ಬಡವರಿಗೆ ಆರ್ಥಿಕ ಶಕ್ತಿ ತುಂಬಿದ ಗ್ಯಾರಂಟಿಗಳನ್ನು ‘ಬಿಟ್ಟಿ ಭಾಗ್ಯ’ ಎಂದು ಮತ್ತೆ ಹಂಗಿಸಿದ ಪ್ರಲ್ಹಾದ್‌ ಜೋಶಿ

Date:

Advertisements

ಬಡವರಿಗೆ ಆರ್ಥಿಕಾವಗಿ ನೆರವಾಗಲೆಂದು ಕಾಂಗ್ರೆಸ್‌ ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿ ಯೋಜನೆಗಳನ್ನು ಹಂಗಿಸಿ ಮಾತನಾಡುವ ಮೂಲ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ.

ವಿಧಾನ ಪರಿಷತ್ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಪ್ರಯುಕ್ತ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್‌ ಟೀಕಿಸುವ ಭರದಲ್ಲಿ ಗ್ಯಾರಂಟಿಗಳನ್ನು ಬಿಟ್ಟಿ ಭಾಗ್ಯ ಎಂದು ಕರೆದಿದ್ದಾರೆ.

“ಬಿಟ್ಟಿ ಭಾಗ್ಯಗಳನ್ನು ಘೋಷಿಸಿ ನಾಡಿನ ಖಜಾನೆಯನ್ನು ಕಾಂಗ್ರೆಸ್ ಬರಿದು ಮಾಡುತ್ತಿದೆ. ಸ್ವಾತಂತ್ರ್ಯ ಬಂದ ಬಳಿಕ 60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ದೇಶವನ್ನು ದೋಚುತ್ತಲೇ ಬಂದಿದೆ. ಈಗ ಭ್ಯಾಗದ ಹೆಸರಿನಲ್ಲಿ ಲೂಟಿ ಮಾಡುತ್ತಿದೆ” ಎಂದು ಹೇಳಿ ಮತಯಾಚಿಸಿದ್ದಾರೆ.

Advertisements

“ದೇಶದ ನಾಗರಿಕರಿಗೆ ನಿಜವಾಗಿಯೂ ಬೇಕಾಗಿರುವುದು ಶಿಕ್ಷಣ, ಆರೋಗ್ಯ, ಉದ್ಯೋಗ, ವಸತಿ. ಆದರೆ, ಇದಕ್ಕೆ ಪೂರಕ ಮೂಲ ಸೌಕರ್ಯಗಳನ್ನು ಒದಗಿಸುವುದರ ಬಗ್ಗೆ ಯಾವ ಯೋಜನೆಯೂ ಕಾಂಗ್ರೆಸ್ಸಿಗರಲ್ಲಿ ಇಲ್ಲ. ದೇಶದ ಅಭಿವೃದ್ಧಿಗಾಗಿ ಯಾವ ಯೋಚನೆ, ಯೋಜನೆಯೂ ಕಾಂಗ್ರೆಸ್ ಬಳಿ ಇಲ್ಲ. ಇಂಥವರ ಕೈಗೆ ಅಧಿಕಾರ ಹೋದರೆ ಜನರು ಅಧೋಗತಿ ತಲುಪುತ್ತಾರೆ” ಎಂದು ಟೀಕಿಸಿದ್ದಾರೆ.

“ಕಾಂಗ್ರೆಸ್ ಆಡಳಿತದಲ್ಲಿ ಇರುವ ಕರ್ನಾಟಕವೂ ಶ್ರೀಲಂಕಾ ಮತ್ತು ಕೇರಳ ಕಂಡಂತಹ ದುಸ್ಥಿತಿಯನ್ನೇ ಮುಂದೆ ಕಾಣಬೇಕಾದೀತು. ಜನತೆ ಈ ಬಗ್ಗೆ ಎಚ್ಚರದಿಂದ ಇರಬೇಕು” ಎಂದು ಹೇಳಿದರು.

“ಕಳೆದ ಹತ್ತು ವರ್ಷದಿಂದ ಬಿಜೆಪಿ ಆಡಳಿತದಲ್ಲಿ ಸಮೃದ್ಧ ಭಾರತವನ್ನು ಸೃಷ್ಟಿಸಲಾಗುತ್ತಿದೆ. ಸಮರ್ಥ, ಸಶಕ್ತ ಭಾರತ ನಿರ್ಮಾಣಕ್ಕಾಗಿ ಮತ್ತೆ ಮತ್ತೆ ಬಿಜೆಪಿಯನ್ನೇ ಅಧಿಕಾರಕ್ಕೆ ತರಬೇಕು” ಎಂದು ಪದವೀಧರ ಮತದಾರರಲ್ಲಿ ಜೋಶಿ ಮನವಿ ಮಾಡಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್, ಶಾಸಕ ಕೃಷ್ಣ ನಾಯ್ಕ, ಮಾಜಿ ಸಚಿವ ಆನಂದ ಸಿಂಗ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಚನ್ನಬಸವನ ಗೌಡ, ಎಸ್ಟಿ ಮೋರ್ಚಾ ಪ್ರಮುಖರಾದ ಬಂಗಾರು ಹನಮಂತ, ಹಾಗೂ ಪಕ್ಷದ ಪ್ರಮುಖರು ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಸೌಜನ್ಯ ಹೋರಾಟ ಮುಂದುವರಿಯಲಿದೆ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಧರ್ಮಸ್ಥಳ | ದೂರುದಾರನ ಹಿನ್ನೆಲೆ ತಿಳಿದುಕೊಂಡಿದ್ದರೆ ಸರ್ಕಾರದ ದುಡ್ಡು ಉಳೀತಿತ್ತು: ಆರ್. ಅಶೋಕ್

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಡಲಾಗಿದೆ ಎಂದು ದೂರು ಕೊಟ್ಟಿದ್ದ ಸಾಕ್ಷಿ ದೂರುದಾರನನ್ನು...

ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಬಂಧಿಸಿದ ಇಡಿ: ನಗದು ಸಹಿತ ಚಿನ್ನಾಭರಣ ವಶಕ್ಕೆ

ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ, ಕಚೇರಿ ಸೇರಿದಂತೆ 31...

Download Eedina App Android / iOS

X