ಮಣಿಪುರದಲ್ಲಿ ಶಾಂತಿ ಕಾಪಾಡುವಲ್ಲಿ ರಾಷ್ಟ್ರಪತಿ ಆಳ್ವಿಕೆ ವಿಫಲ: ಕಾಂಗ್ರೆಸ್ ಟೀಕೆ

Date:

ಮಣಿಪುರದ ಶಿರುಯಿ ಲಿಲಿ ಉತ್ಸವದ ವರದಿ ಮಾಡಲು ಉಖ್ರುಲ್‌ಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಾಧ್ಯಮ ತಂಡವನ್ನು ಮಾರ್ಗಮಧ್ಯೆ ಭದ್ರತಾ ಸಿಬ್ಬಂದಿಗಳು ತಡೆದು ವಾಹನದಲ್ಲಿದ್ದ ‘ಮಣಿಪುರ ರಾಜ್ಯ ಸಾರಿಗೆ’ ಎಂಬ ಫಲಕವನ್ನು ಮರೆಮಾಡಲು ಸೂಚಿಸಿದ್ದಾರೆ ಎನ್ನಲಾಗಿದೆ. ಈ ಘಟನೆ ವಿರುದ್ದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಲ್ಲಲ್ಲಿ ಪ್ರತಿಭಟನೆ ನಡೆಯುತ್ತಿದೆ. ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಿಸುತ್ತಿದೆ.

- Advertisement -

ಈ ನಡುವೆ, “ರಾಜ್ಯದಲ್ಲಿ ಶಾಂತಿ ಕಾಪಾಡುವಲ್ಲಿ ರಾಷ್ಟ್ರಪತಿ ಆಳ್ವಿಕೆ ವಿಫಲವಾಗಿದೆ” ಎಂದು ಮಣಿಪುರ ಕಾಂಗ್ರೆಸ್ ಅಧ್ಯಕ್ಷ ಕೀಶಮ್ ಮೇಘಚಂದ್ರ ಆರೋಪಿಸಿದ್ದಾರೆ. ಹಾಗೆಯೇ ಈ ವರ್ಷದ ಜನವರಿಯಲ್ಲಿ ಅಧಿಕಾರ ವಹಿಸಿಕೊಂಡ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರನ್ನು ಕೇಂದ್ರ ಸರ್ಕಾರವು ಹಿಂದಕ್ಕೆ ಕರೆಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? ಮಣಿಪುರ ರಾಜ್ಯಪಾಲರ ಮಹತ್ವದ ನಡೆ; ಶಾಂತಿ ಮರುಸ್ಥಾಪನೆ ಸುಲಭವೇ?

2023ರ ಮೇ ತಿಂಗಳಲ್ಲಿ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಆರಂಭವಾಗಿದ್ದು 250ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಈ ದೀರ್ಘಕಾಲದ ಹಿಂಸಾಚಾರ ನಿಯಂತ್ರಿಸುವ ಬಿಜೆಪಿ ಸರ್ಕಾರ ವಿಫಲವಾಗುತ್ತಿದ್ದಂತೆ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ರಾಜೀನಾಮೆ ನೀಡಿದರು.

