ಸಾವರ್ಕರ್ ಜನ್ಮದಿನದಂದು ನೂತನ ಸಂಸತ್ ಭವನ ಉದ್ಘಾಟನೆ; ಬಹಿಷ್ಕಾರಕ್ಕೆ ವಿಪಕ್ಷಗಳ ಚಿಂತನೆ

Date:

  • ನೂತನ ಸಂಸತ್‌ ಭವನದ ಉದ್ಘಾಟನೆಗೆ ಆಗಮಿಸದಿರಲು ವಿಪಕ್ಷಗಳ ಚಿಂತನೆ
  • ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಸತ್‌ ಭವನ ಉದ್ಘಾಟಿಸಬೇಕು ಎಂದು ಒತ್ತಾಯ

ಹಿಂದುತ್ವ ಸಿದ್ಧಾಂತವಾದಿ ವಿ ಡಿ ಸಾವರ್ಕರ್ ಅವರ ಜನ್ಮದಿನವಾದ ಮೇ 28ರಂದು ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಂಸತ್ ಭವನ ಉದ್ಘಾಟಿಸುತ್ತಿದ್ದು,ಸಮಾರಂಭ ಬಹಿಷ್ಕರಿಸಲು ವಿಪಕ್ಷಗಳು ಚಿಂತನೆ ನಡೆಸುತ್ತಿವೆ.

ದೆಹಲಿಯಲ್ಲಿ ರೈತರ ಪ್ರತಿಭಟನೆ ಹಾಗೂ ಕೋವಿಡ್ ಸಾಂಕ್ರಮಿಕ ಉಲ್ಬಣದ ಸಂದರ್ಭದಲ್ಲಿಯೇ ಡಿಸೆಂಬರ್ 2020ರಲ್ಲಿ ಹೊಸ ಸಂಸತ್ ಭವನದ ಶಂಕುಸ್ಥಾಪನಾ ಸಮಾರಂಭ ಆಯೋಜಿಸಲಾಗಿತ್ತು. ಇದರಿಂದ ಕಾಂಗ್ರೆಸ್ ಮತ್ತು ಇತರ ಹಲವು ವಿರೋಧ ಪಕ್ಷಗಳು ದೂರ ಉಳಿದಿದ್ದವು. ಇದೇ ರೀತಿಯಲ್ಲಿಯೇ ಸಂಸತ್‌ ಭವನದ ಉದ್ಘಾಟನೆಗೆ ಆಗಮಿಸದಿರಲು ವಿಪಕ್ಷಗಳು ಯೋಜಿಸುತ್ತಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಬಹುತೇಕ ವಿಪಕ್ಷಗಳು ಮೋದಿ ಅವರು ನೂತನ ಸಂಸತ್ತಿನ ಕಟ್ಟಡವನ್ನು ಉದ್ಘಾಟಿಸುವ ಬಗ್ಗೆ ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ. ಪ್ರಧಾನಿಯವರ ಬದಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಬೇಕಿತ್ತು ಎಂದು ವಾದಿಸುತ್ತಿದ್ದಾರೆ. ಕಾರ್ಯಕ್ರಮಕ್ಕೆ ಹಾಜರಾಗಬೇಕೆ ಅಥವಾ ದೂರ ಉಳಿಯಬೇಕೆ ಎಂಬ ಬಗ್ಗೆ ವಿಪಕ್ಷಗಳು ಒಗ್ಗಟ್ಟಿನ ನಿಲುವು ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಾವರ್ಕರ್ ಅವರ ಜನ್ಮದಿನದಂದು ನೂತನ ಸಂಸತ್ ಭವನ ಉದ್ಘಾಟನೆಯಾಗಲಿದೆ ಎಂದು ತಿಳಿದ ನಂತರ ಕಾಂಗ್ರೆಸ್ ತನ್ನ ನಿಲುವನ್ನು ಗಟ್ಟಿಗೊಳಿಸುತ್ತಿದೆ ಮತ್ತು ಅದೇ ಸಮಯದಲ್ಲಿ ಇತರ ವಿಪಕ್ಷಗಳನ್ನು ಒಗ್ಗೂಡಿಸಲು ಪ್ರಯತ್ನಿಸುತ್ತಿದೆ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ನ ಮಿತ್ರ ಪಕ್ಷವಾದ ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಸಾವರ್ಕರ್ ಅವರ ಮೇಲಿನ ಯಾವುದೇ ದಾಳಿಯನ್ನು ಸಹಿಸುವುದಿಲ್ಲ ಎಂದು ಪಕ್ಷಕ್ಕೆ ಸ್ಪಷ್ಟಪಡಿಸಿರುವ ಅಂಶವನ್ನು ಗಮನಿಸಿದರೆ ಸಾವರ್ಕರ್ ವಿಷಯ ಕಾಂಗ್ರೆಸ್‌ಗೆ ಅತ್ತ ಇಟ್ಟುಕೊಳ್ಳಲು ಆಗದ ಇತ್ತ ಬಿಡಲು ಆಗದ ಇಕ್ಕಟ್ಟಾಗಿ ಪರಿಣಮಿಸಿದೆ.

