ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ‌ | ಯಾವುದೇ ಆರೋಪಿಗೆ ಸರ್ಕಾರ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ: ಸಚಿವ ಈಶ್ವರ ಖಂಡ್ರೆ

Date:

ಪೆನ್ ಡ್ರೈವ್ ಪ್ರಕರಣದ ಯಾವುದೇ ಆರೋಪಿಗೆ ಸರ್ಕಾರ ಬೆಂಬಲ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಪ್ರತಿಪಕ್ಷಗಳು ಅನಗತ್ಯವಾಗಿ ಸರ್ಕಾರದ ಮೇಲೆ ಆರೋಪ ಮಾಡುತ್ತಿವೆ. ಇದಕ್ಕೆ ಯಾವುದೇ ಆಧಾರ ಇಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.

ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ ಅತ್ಯಂತ ಹೇಯ ಕೃತ್ಯ. ಈ ಪ್ರಕರಣ ಈಗ ದೇಶದಾದ್ಯಂತ ಚರ್ಚೆಯ ವಸ್ತುವಾಗಿದೆ. ಈ ಪ್ರಕರಣದ ತನಿಖೆಯನ್ನು ಎಸ್.ಐ.ಟಿ. ಗೆ ವಹಿಸಲಾಗಿದ್ದು, ಪ್ರಾಮಾಣಿಕವಾಗಿ ಅಧಿಕಾರಿಗಳು ತಮ್ಮ ಕಾರ್ಯ ಮಾಡುತ್ತಿದ್ದಾರೆ. ಈ ಹಂತದಲ್ಲಿ ಅನುಮಾನ ವ್ಯಕ್ತಪಡಿಸುವುದು, ಅನಗತ್ಯ ಆರೋಪ ಮಾಡುವುದು ಸರಿಯಲ್ಲ” ಎಂದರು.

“ಪ್ರತಿಪಕ್ಷ ನಾಯಕರುಗಳು ತನಿಖೆಯ ದಿಕ್ಕು ತಪ್ಪಿಸಲು ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಜನರಲ್ಲಿ ಗೊಂದಲ ಉಂಟು ಮಾಡುವ ಕಾರ್ಯ ಮಾಡುತ್ತಿದ್ದಾರೆ. ಹಲವು ಮಹಿಳೆಯರು ಈಗಾಗಲೇ ಅತ್ಯಾಚಾರದ ದೂರು ದಾಖಲಿಸಿದ್ದು, ಪ್ರಮುಖ ಆರೋಪಿಗೆ ಶಿಕ್ಷೆ ಆಗಬೇಕೋ ಬೇಡವೋ” ಎಂದು ಪ್ರಶ್ನಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಪ್ರತಿಪಕ್ಷದವರಿಗೆ ಬದ್ಧತೆ ಇದ್ದರೆ ಪ್ರಜ್ವಲ್ ರೇವಣ್ಣನನ್ನು ಕರೆತಂದು ಪೊಲೀಸರಿಗೆ ಒಪ್ಪಿಸಬೇಕು, ತೋರಿಕೆಗೆ 48 ಗಂಟೆಯಲ್ಲಿ ಬಂದು ಬಿಡಿ ಎಂದು ಹೇಳಿದರೆ ಆಗದು. ಪ್ರಕರಣದ ಪ್ರಮುಖ ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು. ಸಂತ್ರಸ್ತರಿಗೆ ನ್ಯಾಯ ಸಿಗಬೇಕು. ಈ ನೆಲದ ಕಾನೂನು ಎಲ್ಲರಿಗೂ ಒಂದೇ” ಎಂದರು.

“ಪ್ರಜ್ವಲ್ ರೇವಣ್ಣಗೆ ನೀಡಲಾಗಿರುವ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡುವಂತೆ ಕೋರಿ ರಾಜ್ಯದಿಂದ ಪತ್ರ ಬರೆಯಲಾಗಿದೆ. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡು, ಇಂಟರ್ ಪೋಲ್ ನೆರವಿನಿಂದ ಆರೋಪಿಯ ಬಂಧನಕ್ಕೆ ಸಹಕಾರ ನೀಡಬೇಕು” ಎಂದು ಈಶ್ವರ ಖಂಡ್ರೆ ಒತ್ತಾಯಿಸಿದರು.

ಅರಣ್ಯಭೂಮಿ ತೆರವು

“ಬೆಂಗಳೂರು ನಗರದ ಬನಶಂಕರಿ ಬಳಿಯ ಬಿ.ಎಂ.ಕಾವಲ್ ಸರ್ವೆ ನಂ. 92ರಲ್ಲಿ ಒತ್ತವರಿ ಮಾಡಲಾಗಿದ್ದ ಸುಮಾರು 60 ಕೋಟಿ ರೂ. ಮೌಲ್ಯದ 5 ಎಕರೆ ಅರಣ್ಯಭೂಮಿಯನ್ನು ತೆರವು ಮಾಡಲಾಗಿದೆ” ಎಂದು ಇದೇ ವೇಳೆ ಮಾಹಿತಿ ನೀಡಿದರು.

