ಪ್ರಜ್ವಲ್ ಪ್ರಕರಣ | ಎಸ್‌ಐಟಿ ತನಿಖೆಯಲ್ಲಿ ರಾಜ್ಯ ಸರ್ಕಾರ ಸೂಜಿಯಷ್ಟೂ ಮಧ್ಯಪ್ರವೇಶಿಸಲ್ಲ: ಸಿಎಂ ಸಿದ್ದರಾಮಯ್ಯ

Date:

“ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ವಿಚಾರದಲ್ಲಿ ತನಿಖೆ ನಡೆಸುತ್ತಿರುವ ಎಸ್‌ಐಟಿ ಎನ್ನುವುದು ರಿಮೋಟ್ ಕಂಟ್ರೋಲ್ ಮೇಲೆ ಕೆಲಸ ಮಾಡುತ್ತಿದೆ. ಅದು ಸರ್ಕಾರದ ರಬ್ಬರ್ ಸ್ಟಾಂಪ್” ಎಂದು ವಕೀಲ ಹಾಗೂ ಬಿಜೆಪಿ ನಾಯಕ ದೇವರಾಜೇಗೌಡ ಆರೋಪಿಸಿದ್ದರು.

- Advertisement -

ಈ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, “ಎಸ್‌ಐಟಿ ತನಿಖೆಯಲ್ಲಿ ರಾಜ್ಯ ಸರ್ಕಾರ ಸೂಜಿಯಷ್ಟೂ ಮಧ್ಯಪ್ರವೇಶಿಸುವುದಿಲ್ಲ” ಎಂದು ಸ್ಪಷನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, “ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪಗಳ ಬಗ್ಗೆ ತನಿಖೆ ನಡೆಸಲು ರಚಿಸಲಾದ ವಿಶೇಷ ತನಿಖಾ ತಂಡ ಸ್ವತಂತ್ರವಾಗಿ ಮತ್ತು ನಿಷ್ಪಕ್ಷಪಾತತನದಿಂದ ತನಿಖೆ ನಡೆಸಲಿದ್ದು, ಇದರಲ್ಲಿ ರಾಜ್ಯ ಸರ್ಕಾರ ಒಂದು ಸೂಜಿಯ ಮೊನೆಯಷ್ಟೂ ಮಧ್ಯಪ್ರವೇಶ ಮಾಡುವುದಿಲ್ಲ” ಎಂದು ತಿಳಿಸಿದ್ದಾರೆ.

“ಎಸ್ ಐಟಿ ಎನ್ನುವುದು ರಿಮೋಟ್ ಕಂಟ್ರೋಲ್ ಮೇಲೆ ಕೆಲಸ ಮಾಡುತ್ತಿದೆ. ಅದು ಸರ್ಕಾರದ ರಬ್ಬರ್ ಸ್ಟಾಂಪ್” ಎಂದು ಬಿಜೆಪಿ ನಾಯಕ ದೇವರಾಜೇಗೌಡರ ಆರೋಪ ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿದೆ. ಇದು ಅಪರಾಧಿಗಳನ್ನು ರಕ್ಷಿಸುವ ದುರುದ್ದೇಶದಿಂದ ತನಿಖೆಯ ಹಾದಿ ತಪ್ಪಿಸಲು ಮಾಡಿರುವ ಕುತಂತ್ರವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಎಸ್‌ಐಟಿ ಸಂಪೂರ್ಣವಾಗಿ ಪಾರದರ್ಶಕವಾಗಿ ಕೆಲಸ ಮಾಡುತ್ತಿದೆ. ತಪ್ಪಿತಸ್ಥರು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ. ಈ ಉದ್ದೇಶದಿಂದಲೇ ಆಯ್ದ ದಕ್ಷ ಅಧಿಕಾರಿಗಳನ್ನು ಸೇರಿಸಿಕೊಂಡು ಎಸ್‌ಐಟಿ ರಚಿಸಲಾಗಿದೆ” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಬಿಜೆಪಿ-ಜೆಡಿಎಸ್ ನಾಯಕರ ಅಣತಿಯಂತೆ ದೇವರಾಜೇಗೌಡರಿಂದ ನನ್ನ ವಿರುದ್ಧ ಸುಳ್ಳು ಆರೋಪ: ಡಿ ಕೆ ಶಿವಕುಮಾರ್

