ಪ್ರಜ್ವಲ್‌-ರೇವಣ್ಣ ಪ್ರಕರಣ | ರಾಜ್ಯವೇ ತಲೆ ತಗ್ಗಿಸುವ ಘಟನೆ, ರೇವಣ್ಣಗೆ ಜಾಮೀನು ಸಿಕ್ಕಿದ್ದಕ್ಕೆ ಸಂತಸವಿಲ್ಲ: ಕುಮಾರಸ್ವಾಮಿ

Date:

ಎಚ್‌ ಡಿ ರೇವಣ್ಣ ಅವರಿಗೆ ಜಾಮೀನು ದೊರೆತಿರುವುದು, ಜೈಲಿನಿಂದ ಬಿಡುಗಡೆಯಾಗುತ್ತಿರುವುದು ನನಗೆ ಖುಷಿಯಾಗಿಲ್ಲ. ಇದು ಸಂತಸಪಡುವ ಸಮಯವೂ ಅಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ​ಡಿ ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ರಾಜ್ಯದಲ್ಲಿ ಅತ್ಯಂತ ಹೀನಾಯ ಘಟನೆ ನಡೆದಿದೆ. ರೇವಣ್ಣಗೆ ಜಾಮೀನು ಸಿಕ್ಕಿದೆ ಎಂದು ಸಂಭ್ರಮಿಸುವುದೆ ಬೇಡ. ಪಕ್ಷದ ಕಾರ್ಯಕರ್ತರು ಸಂಭ್ರಮಿಸುವ ಸಮಯ ಇದಲ್ಲ. ಇದು ರಾಜ್ಯವೇ ತಲೆ ತಗ್ಗಿಸುವ ಪ್ರಕರಣ. ನಾನು ಸಂತೋಷ ಪಡುತ್ತೇನೆ ಎಂದು ಭಾವಿಸಬೇಡಿ” ಎಂದರು.

ರಾಜ್ಯದಲ್ಲಿದೆ ದೊಡ್ಡ ತಿಮಿಂಗಿಲ!

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನಮ್ಮ ರಾಜ್ಯದಲ್ಲಿ ದೊಡ್ಡ ತಿಮಿಂಗಿಲ ಇದೆ. ಆ ತಿಮಿಂಗಲ ಯಾರೆಂದು ರಾಜ್ಯದ ಜನರಿಗೂ ಗೊತ್ತಿದೆ. ಎಸ್​ಐಟಿ ತನಿಖೆ ವರದಿ ಶಾಸಕರಿಗೆ ಸರಬರಾಜಾಗುತ್ತಿದೆ ಎಂಬ ಮಾತುಗಳು ಕೇಳಿಬಂದಿವೆ. ಏಪ್ರಿಲ್ 22ರಂದು ದಾಖಲಾದ ಎಫ್​ಐಆರ್​ಗೆ ಸಂಬಂಧಿಸಿ ಒಬ್ಬರನ್ನೂ ಬಂಧಿಸಿಲ್ಲ. ನವೀನ್​ ಗೌಡ ನಮ್ಮ ಪಕ್ಷದವರಿಗೆ ಕೊಟ್ಟೆ ಅಂದಿದ್ದಾನೆ. ಪ್ರಕರಣದ ತನಿಖೆ ಯಾವ ದಿಕ್ಕಿನಲ್ಲಿ ಹೋಗುತ್ತಿದೆ? ಪೆನ್​​ಡ್ರೈವ್​ ಹಂಚಿದವರ ವಿರುದ್ಧ ಈವರೆಗೂ ಕ್ರಮ ಕೈಗೊಂಡಿಲ್ಲ ಎಂದು ಎಸ್​ಐಟಿ ಅಧಿಕಾರಿಗಳಿಗೆ ಕೇಳಬಯಸುತ್ತೇನೆ” ಎಂದು ಹೇಳಿದರು.

“ರೇವಣ್ಣ ಕುಟುಂಬ ಮುಗಿಸಲು ಪ್ಲ್ಯಾನ್​ ಮಾಡಿದ್ದೇನಂತೆ. ನಾನು ಯಾವಾಗಲೂ ನ್ಯಾಯದ ಪರವಾಗಿ ಇದ್ದೇನೆ. ಇಂತಹ ಘಟನೆ ಮತ್ತೆ ಪುನರಾವರ್ತನೆಯಾಗಬಾರದು. ಯಾವುದೇ ಮುಲಾಜಿಗೆ ಒಳಗಾಗದೇ ತನಿಖೆ ಆಗಬೇಕು. ಮಹಿಳಾ ಸಂತ್ರಸ್ತೆಯರ ಪರ ಹೋರಾಟ ಮಾಡುತ್ತೇನೆ. ಸದ್ಯ ನಾನು ಈ ಬಗ್ಗೆ ಏನೂ ಹೇಳಲು ಹೋಗುವುದಿಲ್ಲ. ನನ್ನ ಬಳಿ ಎಲ್ಲ ದಾಖಲೆಗಳಿವೆ ಮುಂದೆ ಮಾತನಾಡುವೆ ” ಎಂದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅನುಮಾನಗಳನ್ನು ಹುಟ್ಟುಹಾಕುವುದೇ ಕೆಲವರ ಕೆಲಸ: ಮುಖ್ಯ ಚುನಾವಣಾ ಆಯುಕ್ತ

ಅನುಮಾನಗಳನ್ನು ಹುಟ್ಟುಹಾಕುವುದೇ ಕೆಲವರ ಕೆಲಸ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್...

ಮೈಸೂರು: ಮೇಕೆ ಮೇಯಿಸುತ್ತಿದ್ದ ಮಹಿಳೆ ಹೊತ್ತೊಯ್ದ ಹುಲಿ

ಮೇಕೆಗಳನ್ನು ಮೇಯಿಸುತ್ತಿದ್ದಾಗ ಹುಲಿ ಯೊಂದು ಹಠಾತ್ ದಾಳಿ ನಡೆಸಿ ಮಹಿಳೆಯನ್ನು ಹೊತ್ತೊಯ್ದ...

ಹಾಸನದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ 6 ಜನರ ಸಾವು

ಇಂದು ಮುಂಜಾನೆ ಹಾಸನ ಹೊರವಲಯದ ಕಂಡ್ಲಿ ಈಚನಹಳ್ಳಿ ಗ್ರಾಮ ಬಳಿಯ ಬೆಂಗಳೂರು-ಮಂಗಳೂರು...

ನಿರ್ಗಮಿಸುವ ಪ್ರಧಾನಿ ತನ್ನನ್ನು ತಾನು ದೇವಮಾನವನೆಂದು ಭಾವಿಸಬಹುದು: ಕಾಂಗ್ರೆಸ್‌

"ನಿರ್ಗಮಿಸುತ್ತಿರುವ ಪ್ರಧಾನಿ ಸೋಲಿನ ವಾಸ್ತವ ತಿಳಿಯುತ್ತಿದ್ದಂತೆ, ಹೆಚ್ಚು ಭ್ರಮೆಯಲ್ಲಿದ್ದಾರೆ. ಅದಕ್ಕೆ ತನ್ನ...