ಮಹಿಳಾ ದೌರ್ಜನ್ಯಗಳ ದಾಖಲೆ ಮುರಿದ ಪ್ರಜ್ವಲ್‌, ʼಮೋದಿ ಪರಿವಾರʼದ ಸದಸ್ಯ: ಅಲಕಾ ಲಂಬಾ ಕಿಡಿ

Date:

“ಹಾಸನದ ಸಂಸದ, ಎನ್‌ಡಿಎ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಇದುವರೆಗೂ ನಡೆದ ಎಲ್ಲ ಮಹಿಳಾ ದೌರ್ಜನ್ಯಗಳ ದಾಖಲೆ ಮುರಿದು ಹಾಕಿದ್ದಾರೆ. ದೇಶದ ಪ್ರಧಾನಿ ತಮ್ಮ ಪ್ರತಿ ಭಾಷಣದಲ್ಲಿ ಕುಟುಂಬ ರಾಜಕಾರಣ ಹಾಗೂ ಬೇಟಿ ಬಚಾವೋ, ಬೇಟಿ ಪಡಾವೋ ಎಂದು ಹೇಳುತ್ತಲೇ ಇರುತ್ತಾರೆ. ಅವರ ಮಾತಿಗೆ ಏನಾದರೂ ಅರ್ಥವಿದೆಯೇ” ಎಂದು ಎಐಸಿಸಿ ಮಹಿಳಾ ಘಟಕದ ರಾಷ್ಟ್ರೀಯ ಅಧ್ಯಕ್ಷೆ ಅಲಕಾ ಲಂಬಾ ಪ್ರಶ್ನಿಸಿದರು.

- Advertisement -

ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿ, “ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ಪ್ರಜ್ವಲ್ ರೇವಣ್ಣ, ಬಿಜೆಪಿಯ ಕುಲ್ ದೀಪ್ ಸಿಂಗ್, ಉತ್ತರ ಪ್ರದೇಶದ ರಾಮ್ ದುಲ್ಹಾರೆ, ಬ್ರಿಜ್ ಭೂಷಣ್ ಸಿಂಗ್, ಹರಿಯಾಣದ ಸಚಿವ ಸಂದೀಪ್ ಸಿಂಗ್ ಇವರೆಲ್ಲಾ ಮಹಿಳೆಯರು, ಬಾಲಕಿಯರ ಮೇಲೆ ದೌರ್ಜನ್ಯ ಎಸಗಿದವರು. ಇವರೇ ನಿಜವಾದ ಮೋದಿ ಪರಿವಾರದವರು. ಇದೇ ಮೋದಿ ಅವರ ಪರಿವಾರ ವಾದದ ಅರ್ಥ” ಎಂದು ಕುಟುಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಪ್ರಜ್ವಲ್ ರೇವಣ್ಣ 2 ಸಾವಿರಕ್ಕೂ ಹೆಚ್ಚು ಬಾರಿ ಇಂತಹ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ. ನಮ್ಮ ಹೆಣ್ಣು ಮಕ್ಕಳ ಜೊತೆ ಕೆಟ್ಟದಾಗಿ ನಡೆದುಕೊಂಡಿದ್ದಾನೆ. ಮೋದಿಯವರು ಮಾತೆತ್ತಿದರೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುತ್ತಾರೆ. ಆದರೆ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಜೊತೆ ನಿಂತು ಪ್ರಧಾನಿಗಳು ಫೋಟೋಗೆ ಪೋಜು ಕೊಡುತ್ತಾರೆ. ಆದರೆ ಭಾಷಣದಲ್ಲಿ ಮಾತ್ರ ಕುಟುಂಬ ರಾಜಕಾರಣ ಮತ್ತು ಬೇಟಿ ಬಚಾವೋ ಬಗ್ಗೆ ಮಾತನಾಡುತ್ತಾರೆ” ಎಂದು ವಾಗ್ದಾಳಿ ನಡೆಸಿದರು.

