ಪ್ರಜ್ವಲ್ ಲೈಂಗಿಕ ಹಗರಣ | ಪೆನ್‌ಡ್ರೈವ್ ಹರಿಬಿಡುವಲ್ಲಿ ಡಿಕೆಶಿ ಕೈವಾಡ ಅರೋಪ; ಸಂಪುಟದಿಂದ ವಜಾಕ್ಕೆ ಜೆಡಿಎಸ್‌ ಆಗ್ರಹ

Date:

Advertisements

ಪ್ರಜ್ವಲ್ ಲೈಂಗಿಕ ಹಗರಣದಲ್ಲಿ ಆಶ್ಲೀಲ ವಿಡಿಯೋಗಳ ಪೆನ್‌ಡ್ರೈವ್ ಹೊರಬರುವಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೈವಾಡವಿದೆ ಎಂದು ಜೆಡಿಎಸ್‌ ಆರೋಪಿಸಿದೆ. ಅಶ್ಲೀಲ ವಿಡಿಯೋಗಳನ್ನು ಹರಿಬಿಟ್ಟು, ಹೆಣ್ಣುಮಕ್ಕಳ ಮಾನ ಹರಾಜು ಹಾಕುತ್ತಿರುವ ಕೃತ್ಯದಲ್ಲಿ ಕೈವಾಡವಿರುವ ಡಿ.ಕೆ ಶಿವಕುಮಾರ್ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿಬೇಕೆಂದು ಆಗ್ರಹಿಸಿ ಜೆಡಿಎಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಜಿಲ್ಲೆಯ ಜೆಡಿಎಸ್‌ ಅಧ್ಯಕ್ಷ ಎಂ ಜಯ್ಯಣ್ಣ, “ಇತ್ತೀಚೆಗೆ ದಿನಗಳಲ್ಲಿ ರಾಜ್ಯದಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ಹಗರಣದಲ್ಲಿ ಪೆನ್‌ಡ್ರೈವ್ ಹಾಗೂ ಆಶ್ಲೀಲ ವಿಡಿಯೋ ಮೂಲಕ ರಾಜ್ಯದೆಲ್ಲೆಡೆ ಹಂಚುತ್ತಿರುವುದು ಸಂಚಲನವನ್ನು ಸೃಷ್ಟಿಸಿದೆ. ಈ ಲೈಂಗಿಕ ಹಗರಣವನ್ನು ಯಾರೂ ಕೂಡ ಸಮರ್ಥಿಸಿಕೊಳ್ಳಲಾಗದು. ಸಂಪೂರ್ಣ ವಿಚಾರಣೆಯ ಬಳಿಕ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಆದರೆ, ಈ ಲೈಂಗಿಕ ಹಗರಣದಲ್ಲಿ ಸಂತ್ರಸ್ತೆಯರ ಮುಖಗಳು ಕಾಣಿಸುವ ಆಶ್ಲೀಲ ವಿಡಿಯೋಗಳನ್ನು ಹರಿಬಿಟ್ಟಿರುವುದು ಶಿಕ್ಷಾರ್ಹ ಅಪರಾಧ. ಇದರ ರೂವಾರಿ ಡಿ.ಕೆ.ಶಿವಕುಮಾರ್ ಎಂಬುದು ಜಗ್ಗಜನಿತವಾಗಿದೆ” ಎಂದು ಆರೋಪಿಸಿದ್ದಾರೆ.

Advertisements

“ವಕೀಲ ದೇವರಾಜೇಗೌಡ ಅವರು ಎಲ್ಲ ವಿಷಯಗಳನ್ನು ಕೂಲಂಕುಷವಾಗಿ ವಿವರಿಸಿದ್ದಾರೆ. ಸರ್ಕಾರದ ಪ್ರಮುಖ ಖಾತೆಗಳನ್ನು ನಿರ್ವಹಿಸುತ್ತಿರುವ ಉಪ ಮುಖ್ಯಮಂತ್ರಿಗಳು ಇಂತಹ ನೀಚ ಕೆಲಸಕ್ಕೆ ಇಳಿದಿರುವುದು, ಇಡೀ ರಾಜ್ಯದ ಜನತೆಯ ದುರ್ದೈವವಾಗಿದೆ. ಅವರನ್ನು ಸಂಪುಟದಿಂದ ವಜಾಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

ಜೆಡಿಎಸ್‌ನ ಮಾಜಿ ಅಧ್ಯಕ್ಷ ಯಶೋಧರ ಮಾತನಾಡಿ, “ತೀವ್ರ ಬರಗಾಲದಿಂದ ತತ್ತರಿಸುತ್ತಿರುವ ರಾಜ್ಯದ ಜನತೆಯ ಶ್ರೇಯೋಭಿವೃದ್ಧಿಯ ಬಗ್ಗೆ ಚಿಂತಿಸದೆ, ಇಂತಹ ಸ್ವಾರ್ಥ ರಾಜಕೀಯಕ್ಕೆ ಇಳಿದಿರುವುದು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ. ಈ ಚುನಾವಣಾ ಸಂದರ್ಭದಲ್ಲಿ ಜೆಡಿಎಸ್‌ ನಾಯಕ ಮಾಜಿ ಪ್ರಧಾನಮಂತ್ರಿ ಹೆಚ್.ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ವರ್ಚಸ್ಸನ್ನು ಕುಂದಿಸಿ, ಜೆಡಿಎಸ್‌ ಕಳಂಕ ತರುವುದು ಇದರ ಪ್ರಮುಖ ಉದ್ದೇಶವಾಗಿದೆ. ಅದೂ ಅಲ್ಲದೇ ಮೈತ್ರಿ ಪಕ್ಷವಾಗಿರುವ ಬಿಜೆಪಿಗೆ ಮುಜುಗರ ಉಂಟು ಮಾಡಿ ಚುನಾವಣೆಯಲ್ಲಿ ಹಿನ್ನಡೆಯನ್ನುಂಟು ಮಾಡುವ ಕೆಟ್ಟ ಆಲೋಚನೆಯೂ ಸಹ ಇದರಲ್ಲಿ ಅಡಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಲೈಂಗಿಕ ಹಗರಣದಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿರುವ ಮಹಿಳೆಯರ ಫೋಟೋಗಳನ್ನು ಯಥಾವತ್ತಾಗಿ ತೋರಿಸಿ, ಮಹಿಳೆಯರ ಗೌರವವನ್ನು ತೆಗೆದಿದ್ದಾರೆ. ಇದರಿಂದಾಗಿ, ಆ ಕುಟುಂಬಗಳ ಪರಿಸ್ಥಿತಿ ಬಹಳ ಶೋಚನೀಯವಾಗಿದೆ. ಇದು ಇಡೀ ಸ್ರ್ತೀಕುಲಕ್ಕೆ ಮಾಡಿದ ಅವಮಾನ” ಎಂದು ಬೇಸರ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಹಲವಾರು ಜೆಡಿಎಸ್‌ ಕಾರ್ಯಕರ್ತರು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಚಪಾತಿ ರೊಟ್ಟಿ ಕಾಯಿಸಿದಂತೆ ಎಫ್‌ಐಆರ್ ಮಾಡ್ತಿದ್ದಾರೆ: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

Download Eedina App Android / iOS

X