ಸರ್ಕಾರ ರಚಿಸಲು ಮೋದಿ ಅವರನ್ನು ಆಹ್ವಾನಿಸಿದ ರಾಷ್ಟ್ರಪತಿ: ಜೂ. 9ರ ಸಂಜೆ ಪ್ರಮಾಣ ವಚನ

Date:

Advertisements

ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದ ಸಂಸದೀಯ ಪಕ್ಷದ ನಾಯಕರಾಗಿ ನರೇಂದ್ರ ಮೋದಿ ಅವರನ್ನು ಆಯ್ಕೆ ಮಾಡಿದ ನಂತರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇಂದ್ರದಲ್ಲಿ ಸರ್ಕಾರ ರಚಿಸಲು ನರೇಂದ್ರ ಮೋದಿ ಅವರನ್ನು ರಾಷ್ಟ್ರಪತಿ ಭವನಕ್ಕೆ ಶುಕ್ರವಾರ ಸಂಜೆ ಆಹ್ವಾನಿಸಿದ್ದರು.

ಮೋದಿಯವರ ಭೇಟಿಯ ವೇಳೆ ಪ್ರಧಾನಿ ಸ್ಥಾನಕ್ಕೆ ಮೂರನೇ ಬಾರಿಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಿಹಿ ನೀಡಿ, ಅಭಿನಂದಿಸಿದರು.

ಪ್ರಧಾನಿಯಾಗಿ ನರೇಂದ್ರ ಮೋದಿ ಜೂನ್ 9ರ ಸಂಜೆ 7.15ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ. ಇದೇ ವೇಳೆ ಕೇಂದ್ರ ಸಚಿವ ಸಂಪುಟಕ್ಕೆ ಸದಸ್ಯರಾಗಿ ಕೆಲವರು ನೇಮಕಗೊಳ್ಳಲಿದ್ದಾರೆ ಎಂದು ತಿಳಿಸಿದೆ.

Advertisements

ಮುರ್ಮು ಅವರನ್ನು ಭೇಟಿಯಾದ ನಂತರ ರಾಷ್ಟ್ರಪತಿ ಭವನದ ಹೊರಗೆ ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ನರೇಂದ್ರ ಮೋದಿ, “ರಾಷ್ಟ್ರಪತಿಯವರು ಈಗಲೇ ಕರೆ ಮಾಡಿ ಪ್ರಧಾನಿಯಾಗಿ ಕೆಲಸ ಮಾಡುವಂತೆ ಹೇಳಿದ್ದು, ಪ್ರಮಾಣ ವಚನ ಸಮಾರಂಭದ ಬಗ್ಗೆ ಮಾಹಿತಿ ನೀಡಿದ್ದಾರೆ. ಜೂನ್ 9ರಂದು ಸಂಜೆ ಪ್ರಮಾಣ ವಚನ ಸ್ವೀಕರಿಸುವುದಾಗಿ ನಾನು ಹೇಳಿದ್ದೇನೆ. ಜೂನ್‌ನಲ್ಲಿ ರಾಷ್ಟ್ರಪತಿ ಭವನವು ಉಳಿದ ವಿವರಗಳನ್ನು ಸಿದ್ಧಪಡಿಸುತ್ತದೆ. ಆ ನಂತರ ನಾವು ಸಚಿವರ ಪಟ್ಟಿಯನ್ನು ರಾಷ್ಟ್ರಪತಿಗಳಿಗೆ ಹಸ್ತಾಂತರಿಸುತ್ತೇವೆ” ಎಂದಿದ್ದಾರೆ.

