ಪ್ರಜ್ವಲ್ ಲೈಂಗಿಕ ಹಗರಣ | ಗನ್ ತೋರಿಸಿ ಜಿ.ಪಂ ಮಾಜಿ ಸದಸ್ಯೆ ಮೇಲೆ 3 ವರ್ಷ ನಿರಂತರ ಅತ್ಯಾಚಾರ

Date:

ಇಡೀ ದೇಶವನ್ನೇ ಬೆಚ್ಚಿಬೀಳಿಸಿರುವ ಲೈಂಗಿಕ ಹಗರಣದಲ್ಲಿ ಬಂಧಿತನಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್ಐಟಿ 3ನೇ ಚಾರ್ಜ್‌ಶೀಟ್‌ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ಹಾಸನ ಜಿಲ್ಲಾ ಪಂಚಾಯತ್‌ನ ಮಾಜಿ ಸದಸ್ಯೆ ಮೇಲೆ ಮೂರು ವರ್ಷಗಳ ಕಾಲ ನಿರಂತರವಾಗಿ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಚಾರ್ಜ್‌ಶೀಟ್‌ನಲ್ಲಿ ವಿವರಿಸಿದೆ.

- Advertisement -

ಹಗರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ 1691 ಪುಟಗಳ ಚಾರ್ಜ್‌ಶೀಟ್‌ಅನ್ನು ಶುಕ್ರವಾರ ಸಲ್ಲಿಸಿದೆ. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆಗೆ ಆಕೆಯ ಗಂಡನನ್ನು ಗುಂಡಿಟ್ಟು ಕೊಲ್ಲುವುದಾಗಿ ಬೆದರಿಸಿ, ಆಕೆಯ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

ಹಾಸನದ ರೇಸ್‌ಕೋರ್ಸ್‌ ರಸ್ತೆಯಲ್ಲಿ ಅತಿಥಿ ಗೃಹಕ್ಕೆ ಸಂತ್ರಸ್ತೆಯನ್ನು ಕರೆಸಿಕೊಂಡಿದ್ದ ಪ್ರಜ್ವಲ್, ಆಕೆಗೆ ಗನ್‌ ತೋರಿಸಿ, ಗಂಡನನ್ನು ಕೊಲ್ಲುವುದಾಗಿ ಬೆದರಿಸಿ, ಅತ್ಯಾಚಾರ ಎಸಗಿದ್ದಾನೆ. ಆ ನಂತರ, 2020ರಿಂದ 2023ರವರೆಗೆ ಹಲವಾರು ಬಾರಿ ತನ್ನ ನಿವಾಸಕ್ಕೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ, ಆಗ್ಗಾಗ್ಗೆ ವಿಡಿಯೋ ಕಾಲ್ ಮಾಡಿಯೂ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಚಾರ್ಜ್‌ಶೀಟ್‌ನಲ್ಲಿ ಎಸ್‌ಐಟಿ ವಿವರಿಸಿದೆ.

ಅತ್ಯಾಚಾರದ ವೇಳೆ ಸಂತ್ರಸ್ತೆಗೆ ಅಳಬಾರದು, ನಗಬೇಕು ಎಂದು ಹಾಗೂ ತಾನು ಹೇಳಿದ ಉಡುಗೆಗಳನ್ನು ಧರಿಸಿಕೊಳ್ಳುವಂತೆ ಪೀಡಿಸಿ ವಿಕೃತಿ ಮೆರೆದಿದ್ದಾನೆ. ತನ್ನ ಕೃತ್ಯಗಳನ್ನು ತಾನೇ ವಿಡಿಯೋ ಮಾಡಿಕೊಡಿದ್ದಾನೆ. ಕೃತ್ಯದ ಬಗ್ಗೆ ಯಾರಿಗಾದರೂ ತಿಳಿಸಿದರೆ, ವಿಡಿಯೋ ಹರಿಬಿಡುವುದಾಗಿ ಬೆದರಿಸಿದ್ದಾನೆ. ಆತನ ವಿರುದ್ಧದ ಆರೋಪ ದೃಢಪಟ್ಟಿದೆ ಎಂದು ಎಸ್‌ಐಟಿ ನ್ಯಾಯಾಲಯಕ್ಕೆ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ ಕಂಗಾಲಾದ ಬಡ ಕಾರ್ಮಿಕರು

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM...

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...

ಹೊನ್ನಾವರ | ಬಾಡಿಗೆ ಹಣ ಕೇಳಿದ್ದಕ್ಕೆ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ: ಪ್ರಕರಣ ದಾಖಲು

ಬಾಕಿ ಉಳಿದಿದ್ದ ಬಾಡಿಗೆ ಹಣ ನೀಡುವಂತೆ ಕೇಳಿದ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ...