ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ | ಕೆಲವೇ ಹೊತ್ತಲ್ಲಿ ಎಸ್‌ಐಟಿ ರಚನೆ: ಡಾ. ಜಿ ಪರಮೇಶ್ವರ್‌

Date:

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಇನ್ನು ಕೆಲವೇ ಹೊತ್ತಲ್ಲಿ ಅಧಿಕೃತವಾಗಿ ವಿಶೇಷ ತನಿಖಾ ತಂಡ ರಚನೆಯಾಗಲಿದೆ. ಹಿರಿಯ ಪೊಲೀಸ್ ಅಧಿಕಾರಿ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ನಡೆಸುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

“ಮಹಿಳಾ ಆಯೋಗದಿಂದ ಬಂದಿರುವ ಪತ್ರದ ಹಿನ್ನೆಲೆಯಲ್ಲಿ ತನಿಖೆಗೆ ಸೂಚಿಸಿದ್ದೇವೆ. ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಿರುವ ಬಗ್ಗೆ ಮಾಹಿತಿ ಇದೆ. ಸಂತ್ರಸ್ತ ಮಹಿಳೆಯರನ್ನು ಮಹಿಳಾ ಆಯೋಗ ಸಂಪರ್ಕಿಸುತ್ತಿದೆ. ಎಸ್‌ಐಟಿ ರಚನೆಯಾದ ಮೇಲೆ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ಕೊಟ್ಟು ತನಿಖೆ ಮಾಡುತ್ತೇವೆ” ಎಂದು ಹೇಳಿದರು.

“ಯಾವುದೇ ಸರ್ಕಾರದ ಹಸ್ತಾಕ್ಷೇಪ ಇಲ್ಲದೆ ಈ ಪ್ರಕರಣ ತನಿಖೆಯಾಗಲಿದೆ. ಪ್ರಜ್ವಲ್ ರೇವಣ್ಣಗೆ ನೋಟಿಸ್‌ ಕೊಡುವ ವಿಚಾರ ಎಸ್‌ಐಟಿ ಅಧಿಕಾರಿಗಳಿಗೆ ಬಿಟ್ಟದ್ದು” ಎಂದು ಹೇಳಿದರು.

ಸಿಎಂ ಶಿಫಾರಸ್ಸು

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಗುರುವಾರ ಪತ್ರ ಬರೆದಿದ್ದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ, ಹಾಸನ ಜಿಲ್ಲೆಯ ಪ್ರಭಾವಿ ರಾಜಕಾರಣಿಯೊಬ್ಬ ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಅದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿರುವ ಆರೋಪದ ಬಗ್ಗೆ ತನಿಖೆ ನಡೆಸಲು ಎಸ್‌ಐಟಿ ರಚಿಸುವಂತೆ ಶಿಫಾರಸು ಮಾಡಿದ್ದರು.

ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ವಿಡಿಯೊ ತುಣುಕುಗಳನ್ನು ಗಮನಿಸಿದರೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಈ ಕಾರಣದಿಂದ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ. ಈ ಮಧ್ಯೆ ಪ್ರಜ್ವಲ್‌ ರೇವಣ್ಣ ಜರ್ಮನ್ ದೇಶಕ್ಕೆ ತೆರಳಿದ್ದಾರೆ ಎಂಬ ಮಾಹಿತಿ ಪೊಲೀಸರಿಂದ ಲಭ್ಯವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿಎಂಸಿ ಚಿಹ್ನೆ ಮುಟ್ಟುಗೋಲು: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಟಿಎಂಸಿ ಪಕ್ಷದ ಆಂತರಿಕ ಭಿನ್ನಮತ ಮತ್ತು ಬಂಡಾಯದ ಬಳಿಕ ಚುನಾವಣಾ ಆಯೋಗವು...

ಐದು ದಿನಗಳಲ್ಲಿ 12 ಮಸೂದೆಗಳಿಗೆ ರಾಜ್ಯಪಾಲರ ಅಂಕಿತ: ತಮಿಳು ಸರ್ಕಾರ–ರಾಜಭವನ ಸಂಬಂಧದಲ್ಲಿ ಹೊಸ ತಿರುವು

ಡಿಎಂಕೆ ಆಡಳಿತವಿದ್ದಾಗ ಮಸೂದೆಗಳು, ವಿಶ್ವವಿದ್ಯಾಲಯಗಳು ಹಾಗೂ ರಾಜ್ಯಪಾಲರ ಅಧಿಕಾರದ ವಿಚಾರದಲ್ಲಿ ನಿರಂತರ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಭೂಮಿ ಹಕ್ಕು ವೇದಿಕೆ ಹೇಳುವುದೇನು?

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA)...