ಅದಾದ ಬಳಿಕ ಈ ವರ್ಷದ(2025) ಫೆಬ್ರವರಿ 13ರಂದು ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಕೇಂದ್ರ ಸರ್ಕಾರವು ಹೇರಿದೆ. 2027ರವರೆಗೆ ಅಧಿಕಾರಾವಧಿಯನ್ನು ಹೊಂದಿರುವ ರಾಜ್ಯ ವಿಧಾನಸಭೆಯನ್ನು ಅಮಾನತಿನಲ್ಲಿ ಇರಿಸಲಾಗಿದೆ. ಆದರೆ ಇಂದಿಗೂ ಹಿಂಸಾಚಾರ ಸಂಪೂರ್ಣವಾಗಿ ನಿಂತಿಲ್ಲ. ಅಲ್ಲಲ್ಲಿ ಹಿಂಸಾಚಾರಗಳು ನಡೆಯುತ್ತಲೇ ಇವೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್‌ನ ನಾಯಕ, ವಾಂಗ್ಖೇಮ್ ಶಾಸಕ ಮೇಘಚಂದ್ರ, “ಡಬಲ್-ಎಂಜಿನ್ ಸರ್ಕಾರವು ಕಳೆದ 2 ವರ್ಷಗಳಿಗೂ ಹೆಚ್ಚು ಕಾಲ ಮಣಿಪುರದಲ್ಲಿ ವಿಫಲವಾಗಿದೆ. ರಾಷ್ಟ್ರಪತಿ ಆಳ್ವಿಕೆಯೂ ಮಣಿಪುರದಲ್ಲಿ ವಿಫಲಗೊಂಡಿದೆ” ಎಂದು ಹೇಳಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಮಣಿಪುರವನ್ನು ಪದೇ ಪದೇ ವಿಫಲಗೊಳಿಸುತ್ತಿದ್ದಾರೆ. ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು. ಮಣಿಪುರ ರಾಜ್ಯಪಾಲರನ್ನು ಹಿಂದಕ್ಕೆ ಕರೆಸಿಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಮಣಿಪುರ ರಾಜ್ಯ ಸಾರಿಗೆ ಫಲಕ ಮುಚ್ಚಲು ಹೇಳಿದ ಘಟನೆಯನ್ನು ಉಲ್ಲೇಖಿಸಿರುವ ಮೇಘಚಂದ್ರ, “ಮಣಿಪುರ ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ನಿಂದ ‘ಮಣಿಪುರ’ ಪದವನ್ನು ತೆಗೆದುಹಾಕಲು ಮಣಿಪುರ ರಾಜ್ಯಪಾಲರಿಗೆ ಯಾರು ಸೂಚನೆ ನೀಡಿದರು” ಎಂದು ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ಟಿವಿ ಕಾರ್ಯಕ್ರಮದಲ್ಲಿ ಮಣಿಪುರ ರಾಜಕೀಯದ ಬಗ್ಗೆ ಮಾತನಾಡಿದ ಹಿರಿಯ ಪತ್ರಕರ್ತನ ಅಪಹರಣ

ಇನ್ನು ಮೇ 20ರಂದು ‘ಮಣಿಪುರ ರಾಜ್ಯ ಸಾರಿಗೆ’ ಎಂಬ ಫಲಕವನ್ನು ಮರೆಮಾಡಲು ಸೂಚಿಸಿದ ಘಟನೆಗೆ ಸಂಬಂಧಿಸಿದಂತೆ ರಾಜ್ಯಪಾಲರು ಕ್ಷಮೆಯಾಚಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದಾರೆ. ತೀವ್ರ ಪ್ರತಿಭಟನೆಯ ಕಾರಣದಿಂದಾಗಿ ರಾಜಭವನದಿಂದ ಸುಮಾರು 300 ಮೀಟರ್ ದೂರದಲ್ಲಿರುವ ಕಾಂಗ್ಲಾ ಕೋಟೆಯನ್ನು ತಲುಪಲು ಸೇನಾ ಹೆಲಿಕಾಪ್ಟರ್‌ ಬಳಿಸಿದ್ದಾರೆ.

ಈ ಬಗ್ಗೆಯೂ ಕಾಂಗ್ರೆಸ್ ನಾಯಕ ಮೇಘಚಂದ್ರ ಪೋಸ್ಟ್ ಮಾಡಿದ್ದಾರೆ. “ಇಂದು(ಮೇ 26) ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಸುಮಾರು 7 ಕಿ.ಮೀ ದೂರದಲ್ಲಿರುವ ರಾಜಭವನವನ್ನು ತಲುಪಲು ಮಣಿಪುರ ರಾಜ್ಯಪಾಲರು ಇಂಫಾಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್‌ನಲ್ಲಿ ಹಾರಬೇಕಾಯಿತು” ಎಂದಿದ್ದಾರೆ.

2023ರ ಮೇ ತಿಂಗಳಿನಿಂದ ಮಣಿಪುರದಲ್ಲಿ ಮೈತೇಯಿ ಮತ್ತು ಕುಕಿ-ಜೋ ಗುಂಪುಗಳ ನಡುವಿನ ಜನಾಂಗೀಯ ಹಿಂಸಾಚಾರ ನಡೆಯುತ್ತಿದೆ. ಈ ಹಿಂಸಾಚಾರದಲ್ಲಿ 250ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...