ಪತ್ರಿಕಾ ಸ್ವಾತಂತ್ರ್ಯವನ್ನು ದುರುಪಯೋಗ ಮಾಡಬಾರದು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

Date:

  • ಪ್ರಜಾವಾಣಿಯ ನಿವೃತ್ತ ಸಹಾಯಕ ಸಂಪಾದಕ ಉದಯ್‌ಕುಮಾರ್‌ಗೆ ಖಾದ್ರಿ ಶಾಮಣ್ಣ ಪ್ರಶಸ್ತಿ ಪ್ರದಾನ
  • ಪತ್ರಿಕೋದ್ಯಮ ಪ್ರಜಾಪ್ರಭುತ್ವದ ಜೀವಾಳ, ಖಾದ್ರಿ ಶಾಮಣ್ಣನವರು ಮಾದರಿ ಪತ್ರಕರ್ತರು

ಪ್ರತಿಯೊಬ್ಬರು ಕೂಡ ಸಂವಿಧಾನವನ್ನು ತಿಳಿದುಕೊಳ್ಳುವುದು ಅವಶ್ಯಕ, ಅದರಲ್ಲೂ ಪತ್ರಿಕೋದ್ಯಮದಲ್ಲಿ ಇರುವವರು ತಿಳಿದುಕೊಳ್ಳುವುದು ಅತ್ಯಂತ ಅವಶ್ಯಕ. ಸಂವಿಧಾನ ನಿಮಗೆ ಸ್ವಾತಂತ್ರ್ಯವನ್ನು ಕೊಟ್ಟಿದ್ದೆ, ಆ ಸ್ವಾತಂತ್ರ್ಯವನ್ನು ಸರಿಯಾದ ದಾರಿಯಲ್ಲಿ ಉಪಯೋಗಿಸಬೇಕು. ಇಲ್ಲದೆ ಹೋದರೆ ಪ್ರಜಾಪ್ರಭುತ್ವದ ಆಶಯಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು.

- Advertisement -

ಖಾದ್ರಿ ಶಾಮಣ್ಣ ಟ್ರಸ್ಟ್ ಇಂದು ಶೇಷಾದ್ರಿಪುರಂ ಕಾಲೇಜಿನ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಪಾಲ್ಗೊಂಡ ಅವರು, ಖಾದ್ರಿ ಶಾಮಣ್ಣ ಟ್ರಸ್ಟ್‌ ವತಿಯಿಂದ ಪ್ರತಿವರ್ಷ ಅವರ ಹೆಸರಿನಲ್ಲಿ ನೀಡುತ್ತ ಬಂದಿರುವ ಪತ್ರಿಕೋದ್ಯಮ ಪ್ರಶಸ್ತಿಯನ್ನು ಪ್ರಜಾವಾಣಿಯ ನಿವೃತ್ತ ಸಹಾಯಕ ಸಂಪಾದಕ ಉದಯ್‌ಕುಮಾರ್‌ ಅವರಿಗೆ ನೀಡಿ ಅಭಿನಂದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಆನಂತರ ಮಾತನಾಡಿದ ಅವರು, ಪತ್ರಿಕೋದ್ಯಮದಲ್ಲಿ ಅನನ್ಯ ಸೇವೆಯನ್ನು ಮಾಡಿ, ಪತ್ರಿಕಾ ಧರ್ಮವನ್ನು ಹಾಗೂ ಅದರ ಮೌಲ್ಯವನ್ನು ಎತ್ತಿ ಹಿಡಿದ ಕೆಲಸವನ್ನು ಮಾಡಿರುವುದಕ್ಕೆ ಈ ಪ್ರಶಸ್ತಿ ಸಂದಾಯವಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಅದರಲ್ಲೂ ಮುಖ್ಯವಾಗಿ, ಯುವಕರಲ್ಲಿ ಪತ್ರಿಕೋದ್ಯಮದ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿದೆ. ಪತ್ರಿಕೋದ್ಯಮ ಬಹಳ ಮುಖ್ಯವಾಗಿದ್ದು, ಅದು ಪ್ರಜಾಪ್ರಭುತ್ವದ ಜೀವಾಳ ಎಂದರು.