“ಎನ್‌ಡಿಎಗೆ ಮೂರನೇ ಬಾರಿಗೆ ಜನರ ಸೇವೆ ಮಾಡುವ ಅವಕಾಶ ಸಿಕ್ಕಿದೆ. ನಮಗೆ ಅವಕಾಶ ನೀಡಿದ ಜನರಿಗೆ ನಾನು ಧನ್ಯವಾದ ಹೇಳುತ್ತೇನೆ. ಮೊದಲಿನಂತೆಯೇ ಅಭಿವೃದ್ಧಿ ಕಾರ್ಯಗಳು ಮುಂದುವರಿಯುತ್ತವೆ ಎಂದು ನಾನು ದೇಶದ ಪ್ರಜೆಗಳಿಗೆ ಭರವಸೆ ನೀಡಲು ಬಯಸುತ್ತೇನೆ. 25 ಕೋಟಿ ಜನರನ್ನು ಬಡತನದಿಂದ ಹೊರತರಲಾಗಿದೆ. ಇದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ವಿಷಯ” ಎಂದರು.

ಮೂರನೇ ಬಾರಿಗೆ ಎನ್‌ಡಿಎಗೆ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಜನರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಿ ಮೋದಿ, 18ನೇ ಲೋಕಸಭೆಯಲ್ಲಿ, ಅದೇ ವೇಗ ಮತ್ತು ಸಮರ್ಪಣೆಯೊಂದಿಗೆ ದೇಶದ ಆಕಾಂಕ್ಷೆಗಳನ್ನು ಈಡೇರಿಸುತ್ತೇವೆ ಎಂದು ಮೋದಿ ಭರವಸೆ ನೀಡಿದ್ದಾರೆ.

“18ನೇ ಲೋಕಸಭೆಯು ಒಂದು ರೀತಿಯಲ್ಲಿ, ಹೊಸ ಶಕ್ತಿ, ಯುವ ಶಕ್ತಿಯಿಂದ ಕೂಡಿದೆ. ಈ 18ನೇ ಲೋಕಸಭೆಯು 2047ರಲ್ಲಿ ದೇಶವು 100 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವಾಗ ಆ ಕನಸುಗಳನ್ನು ನನಸಾಗಿಸುವ ಪ್ರಮುಖ ಮೈಲಿಗಲ್ಲು” ಎಂದು ಪ್ರಧಾನಿ ಮೋದಿ ಹೇಳಿದರು.

“ಮುಂದಿನ 5 ವರ್ಷಗಳು ಜಾಗತಿಕ ಪರಿಸರದಲ್ಲಿ ಭಾರತಕ್ಕೆ ತುಂಬಾ ಉಪಯುಕ್ತವಾಗಲಿದೆ ಎಂದು ನನಗೆ ಖಾತ್ರಿಯಿದೆ. ಅನೇಕ ಬಿಕ್ಕಟ್ಟು, ಅನೇಕ ಉದ್ವಿಗ್ನತೆ ವಿಪತ್ತುಗಳನ್ನು ಜಗತ್ತು ಎದುರಿಸುತ್ತಿದೆ. ನಾವು ಭಾರತೀಯರು ಅದೃಷ್ಟವಂತರು, ಅನೇಕ ದೊಡ್ಡ ಬಿಕ್ಕಟ್ಟುಗಳ ಹೊರತಾಗಿಯೂ, ನಾವು ಇಂದು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದ್ದೇವೆ” ಎಂದು ನರೇಂದ್ರ ಮೋದಿ ಹೇಳಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೀರತ್ ಗಡಿಯಾರ ಗೋಪುರ ಹತ್ತಿ ವಿಡಿಯೋ ಮಾಡುವ ಸಾಹಸ ಮಾಡಿದ ‘ಸ್ಪೈಡರ್‌ಮ್ಯಾನ್’ ಬಂಧನ!

'ಸ್ಪೈಡರ್‌ಮ್ಯಾನ್' ವೇಷಭೂಷಣವನ್ನು ಧರಿಸಿ ಮೀರತ್‌ನ ಐತಿಹಾಸಿಕ ಗಡಿಯಾರ ಗೋಪುರವನ್ನು ಹತ್ತಿ ಅಪಾಯಕಾರಿ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

Download Eedina App Android / iOS

X