ಪ್ರಜ್ವಲ್ ಲೈಂಗಿಕ ಹಗರಣ | ಸಿಬಿಐ ತನಿಖೆಗೆ ನೀಡಲು ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಒತ್ತಾಯ

Date:

ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎನ್ನಲಾದ ಲೈಂಗಿಕ ಹಗರಣದಲ್ಲಿ ಪ್ರಮುಖ ನಾಯಕರ ಹೆಸರು ಇರುವುದರಿಂದ ವಿಶೇಷ ತನಿಖಾ ತಂಡವು (ಎಸ್‌ಐಟಿ) ಪಾರದರ್ಶಕವಾಗಿ ತನಿಖೆ ಮಾಡಲು ಸಾಧ್ಯವಿಲ್ಲ. ಹೀಗಾಗಿ, ತನಿಖೆಯನ್ನು ತಡ ಮಾಡದೆ ಸಿಬಿಐಗೆ ವಹಿಸಬೇಕು” ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕರ್ನಾಟಕ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಹಗರಣದ ಸಂತ್ರಸ್ತರಿಗೆ ನ್ಯಾಯ ಸಿಗಬೇಕು. ಹಗರಣದಲ್ಲಿ ಪ್ರಮುಖ ನಾಯಕರ ಹೆಸರು ಹೇಳಲಾಗುತ್ತಿದೆ. ಈ ಪ್ರಕರಣದಲ್ಲಿ ಎಸ್‌ಐಟಿ ನ್ಯಾಯ ನೀಡಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ಈ ತನಿಖೆಯನ್ನು ಸಿಬಿಐಗೆ ವಹಿಸಬೇಕು” ಎಂದಿದ್ದಾರೆ.

“ಹಗರಣದ ಬಗ್ಗೆ ಬಿಜೆಪಿಯ ನಿಲುವು ಸ್ಪಷ್ಟವಾಗಿದೆ. ದಿನದಿಂದ ದಿನಕ್ಕೆ ಹೊಸ ಹೊಸ ಅಂಶಗಳು ಹೊರಬರುತ್ತಿವೆ. ವಿಡಿಯೋಗಳು ಹೊರಬರುವಲ್ಲಿ ರಾಜ್ಯ ಸರ್ಕಾರದ ಪ್ರಮುಖ ನಾಯಕರ ಪಾತ್ರದ ಬಗ್ಗೆ ಕೇಳಿಬರುತ್ತಿದೆ. ಈ ಹಗರಣದಲ್ಲಿ ನಾನು ಯಾರನ್ನೂ ಬೆಂಬಲಿಸುವುದಿಲ್ಲ. ರಾಜಕೀಯ ಉದ್ದೇಶಕ್ಕಾಗಿ ಹಗರಣವನ್ನು ಬಳಸುವುದನ್ನು ನಿಲ್ಲಿಸಬೇಕು. ಸಂತ್ರಸ್ತರಿಗೆ ನ್ಯಾಯ ಸಿಗಬೇಕು. ಪ್ರಕರಣವು ತಾರ್ಕಿಕ ಅಂತ್ಯ ಕಾಣಬೇಕೆಂದರೆ, ಸಿಬಿಐ ತನಿಖೆಗೆ ನೀಡಬೇಕು” ಎಂದು ವಿಜಯೇಂದ್ರ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...