ಪ್ರಜ್ವಲ್ ರೇವಣ್ಣ ಪ್ರಕರಣ: ಮಾಜಿ ಡ್ರೈವರ್ ಕಾರ್ತಿಕ್‌ನನ್ನು ಮಲೇಷ್ಯಾಕ್ಕೆ ಕಳಿಸಿದವರು ಯಾರು: ಕುಮಾರಸ್ವಾಮಿ ಪ್ರಶ್ನೆ

Date:

ದೇಶದ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಹಾಸನ ಸಂಸದ ಪ್ರಜ್ವಲ್ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣವು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಬಹಿರಂಗ ಹೇಳಿಕೆ ನೀಡಿದ್ದ ಪ್ರಜ್ವಲ್ ರೇವಣ್ಣ ಅವರ ಮಾಜಿ ಡ್ರೈವರ್ ಕಾರ್ತಿಕ್ ಮಲೇಷ್ಯಾದಲ್ಲಿರುವುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

- Advertisement -

ಇಂದು ಸಂಜೆ ಪದ್ಮನಾಭ ನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಕುಮಾರಸ್ವಾಮಿ ಆಗಮಿಸಿದರು. ಈ ವೇಳೆ ಡ್ರೈವರ್ ಕಾರ್ತಿಕ್ ಹೇಳಿಕೆಯ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರು ಪ್ರಶ್ನಿಸಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, “ತರಾತುರಿಯಲ್ಲಿ ವಿಡಿಯೋ ಬಿಟ್ಟು ನನ್ನನ್ನು ಕೆಣಕಿದ್ದಾರೆ. ನನಗೆ ಏನು ಮಾಡಬೇಕು ಅಂತ ಗೊತ್ತಿದೆ. ಮೊದಲು ಕಾರ್ತಿಕ್ ಎಲ್ಲಿದ್ದಾನೆ ಎಂದು ಹುಡುಕಿಕೊಳ್ಳಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಮಂಗಳವಾರ ಡ್ರೈವರ್ ಕಾರ್ತಿಕ್ ವಿಡಿಯೋ ಬಿಡುಗಡೆಯಾಗಿದೆ. ಕಾರ್ತಿಕ್‌ ಎಲ್ಲಿಯಾದ್ರೂ ಪ್ರೆಸ್‌ ಮೀಟ್‌ ಮಾಡಿದ್ದಾನಾ? ವಿಡಿಯೋವನ್ನು ಬಿಡುಗಡೆ ಮಾಡಿದವರು ಯಾರು? ಅವನು ದೇವರಾಜೇಗೌಡನ ಕೈಯಲ್ಲಿ ನಾನು ವಿಡಿಯೋ ಕೊಟ್ಟಿದ್ದೇನೆ ಎಂದಿದ್ದಾನೆ. ಕಾರ್ತಿಕ್ ಈಗ ಮಲೆಷ್ಯಾದಲ್ಲಿ ಇದ್ದಾನೆ. ನಿಮಗೆ ವಿಡಿಯೋ ರಿಲೀಸ್‌ ಮಾಡಿದ್ದು ಎಲ್ಲಿಂದ? ಮೊದಲು ಆತನನ್ನು ಕರೆದುಕೊಂಡು ಬನ್ನಿ ಎಂದು 420 ಬ್ರದರ್ಸ್” ಎಂದು ಪರೋಕ್ಷವಾಗಿ ಡಿ ಕೆ ಸಹೋದರರ ವಿರುದ್ಧ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

“ದೇವರಾಜ್ ಮೊದಲು ನನ್ನನ್ನು ಭೇಟಿಯಾಗಿದ್ದಾನೆಂದು ಈ 420ಗಳು ಹೇಳಿದ್ದಾರೆ. ಎಲ್ಲಿಂದ ವಿಡಿಯೋ ಮಾಡಿ ಬಿಟ್ಟಿದ್ದಾನೆ ಅದನ್ನು ಮೊದಲು ತಿಳಿದುಕೊಳ್ಳಿ. ಸುಲಭವಾಗಿ ನಮ್ಮನು ಕೆಣಕಿದರೆ ನಾವು ಸುಮ್ಮನೇ ಬಿಡುವುದಿಲ್ಲ” ಎಂದು ಎಚ್ಚರಿಕೆ ನೀಡಿದರು.

ಮಾಧ್ಯಮದವರ ಮೇಲೆಯೇ ಕೋಪಗೊಂಡ ಕುಮಾರಸ್ವಾಮಿ

ಇದೇ ವೇಳೆ ಮಾಧ್ಯಮಗಳ ವಿರುದ್ಧವೇ ಗರಂ ಆದ ಹೆಚ್‌ಡಿಕೆ, “ನಮ್ಮ ಮನೆ ಬಳಿ ಯಾಕೆ ಬಂದಿದ್ದೀರಿ. ಅಲ್ಲೂ ಬರ್ತೀರಾ ಇಲ್ಲೂ ಪದೇ ಪದೇ ಬರುತ್ತೀರಿ. ಬೆಳಗ್ಗೆ ಮನೆ ಹತ್ತಿರ ಬಂದಿದ್ದೀರಿ. ಈಗ ಮತ್ತೆ ಇಲ್ಲಿ ಬಂದಿದ್ದೀರಿ. ಸಂಪೂರ್ಣವಾಗಿ ನಿನ್ನೆ ಒಂದು ಗಂಟೆ ಹೇಳಿದ್ದೇನೆ. ಮತ್ತೆ ಯಾಕೆ ಬರುತ್ತೀರಿ. ಸುದ್ದಿ ಬೇರೆಯವರು ಕೊಡುತ್ತಿದ್ದಾರೆ. ಅವರ ಬಳಿ ಹೋಗಿ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದೇವೇಗೌಡರ ನಿವಾಸಕ್ಕೆ ರೇವಣ್ಣ, ಕುಮಾರಸ್ವಾಮಿ ಭೇಟಿ

ಹಾಸನ ಜೆಡಿಎಸ್​​ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಿಂದ ಪಕ್ಷಕ್ಕಾಗಿರುವ ಮುಜುಗರದ ಬಗ್ಗೆ ಮಾತುಕತೆ ನಡೆಸಲು ಹೆಚ್.ಡಿ.ದೇವೇಗೌಡ ನಿವಾಸಕ್ಕೆ ಹೆಚ್.ಡಿ.ರೇವಣ್ಣ ಮತ್ತು ಹೆಚ್​ಡಿ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಪ್ಕೆ, ಇತರೆ ಸಿಜೆಪಿ ನಾಯಕರ ಬಂಧನಕ್ಕೆ ಸರ್ಕಾರ ಸಂಚು: ಜೈಲಿಗೆ ಹೋಗಲು ಹೆದರಲ್ಲ ಎಂದ ಸೌರವ್ ದಾಸ್

ಅಕ್ಟೋಬರ್ 10 ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಗೂ...

ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗೆ ಅವಕಾಶ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಡೆಸಲು ದೆಹಲಿ ಪೊಲೀಸರು ಅನುಮತಿ...

ಚುನಾವಣಾ ಪ್ರಚಾರದಲ್ಲಿ ಅಪ್ರಾಪ್ತನ ಬಳಕೆ ಮಾಡಿರುವ ಉದಯನಿಧಿ ಸ್ಟ್ಯಾಲಿನ್ ವಿರುದ್ಧ ಎಫ್‌ಐಆರ್ ದಾಖಲು

ತಮಿಳುನಾಡಿನ ಧರಪುರಂ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ಅಪ್ರಾಪ್ತ ಬಾಲಕನನ್ನು...