ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025 -26 ನೇ ಸಾಲಿನ ಬಜೆಟ್ ಮಂಡನೆ ಮಾಡಲು ನಡೆಸುತ್ತಿರುವ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಅಲ್ಪಸಂಖ್ಯಾತರ ಮುಖಂಡರನ್ನು ಹೊರಗಿಟ್ಟು ಸಭೆ ನಡೆಸುವುದು ಅತ್ಯಂತ ಕೀಳು ಮಟ್ಟದ ರಾಜಕಾರಣವಾಗಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಅಡ್ವೋಕೇಟ್ ತಾಹೇರ್ ಹುಸೇನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಅಲ್ಪಸಂಖ್ಯಾತರ ಸಮುದಾಯ ಕಾಂಗ್ರೆಸ್ ಪಕ್ಷಕ್ಕೆ ಪೂರ್ಣ ಮತ ಬೆಂಬಲ ನೀಡಿತ್ತು ರಾಜ್ಯದಲ್ಲಿ ಆಡಳಿತ ಹಾಗೂ ಕೇಂದ್ರಕ್ಕೆ ಒಂಬತ್ತು ಲೋಕಸಭಾ ಸದಸ್ಯರನ್ನು ಆರಿಸುವ ಮೂಲಕ ಈ ರಾಜ್ಯದ ಅಲ್ಪಸಂಖ್ಯಾತರ ಪಾತ್ರ ಮಹತ್ವದಾಗಿತ್ತು ಆದರು ಬಜೆಟ್ ಪೂರ್ವಭಾವಿ ಸಭೆಯಲ್ಲಿ ಸಮುದಾಯದ ನಾಯಕರನ್ನು ಕಡೆಗಣಿಸಿರುವುದು ವಿಷಾದಕಾರ ಸಂಗತಿಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದು ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಹಾಗೂ ಸಮುದಾಯಕ್ಕೆ ಮಾಡಿರವು ಅಪಮಾನ ವಾಗಿದೆ.
ಸಮುದಾಯ ವನ್ನು ಹೊರಗಿಟ್ಟು ಮಾಡುವ ಈ ಸಭೆ ಕೇವಲ ಕಾಟಾಚಾರದ ಸಭೆ ಆಗಲಿದೆ ಎಂದು ಅವರು ಹೇಳಿದ್ದಾರೆ.
ಇದನ್ನು ಓದಿದ್ದೀರಾ? ಕಾರವಾರ | ಪಾಕ್ ಬೇಹುಗಾರರಿಗೆ ನೌಕಾನೆಲೆ ಮಾಹಿತಿ ನೀಡಿದ ಆರೋಪ; ಇಬ್ಬರ ಬಂಧನ
ಮುಸ್ಲಿಂ ಸಮುದಾಯವನ್ನು ಕೇವಲ ಮತ ಬ್ಯಾಂಕ್ ಆಗಿ ಬಳಸುವ ಕಾಂಗ್ರೆಸ್ ಚಾಳಿ ಇದರಿಂದ ಬಹಿರಂಗಗೊಂಡಿದೆ. ಸಮುದಾಯದ ಮುಖಂಡರು ಈಗಲಾದರೂ ಎಚ್ಚೆತ್ತುಕೊಳ್ಳ ಬೇಕು ಮತ್ತು ಸರ್ಕಾರದ ಈ ನಡೆಯನ್ನು ಪ್ರಶ್ನಿಸಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಅಡ್ವೋಕೇಟ್ ತಾಹೇರ್ ಹುಸೇನ್ ಆಗ್ರಹಿಸಿದ್ದಾರೆ.
