ಪ್ರಜ್ವಲ್ ರೇವಣ್ಣ ಪ್ರಕರಣ | ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸ್ಥಾನಕ್ಕೆ ಜಾಯ್ನಾ ಕೊಥಾರಿ ರಾಜೀನಾಮೆ

Date:

ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಎಸ್​ಪಿಪಿ ಹುದ್ದೆಗೆ ಜಾಯ್ನಾ ಕೊಥಾರಿ ಅವರು ರಾಜೀನಾಮೆ ನೀಡಿದ್ದಾರೆ.

ಇತ್ತೀಚೆಗಷ್ಟೇ ಇದೇ ಪ್ರಕರಣಕ್ಕೆ ರಾಜ್ಯ ಸರ್ಕಾರ ನೇಮಿಸಿದ್ದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ ಎನ್ ಜಗದೀಶ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಜಾಯ್ನಾ ಕೊಥಾರಿ ಅವರು ಇಂದು (ಜೂನ್ 11) ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಅಚ್ಚರಿ ಮೂಡಿಸಿದೆ.

ಪ್ರಜ್ವಲ್ ರೇವಣ್ಣ ಪ್ರಕರಣಗಳಲ್ಲಿ ವಿಶೇಷ ತನಿಖಾ ತಂಡದ ಪರ ವಾದಿಸಲು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಬಿ ಎನ್ ಜಗದೀಶ ಅವರನ್ನು ರಾಜ್ಯ ಸರ್ಕಾರ ನೇಮಿಸಿತ್ತು. ಬಳಿಕ ವಿಚಾರಣಾ ನ್ಯಾಯಾಲಯ ಮತ್ತು ಸೆಷನ್‌ಗಳ ಮುಂದೆ ಪ್ರಾಸಿಕ್ಯೂಷನ್‌ನ್ನು ಸಮರ್ಥಿಸಲು ರಾಜ್ಯ ಸರ್ಕಾರವು, ಹಿರಿಯ ವಕೀಲರಾದ ಅಶೋಕ್ ಎನ್ ನಾಯಕ್ ಮತ್ತು ಜಾಯ್ನಾ ಕೊಥಾರಿ ಅವರನ್ನು ಹೆಚ್ಚುವರಿ ಎಸ್‌ಪಿಪಿಗಳಾಗಿ ಸರ್ಕಾರ ನೇಮಿಸಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಿ ಎನ್ ಜಗದೀಶ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಹೆಚ್ಚುವರಿ ಎಸ್‌ಪಿಪಿ ಜಾಯ್ನಾ ಕೊಥಾರಿ ಸಹ ರಾಜೀನಾಮೆ ನೀಡಿದ್ದಾರೆ. ಸದ್ಯಕ್ಕೆ ರಾಜೀನಾಮೆಗೆ ಸ್ಪಷ್ಟವಾದ ಕಾರಣಗಳು ತಿಳಿದುಬಂದಿಲ್ಲ.

ಎಸ್​ಐಟಿ ಕಸ್ಟಡಿಯಲ್ಲಿದ್ದ ಪ್ರಜ್ವಲ್ ರೇವಣ್ಣ ಅವರಿಗೆ ನ್ಯಾಯಾಲಯವು ಜೂನ್ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ, ಈ ಹಿನ್ನೆಲೆಯಲ್ಲಿ ಇದೀಗ ಪ್ರಜ್ವಲ್​ ರೇವಣ್ಣ ಬೆಂಗಳೂರಿಗೆ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲು ಪಾಲಾಗಿದ್ದು, ಅವರಿಗೆ ವಿಚಾರಣಾಧೀನ ಕೈದಿ ನಂಬರ್ 5664 ನೀಡಲಾಗಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭೆ ಸ್ಪೀಕರ್ ಚುನಾವಣೆ| ಟಿಡಿಪಿ ಸ್ಪರ್ಧಿಸಿದರೆ ‘ಇಂಡಿಯಾ’ ಒಕ್ಕೂಟ ಬೆಂಬಲಿಸುತ್ತೆ: ಸಂಜಯ್ ರಾವತ್

ಲೋಕಸಭೆ ಸ್ಪೀಕರ್ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಆಡಳಿತಾರೂಢ ಮಿತ್ರ ಪಕ್ಷವಾದ ತೆಲುಗು...

ಆರೋಗ್ಯ ಇಲಾಖೆ | 8 ವರ್ಷಗಳ ಬಳಿಕ ಕೌನ್ಸಲಿಂಗ್ ಮೂಲಕ ವರ್ಗಾವಣೆ ಜಾರಿಗೊಳಿಸಿದ ಸಚಿವ ಗುಂಡೂರಾವ್

ವರ್ಗಾವಣೆ ಕೌನ್ಸಲಿಂಗ್ ಸುತ್ತೋಲೆ ಪ್ರಕಟ ಜುಲೈ ತಿಂಗಳ ಅಂತ್ಯದೊಳಗೆ ಕೌನ್ಸಲಿಂಗ್...

ಇಂಧನ ದರ ಇಳಿಸದಿದ್ದರೆ ರಾಜ್ಯಾದ್ಯಂತ ಹೋರಾಟ; ಖಾಸಗಿ ಸಾರಿಗೆ ಸಂಘಟನೆಗಳ ಎಚ್ಚರಿಕೆ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಕರ್ನಾಟಕ...

ಬೆಂಗಳೂರು | 15 ದಿನದ ಮಗುವಿಗೆ ‘ಹಾರ್ಟ್ ಆಪರೇಷನ್’ ಮಾಡಿ ಯಶಸ್ವಿಯಾದ ಸರ್ಕಾರಿ ಆಸ್ಪತ್ರೆ ವೈದ್ಯರು

ರಾಜ್ಯ ರಾಜಧಾನಿ ಬೆಂಗಳೂರಿನ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ 15 ದಿನದ...