ನಮ್ಮ ಸಮಾಜದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಅಸಮಾನತೆ ಇದ್ದು, ಅದನ್ನು ಹೋಗಲಾಡಿಸುವುದು, ಯಾರು ಪತ್ರಿಕೋದ್ಯಮವನ್ನು ಆಯ್ಕೆ ಮಾಡಿಕೊಂಡಿರುತ್ತಾರೋ ಅವರ ಜವಾಬ್ದಾರಿಯೂ ಆಗಿದೆ. ಹಿಂದೆ ಖಾದ್ರಿ ಶಾಮಣ್ಣನವರು ಇದ್ದ ಕಾಲದಲ್ಲಿ ಪತ್ರಿಕೋದ್ಯಮದ ಅನುಭವವನ್ನು, ಅದರ ಮೌಲ್ಯಗಳನ್ನು ಎತ್ತಿಹಿಡಿಯುವಂತಹ ಕೆಲಸವನ್ನು ಮಾಡುತ್ತಿದ್ದರು. ನಾನು ಖಾದ್ರಿ ಶಾಮಣ್ಣನವರನ್ನು ಬಹಳ ಹತ್ತಿರದಿಂದ ಬಲ್ಲೆ. ಯಾಕೆಂದರೆ ಅವರು ಸಮಾಜವಾದಿಗಳಾಗಿದ್ದರು. ಹಾಗಾಗಿ ನಾನು ಅವರನ್ನು ಆಗಾಗ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ಭೇಟಿ ಮಾಡುತ್ತಿದ್ದೆ ಎಂದು ಅವರ ಒಡನಾಟವನ್ನು ನೆನಪಿಸಿಕೊಂಡರು.

ಇದನ್ನು ಓದಿದ್ದೀರಾ?: ಈ ದಿನ ಸಂಪಾದಕೀಯ | ಅಮಿತ್ ಶಾ ರಾಜೀನಾಮೆ ನೀಡಬೇಕಲ್ಲವೇ?

ಖಾದ್ರಿ ಶಾಮಣ್ಣನವರು ‘ಕನ್ನಡಪ್ರಭ’ ಪತ್ರಿಕೆಯ ಸಂಪಾದಕರಾಗಿದ್ದರು. ಅವರ ಸಂಪಾದಕೀಯವೇ ಬಹಳ ಪ್ರಮುಖವಾಗಿರುತ್ತಿತ್ತು. ಎಷ್ಟೇ ಗಂಭೀರ ವಿಷಯವಾದರೂ, ಗಾಢ ವಿಷಯವಾದರೂ ಕೂಡ ಅವರು ಬಳಸುವ ಭಾಷೆ ಬಹಳ ಸರಳವಾಗಿರುತ್ತಿತ್ತು. ಹೀಗಾಗಿ ಅದು ಜನರಿಗೆ ಬೇಗ ತಲುಪುತ್ತಿತ್ತು. ಅವರು ರಾಜಕಾರಣಿಯಾಗಿರಲಿಲ್ಲ, ಆದರೆ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಜೊತೆಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟುಕೊಂಡಿದ್ದ ವ್ಯಕ್ತಿಯಾಗಿದ್ದರು. ಸಂವಿಧಾನದ ಮೇಲೆ ಅವರಿಗಿದ್ದ ಬದ್ಧತೆ ಅಪಾರವಾದುದ್ದು. ಇತ್ತೀಚಿನ ವರ್ಷಗಳಲ್ಲಿ ಪತ್ರಿಕೋದ್ಯಮದ ದಾರಿ ಬದಲಾಗುತ್ತಿದೆ. ಕೆಲವು ಪತ್ರಿಕಾ ಸಂಸ್ಥೆಗಳು ಪತ್ರಿಕೋದ್ಯಮದ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ವಿಫಲವಾಗಿವೆ ಎಂದು ಬೇಸರ ವ್ಯಕ್ತಪಡಿಸಿದರು.

ಪತ್ರಿಕೆಗಳು ನಿಷ್ಪಕ್ಷಪಾತವಾಗಿ ನೈಜ ವಿಷಯಗಳನ್ನು ಜನರ ಮುಂದೆ ಇಡಬೇಕು. ನಮ್ಮ ಸಮಾಜ ಅಸಮಾನತೆಯಿಂದ ಕೂಡಿದೆ. ಅದನ್ನು ಹೋಗಲಾಡಿಸುವುದು ನಮ್ಮಂತಹ ರಾಜಕಾರಣಿಗಳ ಹಾಗೂ ಪತ್ರಕರ್ತರ ಜವಾಬ್ದಾರಿಯಾಗಿದೆ. ಅಸಮಾನತೆ ಮುಂದುವರಿದರೆ ಸಮಸಮಾಜ ನಿರ್ಮಾಣ ಮಾಡಲು ಸಾಧ್ಯವಿಲ್ಲ ಎಂದರು.