ಈ ಸುದ್ದಿ ಓದಿದ್ದೀರಾ? ಪ್ರಧಾನಿಗೆ ಶಿಕ್ಷಣ ಬೇಕೆಂದು ಅದಕ್ಕೇ ಹೇಳೋದು; 2 ಸಾವಿರ ರೂ. ನೋಟ್ ಬ್ಯಾನ್‌ ಬಗ್ಗೆ ಕೇಜ್ರಿವಾಲ್ ವ್ಯಂಗ್ಯ

ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಕೂಡ ಈ ಹಿಂದೆ ಕಾಂಗ್ರೆಸ್ ಸಾವರ್ಕರ್ ವಿರುದ್ಧ ದಾಳಿ ಮಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿದ್ದರು.

ಸಾವರ್ಕರ್ ಜನ್ಮದಿನದಂದು ಸಂಸತ್ ಭವನ ಉದ್ಘಾಟನೆಗೊಳ್ಳುತ್ತಿರುವುದಕ್ಕೆ ವಿರೋಧ ವ್ಯಕ್ತಪಡಿಸಿ ಟ್ವೀಟ್‌ ಮಾಡಿರುವ ಕಾಂಗ್ರೆಸ್ ಸಂವಹನ ಮುಖ್ಯಸ್ಥ ಜೈರಾಮ್ ರಮೇಶ್, “ಸಾವರ್ಕರ್ ಜನ್ಮದಿನದಂದು ಸಂಸತ್ ಭವನ ಉದ್ಘಾಟನೆಗೊಳ್ಳುತ್ತಿರುವುದು ನಮ್ಮ ಎಲ್ಲಾ ಸಂಸ್ಥಾಪಕ ತಂದೆ ಮತ್ತು ತಾಯಂದಿರಿಗೆ ಸಂಪೂರ್ಣ ಅವಮಾನ ಮಾಡುತ್ತಿರುವುದಾಗಿದೆ. ಇದಲ್ಲದೆ ಗಾಂಧಿ, ನೆಹರು, ಪಟೇಲ್, ಬೋಸ್ ಮತ್ತು ಮುಂತಾದ ಮಹನೀಯರನ್ನು ಸಂಪೂರ್ಣವಾಗಿ ಕಡೆಗಣಿಸಲಾಗುತ್ತಿದೆ. ಇದರ ಜೊತೆಗೆ ಬಾಬಾ ಸಾಹೇಬ್ ಡಾ ಬಿ ಆರ್ ಅಂಬೇಡ್ಕರ್ ಅವರನ್ನು ಸ್ಪಷ್ಟವಾಗಿ ನಿರಾಕರಿಸುತ್ತಿದ್ದಾರೆ”ಎಂದು ತಿಳಿಸಿದ್ದಾರೆ.

