ಬಿಹಾರ ಚುನಾವಣೆ | ಹೀನಾಯ ಸೋಲಿನ ನಂತರ ಎಲ್ಲಾ ಸಾಂಸ್ಥಿಕ ಘಟಕಗಳ ವಿಸರ್ಜಿಸಿದ ಪ್ರಶಾಂತ್ ಕಿಶೋರ್‌ನ ಪಕ್ಷ

Date:

ಬಿಹಾರ ಚುನಾವಣೆಯಲ್ಲಿ ತೀರಾ ಕಳಪೆ ಪ್ರದರ್ಶನ ತೋರಿದ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನೇತೃತ್ವದ ಜನ ಸುರಾಜ್ ಪಕ್ಷವು ಶನಿವಾರ ಪಂಚಾಯತ್ ಮಟ್ಟದಿಂದ ರಾಜ್ಯ ಮಟ್ಟದವರೆಗೆ ತನ್ನ ಎಲ್ಲಾ ಸಾಂಸ್ಥಿಕ ಘಟಕಗಳನ್ನು ವಿಸರ್ಜಿಸಿದೆ.

- Advertisement -

ರಾಜ್ಯ ಅಧ್ಯಕ್ಷ ಮನೋಜ್ ಭಾರ್ತಿ ಅಧ್ಯಕ್ಷತೆಯಲ್ಲಿ ಪಟನಾದಲ್ಲಿ ರಾಷ್ಟ್ರೀಯ ಮಂಡಳಿ ಸಭೆ ನಡೆದಿದ್ದು ಈ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಜನ ಸುರಾಜ್ ಪಕ್ಷದ ವಕ್ತಾರ ಸೈಯದ್ ಮಸಿಹ್ ಉದ್ದೀನ್ ಹೇಳಿಕೆ ನೀಡಿದ್ದು, “ಮುಂದಿನ ಒಂದೂವರೆ ತಿಂಗಳಲ್ಲಿ ಹೊಸ ಘಟಕಗಳನ್ನು ರಚಿಸಲಾಗುವುದು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಇದನ್ನು ಓದಿದ್ದೀರಾ? ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ‘ಬಿಜೆಪಿ ಏಜೆಂಟ್’ : ತೇಜಸ್ವಿ ಯಾದವ್

ಮಾಜಿ ಸೇನಾ ಉಪಾಧ್ಯಕ್ಷ ಎಸ್‌ಕೆ ಸಿಂಗ್, ಮಾಜಿ ಕೇಂದ್ರ ಸಚಿವ ರಾಮಚಂದ್ರ ಪ್ರಸಾದ್ ಸಿಂಗ್ ಮತ್ತು ಹಿರಿಯ ವಕೀಲ ವೈವಿ ಗಿರಿ ಮುಂತಾದ ಪಕ್ಷದ ನಾಯಕರೊಂದಿಗೆ ಕಿಶೋರ್ ಕೂಡ ಸಭೆಯಲ್ಲಿ ಉಪಸ್ಥಿತರಿದ್ದರು.

“ಪಕ್ಷವು ತನ್ನ ಹಿರಿಯ ನಾಯಕರಿಗೆ ರಾಜ್ಯದ 12 ವಿಭಾಗಗಳ ಜವಾಬ್ದಾರಿಯನ್ನು ವಹಿಸಿದ್ದು ಅವರು ಪರಿಣಾಮಕಾರಿ ಮತ್ತು ಸಕ್ರಿಯ ಸಾಂಸ್ಥಿಕ ರಚನೆಯನ್ನು ಪುನರ್ನಿರ್ಮಿಸುತ್ತಾರೆ. ಪಕ್ಷದ ನಾಯಕರ ಈ ತಂಡವು ಸೋಲಿಗೆ ಕಾರಣ ಗುರುತಿಸುವ ಕಾರ್ಯ ಮಾಡುತ್ತದೆ. ಅಶಿಸ್ತು ಅಥವಾ ಆಂತರಿಕ ದ್ರೋಹ ಮಾಡಿದ ನಾಯಕರ ಬಗ್ಗೆ ವರದಿಯನ್ನು ಸಲ್ಲಿಸಲಿದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಬಿಹಾರ ಚುನಾವಣೆಯಲ್ಲಿ ಗೇಮ್ ಚೇಂಜರ್ ಆಗುವುದಾಗಿ ಹೇಳಿಕೊಂಡಿದ್ದ ಪ್ರಶಾಂತ್ ಕಿಶೋರ್‌ ಅವರ ಪಕ್ಷವು ಖಾತೆ ತೆರೆಯುವಲ್ಲಿ ವಿಫಲವಾಗಿದೆ. ಹಾಗೆಯೇ ಅಧಿಕ ಅಭ್ಯರ್ಥಿಗಳು ಠೇವಣಿಯನ್ನೂ ಕಳೆದುಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಉಪಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ಟಿವಿಕೆ, ಬಂಗಾಳದಲ್ಲಿ ಬಿಜೆಪಿಗೆ ಜಯ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೆಜಿನಗರ ವಿಧಾನಸಭಾ ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು...

ಪ್ರತಿಭಟನೆ ಹಿನ್ನೆಲೆ ಮೆಟ್ರೋ ಬಂದ್; ‘ನೊಣ ಕೊಲ್ಲೋಕೆ ಸುತ್ತಿಗೆ ಬೇಡ’ – ಮಾರ್ಮಿಕವಾಗಿ ನುಡಿದ ಸುಪ್ರೀಂ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಿರುವ ಪ್ರತಿಭಟನೆಯನ್ನು ತಡೆಯಲು...