ಸಂವಿಧಾನ ಬಂದು ಈಗಾಗಲೇ 76 ವರ್ಷಗಳೇ ಆಗಿದೆ, ಆದರೂ ಇನ್ನೂ ಅಸಮಾನತೆ ಕಾಡುತ್ತಲೇ ಇದೆ. ಸಮಾಜದಲ್ಲಿ ಪ್ರಭಾವಿಗಳು, ಪ್ರಭಾವ ಉಳ್ಳದವರು, ಧ್ವನಿ ಇರುವವರು, ಧ್ವನಿ ಇಲ್ಲದವರು ಇದ್ದಾರೆ. ಹೀಗಾಗಿ ನಾವು ಯಾವಾಗಲೂ ಕೂಡ ಸಮಾಜದಲ್ಲಿ ಬಡವರು, ಮಹಿಳೆಯರು, ಹಿಂದುಳಿದವರು, ರೈತರು ಹಾಗೂ ಅಲ್ಪಸಂಖ್ಯಾತರು ಹೀಗೆ ಶೋಷಿತರ ಧ್ವನಿಯಾಗಿ ಕೆಲಸ ಮಾಡಬೇಕು. ಜಾತಿವ್ಯವಸ್ಥೆ ಹೋಗಲಾಡಿಸಬೇಕು ಎಂದರೆ ಪತ್ರಿಕೋದ್ಯಮದವರು ಜಾತ್ಯತೀತವಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.

ನಾನು ಬಿಎಸ್‌ಸಿ ಓದಿದವನು, ಎಂಎಸ್‌ಸಿ ಓದಿ ಮೇಸ್ಟ್ರಾಗಬಹುದಿತ್ತು. ಆದರೆ ನಾನು ಸಮಾಜವನ್ನು ಬದಲಾವಣೆ ಮಾಡಬೇಕು, ಸಾಮಾನ್ಯ ಜನರ ಜೊತೆ ಇರಬೇಕು ಎನ್ನುವ ನಿಟ್ಟಿನಲ್ಲಿ ರಾಜಕೀಯವನ್ನು ಆಯ್ಕೆ ಮಾಡಿಕೊಂಡಿದ್ದೆ ಎಂದು ತಮ್ಮ ರಾಜಕೀಯ ಪಯಣವನ್ನು ಹಂಚಿಕೊಂಡರು.

WhatsApp Image 2026 08 08 at 12.23.53 1

ಪತ್ರಿಕೋದ್ಯಮದ ಸಂಸ್ಥೆಗಳು ಸಮಾಜದಲ್ಲಿರುವ ಅಸಮಾನತೆಯನ್ನು ನೋಡಿಕೊಂಡು, ಸಮಸಮಾಜ ನಿರ್ಮಾಣ ಮಾಡುವಂತಹ ಕೆಲಸ ಮಾಡಬೇಕು ಎಂದು ಕರೆಕೊಟ್ಟರು. ಕೆಲವು ಪತ್ರಿಕೋದ್ಯಮಿಗಳು ಅಧಿಕಾರ ಯಾವ ಪಕ್ಷದಲ್ಲಿರುತ್ತದೆಯೋ ಅವರ ಹಿಂದೆ ಸುತ್ತುವಂತಹ, ಅವರ ಪರವಾಗಿ ನಿಲ್ಲುವಂತಹ ಕೆಲಸವನ್ನು ಮಾಡುತ್ತಾರೆ ಎಂದು ನುಡಿದರು.

ಸಮಾಜವನ್ನು ಒಡೆಯುವಂತಹ, ಸುಳ್ಳು ಸುದ್ದಿಗಳಿಗೆ ಪ್ರಚಾರವನ್ನು ನೀಡುವಂತಹ ಕೆಲಸವನ್ನು ಮಾಧ್ಯಮಗಳು ಮಾಡಬಾರದು. ಮೌಢ್ಯಗಳಿಂದಲೇ ಜಾತಿ ವ್ಯವಸ್ಥೆ ಹೆಚ್ಚಾಗಿರುವಂತಹದ್ದು, ಅಸಮಾನತೆ ಹೆಚ್ಚಾಗಿರುವಂತಹದ್ದು. ಹೀಗಾಗಿ ಮೌಢ್ಯಗಳಿಗೆ ಹೆಚ್ಚು ಒತ್ತು ನೀಡಬಾರದು. ಪತ್ರಿಕಾ ಸ್ವಾಂತ್ರ್ಯವನ್ನು ಯಾವುದೇ ಕಾರಣಕ್ಕೂ ದುರುಪಯೋಗ ಮಾಡಬಾರದು ಎನ್ನುವ ಕರೆ ನೀಡಿದರು.

