ಪ್ರಜ್ವಲ್‌ ಎಲ್ಲೇ ಇದ್ದರೂ ಎಸ್‌ಐಟಿ ಮುಂದೆ ಬಂದು ಶರಣಾಗು; ಕೈಮುಗಿದು ಬೇಡಿಕೊಂಡ ಕುಮಾರಸ್ವಾಮಿ

Date:

“ಹೆಚ್‌ ​ಡಿ ದೇವೇಗೌಡ ಮತ್ತು ನನ್ನ ಮೇಲೆ ಗೌರವ ಇದ್ದರೆ ಕೈಮುಗಿದು ಮನವಿ ಮಾಡುವೆ, ರಾಜ್ಯಕ್ಕೆ ಬಂದು ಎಸ್‌ಐಟಿಗೆ ಶರಣಾಗು” ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸಂಸದ ಪ್ರಜ್ವಲ್​ ರೇವಣ್ಣಗೆ ಬಹಿರಂಗವಾಗಿ ಮನವಿ ಮಾಡಿದ್ದಾರೆ.

- Advertisement -

ಬೆಂಗಳುರು ನಗರದ ಜೆಡಿಎಸ್ ಕಚೇರಿಯ ಜೆಪಿ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಈ ನೆಲದ ಕಾನೂನು ಇದೆ, ಯಾಕೆ ಹೆದರಬೇಕು? ಎಷ್ಟು ದಿನ ಕಳ್ಳ ಪೊಲೀಸ್ ಆಟ. ವಿದೇಶದಿಂದ ಬಂದು ತನಿಖೆಗೆ ಸಹಕಾರ ನೀಡಬೇಕು. ಎರಡು ದಿನದೊಳಗೆ ಬರಬೇಕು” ಎಂದು ಕೋರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

“ಸಂಸದ ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಇದು ಎಲ್ಲರೂ ತಲೆತಗ್ಗಿಸುವ ಪ್ರಕರಣ. ಹಾಗಾಗಿ ನಾನು ಸಾರ್ವಜನಿಕವಾಗಿ ಮತ್ತೊಮ್ಮೆ ಕ್ಷಮೆ ಕೋರುತ್ತೇನೆ. ಎಲ್ಲರೂ ಅಸಹ್ಯ ಪಡುವ ಪ್ರಕರಣ ಇದು. ಈ ಕೇಸ್​​ನಲ್ಲಿ ನನ್ನ ಹಾಗೂ ದೇವೇಗೌಡರನ್ನು ತಾಳೆ ಹಾಕಿದ್ದಾರೆ” ಎಂದರು.

“ಪದ್ಮನಾಭ ನಗರಕ್ಕೆ ನಾನು ಪ್ರಜ್ವಲ್​​ನನ್ನು ಬಿಡಿಸಲು ತಂದೆ ಜೊತೆ ಮಾತನಾಡಲು ಹೋಗಿಲ್ಲ. ತಂದೆ- ತಾಯಿ ಆರೋಗ್ಯ ವಿಚಾರಿಸಲು ಮತ್ತು ಧೈರ್ಯ ಹೇಳಲು ಹೋಗುತ್ತೇನೆ.  ಪ್ರಜ್ವಲ್ ಎಲ್ಲೆ ಇದ್ದರೂ ಬಂದು ಸರೆಂಡರ್ ಆಗಲು ಮಾನವಿ ಮಾಡುವಂತೆ ನಾನು ತಂದೆಗೆ  ಹೇಳಿದ್ದೇನೆ” ಎಂದು ಹೇಳಿದರು.

“ನಿನ್ನೆ ಆಡಿಯೋ ಬಂತಲ್ಲ. ಈಗ ಕಾಂಗ್ರೆಸ್ ನಾಯಕರು ಯಾಕೆ ಮಾತನಾಡುತ್ತಿಲ್ಲ. ದೇವರಾಜೇಗೌಡ ಆಡಿಯೋದಲ್ಲಿ ಯಾರು ಮತನಾಡಿದ್ದು, ಸದಾಶಿವ ನಗರಕ್ಕೆ ಯಾರನ್ನ ಭೇಟಿ ಮಾಡಲು ಹೇಳಿದ್ದರು. ಆಡಿಯೋದಲ್ಲಿ ಶಿವಕುಮಾರ್ ಹೇಳಿದ್ದಾರೆ. ಕುಮಾರಸ್ವಾಮಿ ಹೆಸರು ಹೇಳಿ ಅಂದಿದ್ದಿರಾ ಸಿ ಡಿ ಶಿವು” ಎಂದು ಕಿಡಿಕಾರಿದರು.

“ಶಿವಕುಮಾರ್ ನೀವು ತಿಹಾರ್ ಜೈಲಿನಲ್ಲಿ ಇದ್ದಾಗ ನಾನು ನಿಮ್ಮ ತಾಯಿಯನ್ನು ಭೇಟಿ ಮಾಡಿ ಸಾಂತ್ವನ ಹೇಳಿದೆ. ನಿಮ್ಮನ್ನು ಕೂಡ ತಿಹಾರ್ ಜೈಲಿನಲ್ಲಿ ಭೇಟಿ ಮಾಡಿ ನಾಲ್ಕು ದಿನಗಳಲ್ಲಿ ನೀವು ಬಿಡುಗಡೆ ಆದ್ರಿ. ಈಗ ನೀವು ಏನು ಮಾಡುತ್ತಿದ್ದೀರಿ. ಸಿದ್ದರಾಮಯ್ಯ ಅವರು ನಮ್ಮ ಪಕ್ಷದಲ್ಲಿ ಇದ್ದಾಗ ನಮ್ಮ ತಾಯಿ ಕೈಯಿಂದ ಅನ್ನ ತಿಂದಿದ್ದೀರಿ” ಎಂದು ಹರಿಹಾಯ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2017ರಲ್ಲಿ ಚುನಾವಣಾ ಆಯೋಗವನ್ನು ನಂಬಿದ್ದೆವು, ಆದರೆ 2022ರಲ್ಲಿ ಎಸ್‌ಪಿ ಮತಗಳನ್ನು ಇಸಿ ಅಳಿಸಿದೆ: ಅಖಿಲೇಶ್ ಆರೋಪ

2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಬೆಂಬಲಿಗರ...

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿಗೆ ‘ಅಲ್ಲಾಹ್ ಮೇಲಕ್ಕೆ ಟಿಕೆಟ್ ಕಾಯ್ದಿರಿಸಲಿ’ – ಹುಮಾಯೂನ್ ವಿವಾದಾತ್ಮಕ ಹೇಳಿಕೆ

ಪಶ್ಚಿಮ ಬಂಗಾಳದ ರೇಜಿನಗರ ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ವಾಗ್ದಾಳಿಗಳು ತೀವ್ರ ಸ್ವರೂಪ...