ಸಾಲ ಮನ್ನಾಕ್ಕಾಗಿ ಸಾಮಾಜಿಕ ಮಾಧ್ಯಮ ಬಿಜೆಪಿ ವಶಕ್ಕೆ ನೀಡಿದ ಆರೋಪ: ಪ್ರೀತಿ ಝಿಂಟಾ, ಕಾಂಗ್ರೆಸ್ ನಡುವೆ ವಾಕ್ಸಮರ

Date:

Advertisements

ಖ್ಯಾತ ನಟಿ ಪ್ರೀತಿ ಝಿಂಟಾ ಸುಮಾರು 18 ಕೋಟಿ ರೂಪಾಯಿ ಸಾಲ ಮನ್ನಾಕ್ಕೆ ಬದಲಾಗಿ ತನ್ನ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಬಿಜೆಪಿ ವಶಕ್ಕೆ ನೀಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ವರದಿಯನ್ನು ಕೇರಳ ಕಾಂಗ್ರೆಸ್ ಘಟಕ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, “ಇದೊಂದು ನೀಚ ಗಾಸಿಪ್” ಎಂದು ನಟಿ ಪ್ರೀತಿ ಝಿಂಟಾ ಹೇಳಿದ್ದಾರೆ. ಆರೋಪವನ್ನು ತಳ್ಳಿ ಹಾಕಿದ್ದಾರೆ. ಸದ್ಯ ಈ ವಿಚಾರದಲ್ಲಿ ಕೇರಳ ಕಾಂಗ್ರೆಸ್ ಮತ್ತು ನಟಿ ನಡುವೆ ವಾಕ್ಸಮರ ಏರ್ಪಟ್ಟಿದೆ.

ಕೇರಳ ಕಾಂಗ್ರೆಸ್ ಟ್ವೀಟ್‌ಗೆ ಪ್ರೀತಿ ಝಿಂಟಾ ನೀಡಿರುವ ಪ್ರತಿಕ್ರಿಯೆಗೆ ಕಾಂಗ್ರೆಸ್ ಮರು ಪ್ರತಿಕ್ರಿಯೆ ನೀಡಿದೆ. “ನಾವು ಮಾಧ್ಯಮದ ವರದಿಗಳನ್ನು ಮಾತ್ರ ಹಂಚಿಕೊಂಡಿದ್ದೇವೆ. ಆದರೆ ಈ ವರದಿ ತಪ್ಪು ಎಂದು ಸಾಬೀತಾದರೆ ನಾವು ನಮ್ಮ ತಪ್ಪನ್ನು ಒಪ್ಪಿಕೊಳ್ಳಲು ಸಿದ್ಧವಾಗಿದ್ದೇವೆ” ಎಂದು ಕಾಂಗ್ರೆಸ್ ಹೇಳಿದೆ.

ಇದನ್ನು ಓದಿದ್ದೀರಾ? ತ್ರಿಭಾಷಾ ನೀತಿ ಹೇರಿಕೆಗೆ ವಿರೋಧ: ಬಿಜೆಪಿ ತೊರೆದ ತಮಿಳು ನಟಿ ರಂಜನಾ ನಾಚಿಯಾರ್

Advertisements

ಹಣಕಾಸು ಅಕ್ರಮಗಳ ವರದಿಗಳ ಹಿನ್ನೆಲೆಯಲ್ಲಿ ಫೆಬ್ರವರಿ 15 ರಂದು ನ್ಯೂ ಇಂಡಿಯಾ ಕೋ-ಆಪರೇಟಿವ್ ಬ್ಯಾಂಕಿನ ಮಂಡಳಿಯನ್ನು ವಿಸರ್ಜಿಸಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ ತೆಗೆದುಕೊಂಡಿದೆ. ಇದಾದ ಬಳಿಕ ಕೆಲವು ಸುದ್ದಿಗಳು, ಊಹಾಪೋಹಗಳು ಹರಿದಾಡುತ್ತಿದೆ.

ಸೋಮವಾರ, ಕಾಂಗ್ರೆಸ್ ಕೇರಳದ ಎಕ್ಸ್ ಖಾತೆಯು ₹18 ಕೋಟಿ ಸಾಲ ಮನ್ನಾಕ್ಕೆ ಪ್ರತಿಯಾಗಿ ಝಿಂಟಾ ತನ್ನ ಸಾಮಾಜಿಕ ಮಾಧ್ಯಮ ಖಾತೆಗಳ ನಿಯಂತ್ರಣವನ್ನು ಬಿಜೆಪಿಗೆ ವರ್ಗಾಯಿಸಿದ್ದಾರೆ. ಬ್ಯಾಂಕ್ ಕುಸಿತದ ನಂತರ ಠೇವಣಿದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿದ ಸುದ್ದಿ ಲೇಖನವನ್ನು ಪೋಸ್ಟ್ ಮಾಡಿದೆ.