ಪತ್ರಿಕಾ ಸ್ವಾಂತ್ರ್ಯಕ್ಕೆ ನಾನು ಹೆಚ್ಚು ಒತ್ತು ಕೊಡುವವನಾಗಿದ್ದು, ಈ ಕಾರಣಕ್ಕಾಗಿ ನಮ್ಮ ಪಕ್ಷದ ಬಗ್ಗೆ ಯಾರೂ ಏನೇ ಬರೆದರೂ ಅಥವಾ ನನ್ನ ಬಗ್ಗೆಯೇ ಬರೆದರೂ, ಟೀಕೆ ಮಾಡಿದರೂ ಯಾವುದೇ ಪತ್ರಿಕಾ ಸಂಸ್ಥೆಯವರಿಗೆ, ಪತ್ರಕರ್ತರಿಗೆ ಇವತ್ತಿನವರೆಗೂ ಫೋನ್‌ ಮಾಡಿಲ್ಲ, ಮಾಡೋದು ಇಲ್ಲ ಎಂದು ಹೇಳಿದರು. ಆದ್ದರಿಂದ ಖಾದ್ರಿ ಶಾಮಣ್ಣನವರು ಇವತ್ತು ಬದುಕಿರುತ್ತಿದ್ದರೆ, ಪತ್ರಿಕೋದ್ಯಮದ ಮೌಲ್ಯಗಳನ್ನು, ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುತ್ತಿದ್ದರು ಎಂದರು. ಅವರ ಹೆಸರಿನಲ್ಲಿ ಪತ್ರಿಕೋದ್ಯಮದ ಶಕ್ತಿಯಿದೆ. ಅವರೊಬ್ಬ ಮಾದರಿ ಪತ್ರಕರ್ತರು, ಮಾರ್ಗದರ್ಶಕರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಾಡಿನ ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ, ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆಯ ಗೌರವ ಪ್ರಧಾನ ಕಾರ್ಯದರ್ಶಿ ವೂಡೇ ಪಿ.ಕೃಷ್ಣ, ಹಿರಿಯ ಪತ್ರಕರ್ತ ಕೆ.ವಿ.ನಾಗರಾಜು, ಟ್ರಸ್ಟ್ ಅಧ್ಯಕ್ಷ ಶ್ರೀಶ, ಶ್ರೀಮತಿ ಸುನಿತಾ ಉದಯಕುಮಾರ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಸುಪ್ರೀಂ’ ನಲ್ಲಿ ವಂದೇ ಮಾತರಂ ವಿಚಾರಣೆ-  ಟಿ.ಎಂ.ಕೃಷ್ಣ ನಕ್ಸಲೈಟ್ ಎಂದು ಜರೆದ ಸಾಲಿಸಿಟರ್ ಜನರಲ್

ಮಂಗಳವಾರ ಸುಪ್ರೀಮ್ ಕೋರ್ಟಿನಲ್ಲಿ ವಿಚಾರಣೆಯ ಸಂದರ್ಭದಲ್ಲಿ ಸಾಲಿಸಿಟರ್ ಜನರಲ್  ತುಷಾರ್ ಮೆಹ್ತಾ...

‘ವಂದೇ ಮಾತರಂ’ ಹಾಡದಿದ್ದರೆ ಅಪರಾಧವಲ್ಲ, ಶಿಕ್ಷೆಯೂ ಇಲ್ಲ: ಸುಪ್ರೀಂ ಕೋರ್ಟ್

‘ವಂದೇ ಮಾತರಂ’ನ ಹಾಡುವುದು ಕಡ್ಡಾಯವಲ್ಲ. ಹಾಡದಿದ್ದ ಕಾರಣಕ್ಕೆ ಶಿಕ್ಷೆ ನೀಡಲಾಗುವುದಿಲ್ಲ ಎಂದು...

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ: ಸೆ.22 ವಿಶ್ವ ಗುಲಾಬಿ ದಿನ

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ...

ಜಗತ್ತಿನಲ್ಲೇ ಮೊದಲು: ಹಂದಿ ಮೂತ್ರಪಿಂಡದಿಂದ 9 ತಿಂಗಳು ಜೀವಿಸಿದ ವ್ಯಕ್ತಿ

ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬೆಳವಣಿಗೆಯೊಂದು ನಡೆದಿದೆ. ತಳಿವಿಜ್ಞಾನದ (ಜೆನೆಟಿಕ್ಸ್‌) ಮೂಲಕ...