“ಕಳೆದ ವಾರ ಅರಣ್ಯ ಭವನದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಈಗಾಗಲೇ ಆದೇಶ ಆಗಿರುವ ಪ್ರಕರಣಗಳಲ್ಲಿ ಒತ್ತುವರಿಯನ್ನು ತೆರವುಗೊಳಿಸುವಂತೆ ನೀಡಿದ್ದ ಸ್ಪಷ್ಟ ಸೂಚನೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಕಾರ್ಯಪ್ರವೃತ್ತರಾದ ಬೆಂಗಳೂರು ಅರಣ್ಯಾಧಿಕಾರಿಗಳು 5.2 ಎಕರೆ ಒತ್ತುವರಿ ತೆರವು ಮಾಡಿಸಿರುವುದಾಗಿ ಮಾಹಿತಿ ನೀಡಿದ್ದಾರೆ” ಎಂದು ತಿಳಿಸಿದರು.

“ಬಿ.ಎಂ. ಕಾವಲ್ ವ್ಯಾಪ್ತಿಯ ಗೊಟ್ಟೆಗೆರೆಪಾಳ್ಯದ ವೆಂಕಟಪ್ಪ ಮತ್ತು ಅವರ ತಾಯಿ ತಿಮ್ಮಕ್ಕ ಎಂಬುವವರು 5 ಎಕರೆ 20 ಗುಂಟೆ ಅರಣ್ಯ ಭೂಮಿ ಒತ್ತುವರಿ ಮಾಡಿದ್ದರು. ಎ.ಸಿ.ಎಫ್. ನ್ಯಾಯಾಲಯದ ಆದೇಶದ ಮೇರೆಗೆ ಈ ಭೂಮಿ ತೆರವು ಮಾಡಲಾಗಿದೆ. ಈ ಸಂಬಂಧ ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ಪ್ರತಿವಾದಿಗಳು ಹಾಕಿದ್ದ ದಾವೆ ವಜಾ ಆಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ” ಎಂದರು.

ಜನರ ವಿಶ್ವಾಸ ಇಮ್ಮಡಿ

“ಈ ಬಾರಿ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಎಲ್ಲಿಯೂ ಮೋದಿ ಅಲೆ ಕಾಣಲೇ ಇಲ್ಲ.ಬದಲಾಗಿ ಗ್ಯಾರಂಟಿ ಅಲೆ ಎಲ್ಲೆಡೆ ಪಸರಿಸಿದ್ದು, ಕಾಂಗ್ರೆಸ್ ಕನಿಷ್ಠ 20 ಸ್ಥಾನಗಳಲ್ಲಿ ಜಯ ಸಾಧಿಸಲಿದೆ. ನಮ್ಮ ಸರ್ಕಾರಕ್ಕೆ ಒಂದು ವರ್ಷ ತುಂಬಿದೆ. ಈ ಅವಧಿಯಲ್ಲಿ ಪಾರದರ್ಶಕ ಮತ್ತು ಜನಪರವಾದ ಆಡಳಿತವನ್ನು ನೀಡಿದ್ದು, ಜನರ ವಿಶ್ವಾಸ ಇಮ್ಮಡಿಯಾಗಿದೆ. ಇದು ಚುನಾವಣೆಯ ಫಲಿತಾಂಶದಲ್ಲೂ ಪ್ರತಿಫಲಿಸಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಲ್ಮೀಕಿ ನಿಗಮ ಅಕ್ರಮ | ಜಾರಿ ನಿರ್ದೇಶನಾಲಯದಿಂದ ಪ್ರತ್ಯೇಕ ತನಿಖೆ ಆರಂಭ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣವನ್ನು ಜಾರಿ...

ಯುವಕನಿಗೆ ಲೈಂಗಿಕ ದೌರ್ಜನ್ಯ ಪ್ರಕರಣ | ಎಂಟು ದಿನ ಸಿಐಡಿ ಕಸ್ಟಡಿಗೆ ಸೂರಜ್ ರೇವಣ್ಣ

ಯುವಕನೋರ್ವನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಶಾಸಕ ಎಚ್ ಡಿ...

ಲೈಂಗಿಕ ದೌರ್ಜನ್ಯ ಪ್ರಕರಣ | ಜುಲೈ 8ರವರೆಗೆ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ

ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಜೂನ್‌ 19ರಿಂದ ನಾಲ್ಕು...

ರೈತರೊಂದಿಗೆ ಉದ್ದಿಮೆದಾರರಿಂದ ನೇರ ಖರೀದಿ ವ್ಯವಸ್ಥೆಗೆ ಚಿಂತನೆ: ಸಚಿವ ಚಲುವರಾಯಸ್ವಾಮಿ

ಕೃಷಿ ನವೋದ್ಯಮಗಳ ಪ್ರೋತ್ಸಾಹ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ಸದಾ ಸಿದ್ದವಿದೆ. ರೈತರೊಂದಿಗೆ...