ಸಾಮಾಜಿಕ ನ್ಯಾಯವಿಲ್ಲದ ಬಜೆಟ್ ಪೂರ್ವ ಸಭೆಗಳು: ಸಿಎಂಗೆ ಪತ್ರ ಬರೆದು ಮುಖ್ಯಮಂತ್ರಿ ಚಂದ್ರು ಬೇಸರ

Date:

ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯಲು ಮುಖ್ಯಮಂತ್ರಿಗಳು ನಡೆಸುತ್ತಿರುವ ಬಜೆಟ್ ಪೂರ್ವ ಸಭೆಗಳಿಗೆ ಅಲ್ಪಸಂಖ್ಯಾತರ ಎಲ್ಲ ಮುಖಂಡರುಗಳನ್ನು ಕರೆದು ಇದುವರೆಗೂ ಸಭೆ ನಡೆಸದಿರುವುದು ಸಾಮಾಜಿಕ ನ್ಯಾಯದ ಪರಿಕಲ್ಪನೆಯ ಸಾಕಾರಕ್ಕೆ ಧಕ್ಕೆ ತರುವಂತಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.

- Advertisement -

ಮುಖ್ಯಮಂತ್ರಿಗಳಿಗೆ ಈ ಕುರಿತು ಪತ್ರ ಬರೆದು ತಮ್ಮ ಅಸಮಾಧಾನ ವ್ಯಕ್ತಪಡಿಸಿರುವ ಅವರು, “ಈಗಾಗಲೇ ದಲಿತ ವರ್ಗ ಹಾಗೂ ಹಿಂದುಳಿದ ವರ್ಗಗಳ ಅನೇಕ ಸಂಘ ಸಂಸ್ಥೆಗಳು ಮತ್ತು ನಾಯಕರುಗಳ ಸಭೆಗಳನ್ನು ನಡೆಸಿ ಅವರುಗಳ ಅನೇಕ ಬೇಡಿಕೆಗಳನ್ನು ಆಲಿಸಿ ಬಜೆಟ್ ಪೂರ್ವ ತಯಾರಿಯನ್ನು ನಡೆಸಿದ್ದಾರೆ. ಆದರೆ ಇದೇ ರೀತಿಯಲ್ಲಿ ರಾಜ್ಯದ ಅಲ್ಪಸಂಖ್ಯಾತರುಗಳ ಯಾವುದೇ ಸಭೆಯನ್ನು ಇದುವರೆಗೂ ನಡೆಸದೆ ಇರುವುದು ಸಾಮಾಜಿಕ ನ್ಯಾಯದ ಪರಿಕಲ್ಪನೆಗೆ ಧಕ್ಕೆ ತರುವಂತಿದೆ. ಕೇವಲ ತಮ್ಮ ಮಂತ್ರಿಮಂಡಲದ ಪ್ರಮುಖ ಸಚಿವರೊಬ್ಬರೇ ಎಲ್ಲಾ ಅಲ್ಪಸಂಖ್ಯಾತರ ಧ್ವನಿ ಎಂಬಂತೆ ಭಾಸವಾಗುತ್ತಿರುವುದು ಕಂಡುಬರುತ್ತಿದೆ” ಎಂದು ಅವಲತ್ತುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

“ರಾಜ್ಯದ ಅಲ್ಪಸಂಖ್ಯಾತರುಗಳಲ್ಲಿ ಮುಸ್ಲಿಂ ಜನಾಂಗದೊಂದಿಗೆ ಕ್ರಿಶ್ಚಿಯನ್ ,ಜೈನ್, ಬೌದ್ಧ ,ಪಾರ್ಸಿ, ಸಿಖ್ ಸಮುದಾಯಗಳು ಸಹ ಸೇರಿರುವುದು ಇತ್ತೀಚಿನ ದಿನಗಳಲ್ಲಿ ಆಳುವವರು ಮರೆಯುತ್ತಿರುವಂತಿದೆ. ಆದುದರಿಂದ ಈ ಕೂಡಲೇ ಅಲ್ಪಸಂಖ್ಯಾತರ ಎಲ್ಲ ವರ್ಗಗಳ ಮುಖಂಡರುಗಳನ್ನು ಸಂಘ ಸಂಸ್ಥೆಗಳನ್ನು ತಮ್ಮ ಬಜೆಟ್ ಪೂರ್ವ ಸಭೆಗೆ ಕರೆದು ಅವರ ಅನೇಕ ವರ್ಷಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯ ಬೇಡಿಕೆಗಳನ್ನು ಈಡೇರಿಸಲು ಮುಂದಾಗಬೇಕು ಹಾಗೂ ನೈಜ ಸಾಮಾಜಿಕ ಪರಿಕಲ್ಪನೆಯನ್ನು ಎತ್ತಿ ಹಿಡಿಯಬೇಕು” ಎಂದು ಮುಖ್ಯಮಂತ್ರಿ ಚಂದ್ರು ತಮ್ಮ ಪತ್ರದಲ್ಲಿ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಅಕ್ಟೋಬರ್ 29ರಿಂದ ನವೆಂಬರ್ 8ರವರೆಗೆ ಹಾಸನಾಂಬ ಉತ್ಸವ 

ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಶ್ರೀ ಹಾಸನಾಂಬ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ ಒಪ್ಪಂದವಿದೆ ಎಂದ ಸಂಘಟನೆ

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ...

ಹಾಸನ | ವರ್ಷಕ್ಕೊಮ್ಮೆ ನಡೆಯುವ ಹಾಸನಾಂಬ ಜಾತ್ರಾ ಮಹೋತ್ಸವ ಆರಂಭ 

ಶ್ರೀ ಹಾಸನಾಂಬೆ ದೇವಿ ದರ್ಶನೋತ್ಸವ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ...

ಹಾಸನ | ಮೊದಲು ಶಾಸಕರಿಗೆ ಗೌರವ ಕೊಡುವುದನ್ನು ಕಲಿಯಿರಿ: ಹೆಚ್. ಡಿ ರೇವಣ್ಣ 

ಜಿಲ್ಲಾಧಿಕಾರಿ ಲತಾ ಕುಮಾರಿ ಬಗ್ಗೆ ಮಾಜಿ ಸಚಿವ ಹೆಚ್​.ಡಿ.ರೇವಣ್ಣ ಮತ್ತೊಮ್ಮೆ ಕಿಡಿಕಾರಿದ್ದಾರೆ....