“ನಮ್ಮ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳನ್ನು ತಿಳಿಸಬೇಕು. ಏಕೆಂದರೆ ಈ ಘಟನೆ ಬೆಳಕಿಗೆ ಬಂದ ತಕ್ಷಣ ಗಂಭೀರತೆ ಅರಿತು ಎಸ್ ಐಟಿ ರಚನೆಗೆ ಆದೇಶ ನೀಡಿದ್ದಾರೆ” ಎಂದರು.

“ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ ಅನೇಕ ಜನ ವಿದೇಶಕ್ಕೆ ಓಡಿ ಹೋಗಿದ್ದಾರೆ. ಹಣಕಾಸಿನ ವಿಚಾರದಲ್ಲಿ ದೇಶಕ್ಕೆ ಮೋಸ ಮಾಡಿ ಹೋಗಿದ್ದಾರೆ. ಅದೇ ರೀತಿ ಪ್ರಜ್ವಲ್ ರೇವಣ್ಣನೂ ಸಹ ಅದೇ ಹಾದಿ ತುಳಿದಿದ್ದಾರೆ” ಎಂದು ಹೇಳಿದರು.

“2023 ಡಿಸೆಂಬರ್ ತಿಂಗಳಲ್ಲೇ ಬಿಜೆಪಿ ಮುಖಂಡ ದೇವರಾಜೇಗೌಡ ಈ ಕೃತ್ಯಗಳ ಬಗ್ಗೆ ಪತ್ರ ಬರೆದು ಈ ಘಟನೆಗಳ ಬಗ್ಗೆ ಎಚ್ಚರಿಕೆ ನೀಡಿದ್ದರು. ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡರೆ ಬಿಜೆಪಿಗೆ ಹೊಡೆತ ಬೀಳುವುದು ಖಂಡಿತಾ ಎಂದು ಕೇಳಿದ್ದರು. ಆದರೂ ಸಹ ಮೈತ್ರಿ ಮಾಡಿಕೊಳ್ಳಲಾಯಿತು. ಇಷ್ಟೊಂದು ಘೋರ ಘಟನೆ ನಡೆದಿದ್ದರೂ ಸಹ ಬಿಜೆಪಿಯ ಒಬ್ಬನೇ ಒಬ್ಬ ನಾಯಕನೂ ಬಾಯಿ ಬಿಟ್ಟಿಲ್ಲ. ಸ್ಮೃತಿ ಇರಾನಿ, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರೇ, ಅಮಿತ್ ಶಾ, ಪ್ರಧಾನಿ ಮೋದಿ ಅವರೇ ಎಲ್ಲಿದ್ದೀರಿ? 2 ಜೂನ್ 2023 ರಲ್ಲಿ ನ್ಯಾಯಲಯದಿಂದ ಆದೇಶ ತಂದಿದ್ದ ಪ್ರಜ್ಷಲ್ ರೇವಣ್ಣ ಅವರ ವಿರುದ್ದ ಯಾವುದೇ ಸುದ್ದಿ, ವಿಡಿಯೋಗಳನ್ನು ಪ್ರಸಾರ ಮಾಡಬಾರದು ಎಂದು ತಡೆಯಾಜ್ಞೆ ತಂದಿದ್ದರು. ಅಂದರೆ ಈ ವಿಚಾರ ಎಲ್ಲರಿಗೂ ತಿಳಿದಿತ್ತು ಆದರೂ ಇದರ ಬಗ್ಗೆ ಕ್ರಮ ತೆಗೆದುಕೊಂಡಿಲ್ಲ” ಎಂದು ಕೇಳಿದರು.

