ಪ್ರಜ್ವಲ್ ಲೈಂಗಿಕ ಹಗರಣ | ದೇವರಾಜೇಗೌಡ ಆರೋಪ ಸುಳ್ಳು – ಬಹಿರಂಗ ಚರ್ಚೆಗೆ ಬರಲಿ; ಶ್ರೇಯಸ್ ಪಟೇಲ್ ಸವಾಲು

Date:

ಬಿಜೆಪಿ ಮುಖಂಡ ದೇವರಾಜೇಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ಅವರು ನಮ್ಮ ವಿರುದ್ಧ ಮಾಡಿರುವ ಆರೋಪಗಳು ಸಾಬೀತಾದರೆ, ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ದೇವರಾಜೇಗೌಡ ನಮ್ಮೊಂದಿಗೆ ಬಹಿರಂಗ ಚರ್ಚೆಗೆ ಬರಲಿ ಎಂದು ಹಾಸನ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್ ಪಟೇಲ್ ಸವಾಲು ಹಾಕಿದ್ದಾರೆ.

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಖಾಸಗಿ ಹೋಟೆಲ್​ನಲ್ಲಿ ಸಂತ್ರಸ್ತೆಯೊಂದಿಗೆ ನನ್ನನ್ನು ಭೇಟಿ ಮಾಡಿ, ಚರ್ಚಿಸಿದ್ದಾಗಿ ಹೇಳಿದ್ದಾರೆ. ನಾನು ಯಾರನ್ನು, ಎಲ್ಲಿಯೂ ಭೇಟಿ ಮಾಡಿಲ್ಲ. ಅವರು ಹೇಳುವ ಖಾಸಗಿ ಹೋಟೆಲ್‌ನಲ್ಲಿ ಸಿಸಿ ಟಿವಿ ಇದೆ. ಪರಿಶೀಲಿಸಲಿ” ಎಂದು ಹೇಳಿದ್ದಾರೆ.

“ಪ್ರಕರಣದಲ್ಲಿ ಎಸ್‌ಐಟಿ ತನಿಖೆ ನಡೆಸುತ್ತಿದೆ. ತನಿಖೆ ದಿಕ್ಕು ತಪ್ಪಿಸುವ ಕೆಲಸ ಮಾಡಬಾರದು. ಹಾಸನದಲ್ಲಿ ಎಲ್‌ಇಡಿ ಪರದೆ ಹಾಕಿಸಿ, ತೋರಿಸ್ತೀನಿ ಎಂದಿದ್ದವರು ಯಾರು? ಈ ಕೊಳಕು ರಾಜಕೀಯಕ್ಕೆ ಕಾರಣಕರ್ತರೇ ದೇವರಾಜೇಗೌಡ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನನ್ನ ವಿರುದ್ಧದ ಆರೋಪಗಳನ್ನು ಅವರು ಸಾಬೀತು ಮಾಡಲಿ. ಬಹಿರಂಗ ಚರ್ಚೆಗೆ ಬರಲಿ. ಆರೋಪ ಸಾಬೀತು ಮಾಡಿದರೆ, ಜೂನ್‌ 4ರಂದು ಜನರ ಆಶೀರ್ವಾದದಿಂದ ನಾನೇನಾದರೂ ಗೆದ್ದರೆ ಅಂದೇ ರಾಜೀನಾಮೆ ನೀಡುತ್ತೇನೆ” ಎಂದು ಹೇಳಿದ್ದಾರೆ.

“ನಾನೂ ಕೂಡ ಅಕ್ಕ-ತಂಗಿಯ ಜೊತೆ ಬೆಳೆದಿದ್ದೇನೆ. ಪ್ರಜ್ವಲ್ ಕಾರು ಚಾಲಕ ಕಾರ್ತಿಕ್ ಅವರು ಜಮೀನು ವಿಚಾರವಾಗಿ ಮಾತ್ರ ನನ್ನನ್ನು ಭೇಟಿ ಮಾಡಿದ್ದರು. ಪೆನ್‌ಡ್ರೈವ್ ವಿಚಾರವಾಗಿ ಯಾವುದೇ ಚರ್ಚೆ ಆಗಿಲ್ಲ. ದೇವರಾಜೇಗೌಡರೇ ಇದಕ್ಕೆಲ್ಲ ಕಾರಣ. ದೇವರಾಜೇಗೌಡ ತತ್ವ ಸಿದ್ಧಾಂತ‌‌ ಇಲ್ಲದ ರಾಜಕಾರಣಿ. ನಮ್ಮ ವಿರುದ್ಧ ಅನಗತ್ಯ ಆರೋಪ ಮಾಡಿದ್ದಾರೆ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಇಸ್ರೋ ಮಹತ್ವದ ಸಾಧನೆ; ವಿಆರ್‌ಎಲ್‌ ಪುಷ್ಪಕ್ ಮೂರನೇ ಬಾರಿಗೆ ಯಶಸ್ವಿ ಲ್ಯಾಂಡಿಂಗ್

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಬಳಿ ಕುದಾಪುರದಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಮರುಬಳಕೆ...

ಚನ್ನಪಟ್ಟಣ ಉಪಚುನಾಚಣೆ | ಊಹೆಗಳಾಚೆಗೂ ನಡೆಯುತ್ತಿದೆ ಡಿಕೆಶಿ-ಹೆಚ್‌ಡಿಕೆ ಆಟ

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಶೀಘ್ರದಲ್ಲೇ ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ ಹುರಿಯಾಳು ಯಾರು?...

ಅಂಗನವಾಡಿ ಕೇಂದ್ರಗಳ ಉನ್ನತೀಕರಣ; LKG, UKG ಆರಂಭಿಸಲು ಸಿಎಂ ಸಮ್ಮತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

"ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಹಾಗೂ ಎಲ್‌ಕೆಜಿ, ಯುಕೆಜಿ ಪ್ರಾರಂಭಿಸಲು...

ವಾಲ್ಮೀಕಿ ನಿಗಮ ಅಕ್ರಮ | ಜಾರಿ ನಿರ್ದೇಶನಾಲಯದಿಂದ ಪ್ರತ್ಯೇಕ ತನಿಖೆ ಆರಂಭ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣವನ್ನು ಜಾರಿ...