“ಈ ಪ್ರಕರಣದಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರ ಹೆಸರು ಹಾಳಾಗುತ್ತಿದೆ ಎಂದು ಬಿಜೆಪಿ ನಾಯಕರು ಈಗ ಗೋಳಾಡುವುದರಿಂದ ಏನೂ ಪ್ರಯೋಜನವಾಗದು, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಡುವಾಗಲೇ ಇದನ್ನು ಯೋಚನೆ ಮಾಡಬೇಕಾಗಿತ್ತು. ಎಸ್‌ಐಟಿ ತನಿಖೆಯ ಯಶಸ್ಸು ಈಗ ಸಂಪೂರ್ಣವಾಗಿ ಕೇಂದ್ರ ಸರ್ಕಾರ ನೀಡುವ ಸಹಕಾರವನ್ನು ಅವಲಂಬಿಸಿದೆ. ವಿದೇಶದಲ್ಲಿದ್ದಾನೆ ಎಂದು ಹೇಳಲಾದ ಆರೋಪಿ ಪ್ರಜ್ವಲ್ ರೇವಣ್ಣನವರನ್ನು ಭಾರತಕ್ಕೆ ಕರೆತರಲು ಸಹಕಾರ ನೀಡಬೇಕಾಗಿರುವುದು ಕೇಂದ್ರ ಸರ್ಕಾರ. ಜೆಡಿಎಸ್ ಜೊತೆ ಈಗಲೂ ರಾಜಕೀಯ ಮೈತ್ರಿ ಹೊಂದಿರುವ ಬಿಜೆಪಿ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕಾಗಿದೆ” ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

ಇದನ್ನು ಓದಿದ್ದೀರಾ? ಪ್ರಜ್ವಲ್ ಪೆನ್‌ಡ್ರೈವ್ ಬಿಡುಗಡೆ ರೂವಾರಿ ಡಿಕೆಶಿ: ಯೂಟರ್ನ್‌ ಹೊಡೆದು ವಕೀಲ ದೇವರಾಜೇಗೌಡ ಆರೋಪ

ದೇವರಾಜೇಗೌಡ ಹೇಳಿದ್ದೇನು?

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿ ಸೋಮವಾರ ಸಂಜೆ ತುರ್ತು ಪತ್ರಿಕಾಗೋಷ್ಠಿ ನಡೆಸಿದ್ದ ಬಿಜೆಪಿ ಮುಖಂಡ ದೇವರಾಜೇಗೌಡ, “ತನಿಖೆ ನಡೆಸುತ್ತಿರುವ ಎಸ್‍ಐಟಿಯ ಅಧಿಕಾರಿಗಳು ಪ್ರಾಮಾಣಿಕ ಕೆಲಸ ಮಾಡುತ್ತಿಲ್ಲ. ಬದಲಾಗಿ ಸರ್ಕಾರದ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಅಧಿಕಾರಿಗಳ ಮೊಬೈಲ್‍ಗೆ ನಿತ್ಯ ಹತ್ತಾರು ಕರೆಗಳು ಬರ್ತಿವೆ. ಸಿಎಂ-ಡಿಸಿಎಂ ಹಾಗೂ ಸಚಿವರುಗಳಿಂದಲೂ ನಿರಂತರ ಕರೆ ಬರುತ್ತಿದೆ. ಆದ್ದರಿಂದ ಇವರಿಂದ ನ್ಯಾಯ ಸಿಗುವ ವಿಶ್ವಾಸವಿಲ್ಲ. ಮುಖ್ಯಮಂತ್ರಿಗಳು ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಇಲ್ಲವಾದಲ್ಲಿ ನಾವೇ ವಕೀಲರು ಹೋರಾಟ ಮಾಡಿ ಸಿಬಿಐಗೆ ಕೊಡುವಂತೆ ಮಾಡುತ್ತೇವೆ. ಈ ಪ್ರಕರಣಕ್ಕೆ ಸಂಬಂಧಿಸಿ ನನಗೆ ಎಸ್‌ಐಟಿಯ ಮೇಲೆ ನಂಬಿಕೆ ಇಲ್ಲ. ಹಾಗಾಗಿ, ಸಿಬಿಐಗೆ ಕೊಟ್ಟರೆ ನನ್ನಲ್ಲಿರುವ ಎಲ್ಲ ದಾಖಲೆಗಳನ್ನು ಸಿಬಿಐಗೆ ನೀಡುತ್ತೇನೆ” ಎಂದು ಹೇಳಿಕೆ ನೀಡಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...