ಕಾಂಗ್ರೆಸ್‌ನ ಹಿರಿಯ ನಾಯಕ ರಾಹುಲ್ ಗಾಂಧಿ ಕೂಡ, “ಹೊಸ ಕಟ್ಟಡವನ್ನು ರಾಷ್ಟ್ರಪತಿ ಮುರ್ಮು ಅವರು ಉದ್ಘಾಟಿಸಬೇಕೆ ವಿನಾ ಪ್ರಧಾನಿಯವರಲ್ಲ” ಎಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ(ಮೇ 22) ಟ್ವೀಟ್ ಮಾಡಿ, “ಮೋದಿ ಸರ್ಕಾರವು ಕೇವಲ ಚುನಾವಣಾ ಕಾರಣಗಳಿಗಾಗಿ ದಲಿತ ಮತ್ತು ಬುಡಕಟ್ಟು ಸಮುದಾಯಗಳಿಂದ ಭಾರತದ ರಾಷ್ಟ್ರಪತಿಯ ಆಯ್ಕೆಯನ್ನು ಖಚಿತಪಡಿಸಿಕೊಂಡಂತೆ ತೋರುತ್ತಿದೆ. ಹೊಸ ಸಂಸತ್ತಿನ ಶಂಕುಸ್ಥಾಪನಾ ಸಮಾರಂಭಕ್ಕೆ ಮಾಜಿ ರಾಷ್ಟ್ರಪತಿ ರಮನಾಥ್ ಕೋವಿಂದ್ ಅವರನ್ನು ಆಹ್ವಾನಿಸಿರಲಿಲ್ಲ. ಹೊಸ ಸಂಸತ್ತಿನ ಕಟ್ಟಡದ ಉದ್ಘಾಟನೆಗೆ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದೆ ದಲಿತ ಮತ್ತು ಬುಡಕಟ್ಟು ಸಮುದಾಯವನ್ನು ಅವಮಾನಿಸಲಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸಂವಿಧಾನದ ಪರಮೋಚ್ಛ ಅಧಿಕಾರ ಹೊಂದಿರುವವರು ರಾಷ್ಟ್ರಪತಿಗಳು. ಅವರು ಸರ್ಕಾರ ಮಾತ್ರವಲ್ಲದೆ ಪ್ರತಿಪಕ್ಷಗಳು ಮತ್ತು ದೇಶದ ಪ್ರತಿ ನಾಗರಿಕರನ್ನು ಪ್ರತಿನಿಧಿಸುವ ಭಾರತದ ಪ್ರಥಮ ಪ್ರಜೆ. ಅವರು ನೂತನ ಸಂಸತ್ ಭವನದ ಉದ್ಘಾಟಿಸುವುದರಿಂದ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಗೌರವಿಸುದಂತಾಗುತ್ತದೆ. ಮೋದಿ ಸರ್ಕಾರ ಪದೇಪದೇ ಬಿಜೆಪಿ – ಆರ್‌ಎಸ್‌ಎಸ್ ಮೂಲಕ ಭಾರತದ ರಾಷ್ಟ್ರಪತಿಗಳ ಕಚೇರಿಯನ್ನು ನಿರ್ವಹಿಸುವಂತೆ ಕಾಣಿಸುತ್ತಿದೆ” ಎಂದು ಖರ್ಗೆ ಟೀಕಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪೋಕ್ಸೋ ಪ್ರಕರಣ | ಬಿಎಸ್‌ವೈ ಬಂಧಿಸದಂತೆ ಹೈಕೋರ್ಟ್‌ ಮಧ್ಯಂತರ ಆದೇಶ

ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು...

ಬಿಎಸ್‌ವೈ ಪೋಕ್ಸೊ | ಕಾನೂನು ರಕ್ಷಕರಿಂದಲೇ ಕಾನೂನು ಉಲ್ಲಂಘನೆ: ವಕೀಲ ಎಸ್‌ ಬಾಲನ್ ಆರೋಪ

"ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ವಿರುದ್ಧ ಗಂಭೀರವಾಗಿರುವ ಪೋಕ್ಸೊ ಪ್ರಕರಣ...

ಕಾಂಗ್ರೆಸ್ ಪರ ಕೆಲಸ ಮಾಡಿದ್ದಕ್ಕೆ ಠಾಣೆಗೆ ಶಾಮಿಯಾನ ಹಾಕಿ ನಟ ದರ್ಶನ್‌ಗೆ ರಕ್ಷಣೆಯೇ: ಶೋಭಾ ಕರಂದ್ಲಾಜೆ ಪ್ರಶ್ನೆ

ಕೊಲೆ ಪ್ರಕರಣದಲ್ಲಿ ನಟ ದರ್ಶನ ಬಂಧನವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ...

ಗುಜರಾತ್‌ | ಸಿಎಂ ವಸತಿ ಯೋಜನೆಯಡಿ ಮುಸ್ಲಿಂ ಮಹಿಳೆಗೆ ಫ್ಲ್ಯಾಟ್ ಮಂಜೂರು; ಹಿಂದುಗಳಿಂದ ವಿರೋಧ

ಈ ಹಿಂದೆ ಕೇಂದ್ರದಲ್ಲಿ ನರೇಂದ್ರ ಮೋದಿಯವರ ಬಿಜೆಪಿ ಸರ್ಕಾರವಿದ್ದಾಗ ದೇಶದಲ್ಲಿ ವಿಪರೀತಕ್ಕೆ...