರಣ ದಾಖಲಿಸಿದ್ದಾರೆ. ಸಂತ್ರಸ್ತೆಯರ ಪರವಾಗಿ ಇಡೀ ವಕೀಲ ಸಮೂಹ ಇದೆ. ಯಾರೂ ಎದೆಗುಂದಬೇಡಿ” ಎಂದರು.

“ನನ್ನ ಮೇಲೆಯೂ ಹನಿ ಟ್ರ್ಯಾಪ್ ಪ್ರಯತ್ನ ನಡೆದಿತ್ತು. ಆದರೆ ಅದು ವಿಫಲವಾಗಿದೆ. ಪೆನ್‌ ಡ್ರೈವ್‌ ಪ್ರಕರಣದಲ್ಲಿ ರಾಜಕೀಯ ಷಡ್ಯಂತ್ರ ಎದ್ದು ಕಾಣುತ್ತಿದೆ. ನನ್ನ ಹೋರಾಟ ಸರ್ಕಾರದ ವಿರುದ್ಧ ಅಲ್ಲ. ಯಾವುದೇ ನಾಯಕರ ವಿರುದ್ಧವಲ್ಲ. ವಕೀಲನಾಗಿ ನ್ಯಾಯದ ಪರವಾಗಿ ಹೋರಾಟ ಮಾಡುತ್ತಿರುವೆ” ಎಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

Download Eedina App Android / iOS

X