ಪ್ರಜ್ವಲ್ ಲೈಂಗಿಕ ಹಗರಣ | ಸಂತ್ರಸ್ತೆ ಅಪಹರಣ; ರೇವಣ್ಣ ಸಹಚರ ಸತೀಶ್ ಬಾಬಣ್ಣ ಬಂಧನ

Date:

ಹಾಸನ ಸಂಸದ ಪ್ರಜ್ವಲ್ ರೇವಣ್ಣನದ್ದು ಎನ್ನಲಾದ ಲೈಂಗಿಕ ಹಗರಣ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ನಡೆಸುತ್ತಿದೆ. ಪ್ರಜ್ವಲ್ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೂ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರು ದಾಖಲಾಗಿದೆ. ಆ ಸಂತ್ರಸ್ತ ಮಹಿಳೆಯನ್ನು ಅಪಹರಿಸಲಾಗಿದೆ ಎಂದು ಮಹಿಳೆಯ ಮಗ ದೂರು ದಾಖಲಿಸಿದ್ದಾರೆ.

- Advertisement -

ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಎಫ್‌ಐಆರ್ ದಾಖಲಿಸಿದ್ದಾರೆ. ಎಚ್‌.ಡಿ ರೇವಣ್ಣ ಅವರನ್ನು ಎ1 ಆರೋಪಿ ಮತ್ತು ಅವರ ಸಹಚರ ಸತೀಶ್ ಬಾಬಣ್ಣ ಎಂಬಾತನನ್ನು ಎ2 ಆರೋಪಿಯೆಂದು ಉಲ್ಲೇಖಿಸಿದ್ದಾರೆ. ಸತೀಶ್ ಬಾಬಣ್ಣ ಎಂಬಾತನ್ನು ಬಂಧಿಸಿದ್ದಾರೆ. ಆತನಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ತನ್ನ ತಾಯಿಯನ್ನು ರೇವಣ್ಣ ಅಪಹರಿಸಿದ್ದಾರೆ ಎಂದು ಕೆ.ಆರ್‌ ನಗರ ಟೌನ್ ಪೊಲೀಸ್‌ ಠಾಣೆಯಲ್ಲಿ ಸಂತ್ರಸ್ತೆಯ ಪುತ್ರ ರಾಜು ಎಂಬವರು ದೂರು ನೀಡಿದ್ದಾರೆ. ದೂರಿನಲ್ಲಿ, “ಏಪ್ರಿಲ್ 29ರಂದು ತಮ್ಮ ಮನೆಗೆ ಬಂದಿದ್ದ ರೇವಣ್ಣ ಅವರ ಸಹಚರ ಸತೀಶ್ ಬಾಬಣ್ಣ ಎಂಬಾತ ‘ರೇವಣ್ಣ ಅವರು ನಿಮ್ಮನ್ನ ಬರಲು ಹೇಳಿದ್ದಾರೆಂದು’ ನನ್ನ ತಾಯಿಯನ್ನು ಕರೆದುಕೊಂಡು ಹೋಗಿದ್ದಾನೆ. ಎಲ್ಲಿಗೆ ಕರೆದುಕೊಂಡು ಹೋದರು. ಆಕೆಯನ್ನು ಕರೆದೊಯ್ದ ನಂತರವಷ್ಟೇ, ಆಕೆಯ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಮಾಡಿರುವುದು ನಮಗೆ ತಿಳಿಯಿತು” ಎಂದು ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...