ಪ್ರವೀಣ್, ಹರ್ಷ ಕೊಲೆಯಾದಾಗ ಬಿಜೆಪಿ ಸರ್ಕಾರ ಎನ್‌ಕೌಂಟರ್ ಮಾಡಿಸಬೇಕಿತ್ತು; ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ

Date:

ಬೆಳ್ಳಾರೆಯ ಪ್ರವೀಣ್ ನೆಟ್ಟಾರ್ ಕೊಲೆಯಾದಾಗ, ಶಿವಮೊಗ್ಗದಲ್ಲಿ ಹರ್ಷ ಹತ್ಯೆಯಾದಾಗ ಕೊಲೆಗಡುಕರು ಇರುವ ಜಾಗ ಗೊತ್ತಾಗಿತ್ತು. ಪೋಲೀಸರ ಕೈಯಲ್ಲಿ ಬಂದೂಕ ಇತ್ತು. ಪೊಲೀಸರ ಎದೆಯಲ್ಲಿ ಗುಂಡಿಗೆಯೂ ಇತ್ತು. ಆರೋಪಗಳ ಎದೆಗೆ ಗುಂಡಿಟ್ಟು ಎನ್‌ಕೌಂಟರ್ ಮಾಡಬಹುದಿತ್ತು. ಆದರೆ, ಟ್ರಿಗರ್ ಎಳೆಯುವಂತೆ ಆದೇಶ ನೀಡಲು ಬಿಜೆಪಿ ಸರ್ಕಾರವನ್ನು ತಡೆದವರಾರು? ಹಾಗಾಗಿಯೇ ಕರ್ನಾಟಕಕ್ಕೂ ಒಬ್ಬ ಯೋಗಿ ಬೇಕು ಎಂದು ‌ಮಾಜಿ ಸಂಸದ ಪ್ರತಾಪ್‌ ಸಿಂಹ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ವಿಶ್ವಹಿಂದು ಪರಿಷದ್ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಪ್ರಸ್ತುತ ರಾಜಕೀಯ ಸನ್ನಿವೇಶದಲ್ಲಿ ಕರ್ನಾಟಕಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಂಥಹ ನಾಯಕತ್ವ ಬೇಕಾಗಿದೆ. ಅಂತಹ ನಾಯಕತ್ವವನ್ನು ಹಿಂದೂ ಸಂಘಟನೆಗಳು ಸೃಷ್ಠಿಸಬೇಕು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ವಿಚಾರ, ಧರ್ಮಕ್ಕೆ ನಿಷ್ಠೆ ಇರುವ ಎದೆಗಾರಿಕೆ ಇರುವ ನಾಯಕತ್ವ ಬಿಜೆಪಿಗೆ ಬೇಕು. ಅಲ್ಲದೇ ಧರ್ಮದ ಬಗ್ಗೆ ಪ್ರೀತಿ, ಅಭಿಮಾನ ಇದೆಯೇ ಎಂಬುದನ್ನು ನಾವು ಆತ್ಮ ವಿಮರ್ಶೆ ಮಾಡಿಬೇಕು. ಧರ್ಮದ ಬಗೆಗಿನ ಆಭಿಮಾನ ಶೂನ್ಯತೆಯಿಂದ ಹೊರ ಬರಬೇಕು. ವಸುದೈವ ಕುಟುಂಬಕಂ ಎಂದು ಹಿಂದೂ ಸಮಾಜ ಶಾಂತಿ ಮತ್ತು ಸದ್ಭಾವನೆಯನ್ನು ಸದಾ ಬೋಧಿಸಿದೆ. ಜಗತ್ತಿನಲ್ಲಿ ಶಾಂತಿ, ಸದ್ಭಾವನೆ ನೆಲೆಯಾಗಲು ಎಲ್ಲರೂ ಅದನ್ನು ಪಾಲಿಸಬೇಕು” ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

“ಖಗೋಳ ವಿಜ್ಞಾನದ ಬಗ್ಗೆ, ಗೃಹಗಳ ಬಗ್ಗೆ, ಸೂರ್ಯನ ಬಗ್ಗೆ ಸಹಸ್ರಾರು ವರ್ಷಗಳ ಹಿಂದೆ ಹಿಂದೂ ಧರ್ಮ ತಿಳಿಸಿದೆ. ನಮ್ಮ ಧರ್ಮ, ಸಂಸ್ಕೃತಿ ಯ ಬಗ್ಗೆ ನಮ್ಮ ಮಕ್ಕಳಿಗೆ ತಿಳಿಸುವ ಮನಸ್ಸು ಮಾಡಬೇಕು. ನಾವು ಒಟ್ಟಾಗಿದ್ದರೆ ಮಾತ್ರ ನಮ್ಮ ಧರ್ಮ, ಸಂಸ್ಕೃತಿ ಉಳಿಯಲು ಸಾಧ್ಯ. ವೈವಿಧ್ಯತೆಯಲ್ಲಿ ಏಕತೆ ಇರುವುದು ಹಿಂದೂ ಸಮಾಜದಲ್ಲಿ‌ ಮಾತ್ರ” ಎಂದು ಬಿಜೆಪಿಯ ಹಿಂದುತ್ವ ಕೋಮುವಾದಿ ಸಿದ್ದಾಂತವನ್ನು ಸಮರ್ಥಿಸಿಕೊಂಡಿದ್ದಾರೆ.

ಈ ವರದಿ ಓದಿದ್ದೀರಾ?: ಕಾಮುಕರನ್ನು ಸಾಕುತ್ತಿದೆ ಬಿಜೆಪಿ; ಇನ್ನೆಲ್ಲಿ ಮಹಿಳೆಯರ ರಕ್ಷಣೆ?

ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ಗಿಟ್ಟಿಸಿಕೊಳ್ಳುವಲ್ಲಿ ವಿಫಲರಾಗಿರುವ ಪ್ರತಾಪ್ ಸಿಂಹ, ರಾಜ್ಯ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ ಹೊಂದಿದ್ದಾರೆ. ಈ ಹಿಂದೆ, ನೆಪೋಟಿಸಂ (ಕುಟುಂಬ ರಾಜಕಾರಣ) ಬಗ್ಗೆ ಮಾತನಾಡಿದ್ದ ಪ್ರತಾಪ್ ಸಿಂಹ, ”ಯಡಿಯೂರಪ್ಪ, ಖರ್ಗೆ, ಕುಮಾರಣ್ಣ, ದೇವೇಗೌಡ ಎಲ್ಲರಿಗೂ ತಮ್ಮ ಮಕ್ಕಳ ಬಗ್ಗೆಯೇ ಚಿಂತಿಸಿದರೆ, ಕಂಡವರ ಮಕ್ಕಳನ್ನು ಬೆಳೆಸುವವರಾರು? ಕಂಡವರ ಮಕ್ಕಳನ್ನು ಬೆಳೆಸಿದ ದೇವರಾಜ್ ಅರಸ್ ದೇವರಾದರು. ಈಗಿನ ನಾಯಕರು ತಮ್ಮ ಮಕ್ಕಳ ಬಗ್ಗೆ ಚಿಂತೆ ಮಾಡುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ, ಹಿಂದಿನ ಬಿಜೆಪಿ ಸರ್ಕಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...