“ಅಧಿಕಾರದ ಮದದಿಂದ ಈ ಕೃತ್ಯಗಳು ನಡೆದಿದೆ. ತನ್ನ ಅಧಿಕಾರವನ್ನು ಬಳಸಿಕೊಂಡು ಬಡ, ಅಮಾಯಕ ಹೆಣ್ಣು ಮಕ್ಕಳ ಮಾನಹಾನಿಯಾಗಿದೆ. ಪ್ರಧಾನ ಮಂತ್ರಿಗಳೇ ಜೊತೆಗಿರುವಾಗ ಆತ ಏಕೆ ಭಯಪಡಬೇಕು. ಅದಕ್ಕೆ ಸಾವಿರಾರು ವಿಡಿಯೋಗಳನ್ನು ಮಾಡಿದ್ದಾನೆ. ಕಾನೂನಿನ ಭಯವಿಲ್ಲದೆ ಕೃತ್ಯ ಎಸಗಿದ್ದಾನೆ” ಎಂದು ಹರಿಹಾಯ್ದರು..

ಆನ್ ಲೈನ್ ಮೂಲಕ ದೂರು ದಾಖಲಿಸಿ

“ಶೋಷಣೆಗೆ ಒಳಗಾದ ಹೆಣ್ಣುಮಕ್ಕಳ ಗುರುತನ್ನು ಅದಷ್ಟು ಗುಪ್ತವಾಗಿ ಇರಿಸಿ ಎಂದು ಎಸ್‌ಐಟಿಯಲ್ಲಿ ಮನವಿ ಮಾಡುತ್ತೇನೆ. ಹಾಗೂ ಅನ್ಯಾಯಕ್ಕೆ ಒಳಗಾದ ಎಲ್ಲಾ ಮಹಿಳೆಯರ ಪರವಾಗಿ ನಾವು ಇರುತ್ತೇವೆ. ನೀವು ಮುಂದೆ ಬಂದು ಆರೋಪಿ ತಪ್ಪಿಸಿಕೊಳ್ಳದಂತೆ ದೂರು ನೀಡಬೇಕು. ಪೊಲೀಸ್ ಠಾಣೆಗೆ ಬರಲು ಹೆದರಿಕೆಯಾದರೆ ಆನ್ ಲೈನ್ ಮೂಲಕ ದೂರು ದಾಖಲಿಸಿ” ಎಂದರು.

ಹೀನ ಘಟನೆ : ಸೌಮ್ಯರೆಡ್ಡಿ

“ಕರ್ನಾಟಕದ ಇತಿಹಾಸದಲ್ಲಿ ಇಂತಹ ಹೀನ ಘಟನೆ ನಡೆಯುತ್ತದೆ ಎಂದು ಕನಸಿನಲ್ಲಿಯೂ ಎಣಿಸಿರಲಿಲ್ಲ. ದೇಶದ ಶೇ 50 ರಷ್ಟು ಜನಸಂಖ್ಯೆ ನಾವಿದ್ದೇವೆ. ನಮ್ಮನ್ನು ದೇವರ ಹೆಸರಿನಲ್ಲಿ ಪೂಜೆ ಮಾಡುತ್ತಾರೆ. ಹೆಣ್ಣು ದೇವರುಗಳಿಗೆ ಪೂಜೆ ಮಾಡುವುದು ಬೇಡ. ಗೌರವ ರಕ್ಷಣೆ ಕೊಟ್ಟರೇ ಸಾಕು” ಎಂದು ಸೌಮ್ಯರೆಡ್ಡಿ ಹೇಳಿದರು.

“ಮೈತ್ರಿ ಅಭ್ಯರ್ಥಿಯಾದ ಪ್ರಜ್ವಲ್ ರೇವಣ್ಣ ಅವರ ಈ ಹೀನ ಕೃತ್ಯಗಳ ಬಗ್ಗೆ ಬಿಜೆಪಿಯ ಅಧ್ಯಕ್ಷ ವಿಜಯೇಂದ್ರ, ಪ್ರಧಾನಿ ಮೋದಿ, ಅಮಿತ್ ಶಾ ಅವರಿಗೆ ಈ ವಿಚಾರಗಳು ಗೊತಿದ್ದರೂ ಟಿಕೆಟ್ ನೀಡಿದ್ದು ಮಹಿಳೆಯರಿಗೆ ಅವಮಾನ ಮಾಡಿದ್ದಾರೆ” ಎಂದು ಕಿಡಿಕಾರಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...