ಕಚೇರಿಯಿಂದ ಅಂಬೇಡ್ಕರ್‌, ವಾಲ್ಮೀಕಿ ಫೋಟೊ ತೆಗೆದ ಆರೋಪ: ಪ್ರಲ್ಹಾದ ಜೋಶಿ ವಿರುದ್ಧ ಕಾಂಗ್ರೆಸ್ ಆಕ್ರೋಶ

Date:

ಕೇಂದ್ರ ಸಚಿವ ಹಾಗೂ ಧಾರವಾಡ ಕೇತ್ರದ ಲೋಕಸಭಾ ಅಭ್ಯರ್ಥಿ ಪ್ರಲ್ಹಾದ ಜೋಶಿ ಅವರು ತಮ್ಮ ಕಚೇರಿಯಲ್ಲಿದ್ದ ವಾಲ್ಮಿಕಿ ಮಹರ್ಷಿ ಮತ್ತು ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಫೋಟೊಗಳನ್ನು ತೆಗೆಸಿದ್ದಾರೆ ಎಂದು ಆರೋಪಿಸಲಾಗಿದೆ.

- Advertisement -

ಧಾರವಾಡ ಕೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಅವರು ಈಗಾಗಲೇ ಲಿಂಗಾಯತರ ವಿರೋಧ ಕಟ್ಟಿಕೊಂಡಿದ್ದು ಈಗ ಕಚೇರಿಯಿಂದ ಅಂಬೇಡ್ಕರ್‌ ಮತ್ತು ವಾಲ್ಮಿಕಿ ಫೋಟೊ ತೆಗೆಸುವ ಮೂಲಕ ದಲಿತ ಮತ್ತು ನಾಯಕ ಸಮುದಾಯಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಪ್ರಲ್ಹಾದ ಜೋಶಿ ಅವರು ತಮ್ಮ ಕಚೇರಿಯಿಂದ ಅಂಬೇಡ್ಕರ್‌ ಮತ್ತು ವಾಲ್ಮಿಕಿ ಫೋಟೊ ತೆಗೆಸುವ ವಿಡಿಯೋ ಒಂದನ್ನು ಸುದ್ದಿ ಸಂಸ್ಥೆಯೊಂದು ಪ್ರಸಾರ ಮಾಡಿದ್ದು ಈ ಸುದ್ದಿಯನ್ನು ಎಕ್ಸ್‌ನಲ್ಲಿ (ಟ್ವಿಟ್ಟರ್‌) ಕಾಂಗ್ರೆಸ್ ಪೋಸ್ಟ್ ಮಾಡಿದೆ.


“ಬಿಜೆಪಿ & ಆರೆಸ್ಸೆಸ್‌ಗೆ ಅಂಬೇಡ್ಕರ್ ಕಂಡರೆ ಕೋಪ, ಬಸವಣ್ಣನ ಕಂಡರೆ ದ್ವೇಷ, ವಾಲ್ಮೀಕಿಯನ್ನು ಕಂಡರೆ ಅಸಹನೆ” ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನು ಓದಿದ್ದೀರಾ?  ಸಿದ್ದರಾಮಯ್ಯ ಅವರಷ್ಟು ನೀಚತನಕ್ಕೆ ನಾವು ಇಳಿಯುವುದಿಲ್ಲ: ಪ್ರಲ್ಹಾದ ಜೋಶಿ ಕಿಡಿ

“ಸಂಘಪರಿವಾರದ ಮುದ್ದಿನ ಕೂಸಾದ ಪ್ರಲ್ಹಾದ ಜೋಶಿ ಅವರು ತಮ್ಮೊಳಗಿನ ಲಿಂಗಾಯತ, ದಲಿತ, ಹಿಂದುಳಿದ ವರ್ಗಗಳ ಮೇಲಿನ ದ್ವೇಷವನ್ನು ಮಹನೀಯರ ಫೋಟೊವನ್ನು ಹೊರಹಾಕುವ ಮೂಲಕ ವ್ಯಕ್ತಪಡಿಸಿದ್ದಾರೆ” ಎಂದು ಕಾಂಗ್ರೆಸ್ ದೂರಿದೆ.

“ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದ ಅಡಿಯಲ್ಲೇ ಚುನಾವಣೆ ನಿಂತಿದ್ದರೂ ಅಂಬೇಡ್ಕರ್ ಅವರನ್ನು ಆಚೆ ಎಸೆಯುವ ಸಂಘದ ಮನಸ್ಥಿತಿಯನ್ನು ನಾಡಿನ ಜನತೆ ಸಹಿಸುವುದಿಲ್ಲ. ಬಿಜೆಪಿ ಹಾಗೂ ಜೋಷಿಯ ದುರಹಂಕಾರ ಪರಮಾವಧಿಗೆ ತಲುಪಿದೆ, ಜನತೆ ಬಿಜೆಪಿಯನ್ನು ಹೆಸರಿಲ್ಲದಂತೆ ನಿರ್ನಾಮ ಮಾಡಲಿದ್ದಾರೆ” ಎಂದು ಕಾಂಗ್ರೆಸ್ ಹೇಳಿದೆ.

ಈ ಸುದ್ದಿಯ ಕುರಿತು ಬಿಜೆಪಿ ಅಥವಾ ಪ್ರಲ್ಹಾದ ಜೋಶಿ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...

ದೇಹದ ಅಪಹಾಸ್ಯ, ನಿಂದನೆ ಮಾತ್ರವೇ ಮಹಿಳೆಯ ಮರ್ಯಾದೆ ಭಂಗದ ಅಪರಾಧವಲ್ಲ: ಹೈಕೋರ್ಟ್

ಕೇವಲ ದೇಹದ ಅಪಹಾಸ್ಯ (ಬಾಡಿ ಶೇಮಿಂಗ್‌) ಮತ್ತು ಅವಾಚ್ಯವಾಗಿ ನಿಂದಿಸುವುದು ಐಪಿಸಿ...