ಇದಕ್ಕೆ ಪ್ರತಿಕ್ರಿಯೆ ನೀಡಿದ ಝಿಂಟಾ ರಾಜಕೀಯ ಪಕ್ಷ ಸುಳ್ಳು ಸುದ್ದಿಯನ್ನು ಹರಡಿದೆ ಎಂದು ಟೀಕಿಸಿದ್ದಾರೆ. “ಇಲ್ಲ, ನಾನು ನನ್ನ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಾನೇ ನಿರ್ವಹಿಸುತ್ತೇನೆ. ನಕಲಿ ಸುದ್ದಿಗಳನ್ನು ಪ್ರಚಾರ ಮಾಡಿದ್ದಕ್ಕಾಗಿ ನಿಮಗೆ ನಾಚಿಕೆಯಾಗಬೇಕು. ಯಾರೂ ನನ್ನ ಯಾವುದೇ ಸಾಲವನ್ನು ಮನ್ನಾ ಮಾಡಿಲ್ಲ” ಎಂದು ಹೇಳಿದ್ದಾರೆ.

“ರಾಜಕೀಯ ಪಕ್ಷ ಅಥವಾ ಅದರ ಪ್ರತಿನಿಧಿಗಳು ಸುಳ್ಳು ಸುದ್ದಿಯನ್ನು, ನೀಚ ಗಾಸಿಪ್ ಅನ್ನು ನನ್ನ ಹೆಸರು, ನನ್ನ ಚಿತ್ರ ಬಳಸಿ ಹಂಚುತ್ತಿರುವುದು ನೋಡಿ ನನಗೆ ಆಶ್ಚರ್ಯವಾಗಿದೆ. ಸಾಲ ಪಡೆಯಲಾಗಿತ್ತು ಮತ್ತು ಅದನ್ನು ಹತ್ತು ವರ್ಷಕ್ಕೂ ಮುನ್ನವೇ ಸಂಪೂರ್ಣವಾಗಿ ಮರುಪಾವತಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಲು ನಾನು ಬಯಸುತ್ತೇನೆ. ಭವಿಷ್ಯದಲ್ಲಿ ಯಾವುದೇ ತಪ್ಪು ತಿಳಿವಳಿಕೆ ಬರುವುದನ್ನು ಈ ಮಾಹಿತಿ ತಡೆಯುತ್ತದೆ ಎಂದು ಭಾವಿಸುತ್ತೇನೆ” ಎಂದು ಪ್ರೀತಿ ಝಿಂಟಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಝಿಂಟಾ ಎಕ್ಸ್ ಪೋಸ್ಟ್‌ಗೆ ಕೇರಳ ಕಾಂಗ್ರೆಸ್ ಸ್ಪಷ್ಟೀಕರಣ ನೀಡಿ ಪೋಸ್ಟ್ ಒಂದನ್ನು ಮಾಡಿದೆ. “ಇತರೆ ಸೆಲೆಬ್ರಿಟಿಗಳಿಗಿಂತ ಭಿನ್ನವಾಗಿ ಝಿಂಟಾ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ತಾವೇ ನಿರ್ವಹಿಸುತ್ತಿದ್ದಾರೆ ಎಂದು ತಿಳಿದುಕೊಳ್ಳುವುದು ಉತ್ತಮವಾಗಿದೆ. ತಮ್ಮ ಸಾಲದ ಬಗ್ಗೆ ಝಿಂಟಾ ಅವರೇ ಸ್ಪಷ್ಟೀಕರಣ ನೀಡಿದ್ದಾರೆ” ಎಂದು ಹೇಳಿದ್ದಾರೆ.

“ಸ್ಪಷ್ಟೀಕರಣಕ್ಕಾಗಿ ಧನ್ಯವಾದಗಳು. ನಾವು ಏನಾದರೂ ತಪ್ಪುಗಳನ್ನು ಮಾಡಿದ್ದರೆ ಅದನ್ನು ಒಪ್ಪಿಕೊಳ್ಳಲು ನಾವು ಸಂತೋಷಪಡುತ್ತೇವೆ. ಮಾಧ್ಯಮಗಳು ವರದಿ ಮಾಡಿದಂತೆ ನಾವು ಸುದ್ದಿಯನ್ನು ಹಂಚಿಕೊಂಡಿದ್ದೇವೆ” ಎಂದು ಹೇಳಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X