ಬೆಲೆ ಏರಿಕೆ ಬಗ್ಗೆ ಮಾತನಾಡುವ ಧಮ್ಮು ತಾಕತ್ತು ಶೋಭಾ ಕರಂದ್ಲಾಜೆಯವರಿಗಿಲ್ಲ; ಕಾಂಗ್ರೆಸ್ ಲೇವಡಿ

Date:

  • ಬೆಲೆ ಏರಿಕೆ ವಿಚಾರ ಮಾತನಾಡದೆ ಹೊರಟ ಶೋಭಾ ಕರಂದ್ಲಾಜೆ
  • ಕೇಂದ್ರ ಸಚಿವರ ಪತ್ರಿಕಾಗೋಷ್ಠಿ ವಿಚಾರದಲ್ಲಿ ವಿಪಕ್ಷ ಕಾಂಗ್ರೆಸ್ ಕಿಡಿ

ಅಗತ್ಯ ವಸ್ತುಗಳ ಬೆಲೆ ಏರಿಕೆಗಳ ಬಗ್ಗೆ ಮಾತಾಡಲು ಧಮ್ಮು ತಾಕತ್ತು ಇಲ್ಲದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪತ್ರಿಕಾಗೋಷ್ಠಿಯಿಂದ ಪಲಾಯನ ಮಾಡಿದ್ದಾರೆ. ಇದು ಬಿಜೆಪಿಯ ಜನವಿರೋಧಿ ನಡೆಗೆ ಸಾಕ್ಷಿ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ನಮ್ಮ ಪಕ್ಷ ಜನಪರ ಘೋಷಣೆಗಳ ಮೂಲಕ ಭರವಸೆ ಮೂಡಿಸುತ್ತಿದೆ. ಆದರೆ ಅಗತ್ಯ ವಸ್ತುಗಳ ಬೆಲೆ ಏರಿಕೆಗಳ ಬಗ್ಗೆ ಮಾತಾಡಲು ದಮ್ಮು ತಾಕತ್ತು ಇಲ್ಲದೆ ಬಿಜೆಪಿ ಪಲಾಯನ ಮಾಡುತ್ತಿದೆ ಎಂದು ಕಿಡಿಕಾರಿದೆ.

ಇನ್ನು ಶೋಭಾ ಕರಂದ್ಲಾಜೆ ಅವರ ಮಾಧ್ಯಮಗೋಷ್ಠಿ ಉಲ್ಲೇಖಿಸಿರುವ ಕಾಂಗ್ರೆಸ್, “ಬಿಜೆಪಿಯ ಅಜೆಂಡಾ ಏನು ಎನ್ನುವುದು ಕೇಂದ್ರ ಸಚಿವೆಯ ಮಾತುಗಳಿಂದ ಸ್ಪಷ್ಟವಾಗಿದೆ” ಎಂದು ಹೇಳಿದೆ. ಜೊತೆಗೆ ಬಿಜೆಪಿಯನ್ನು ಕುಟುಕಿರುವ ವಿಪಕ್ಷ, ಅಭಿವೃದ್ಧಿಯನ್ನೇ ಮಾಡದ ರಾಜ್ಯ ಬಿಜೆಪಿಗೆ ಅಭಿವೃದ್ಧಿ ಬಗ್ಗೆ ಮಾತಾಡಲು ಧೈರ್ಯ ಬರುವುದಾದರೂ ಹೇಗೆ?” ಎಂದು ಪ್ರಶ್ನಿಸಿದೆ.

Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಿಕೆಶಿ ವಿರುದ್ಧ ಸಿಬಿಐ ತನಿಖೆ ಅನುಮತಿ ಹಿಂಪಡೆದ ಸರ್ಕಾರ; ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಸಿದ ಯತ್ನಾಳ್

ಉಪಮುಖ್ಯಮಂತ್ರಿ‌ ಡಿಕೆ ಶಿವಕುಮಾರ್‌ ಅಕ್ರಮ ಆಸ್ತಿಗಳಿಕೆ ಪ್ರಕರಣದ ಸಿಬಿಐ ತನಿಖೆಗೆ ನೀಡಿದ್ದ‌...

ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ 15 ನಿಲ್ದಾಣಗಳ ಆಧುನೀಕರಣ: ಯೋಗೇಶ್ ಮೋಹನ್

“ಬಂಗಾರಪೇಟೆ, ಕೆಂಗೇರಿ, ಕೃಷ್ಣರಾಜಪುರ, ಮಂಡ್ಯ, ಚನ್ನಪಟ್ಟಣ, ಹೊಸೂರು, ಹಿಂದೂಪುರ, ಕುಪ್ಪಂ, ಮಾಲೂರು,...

ಶೂದ್ರರು, ದಲಿತರಿಗೆ ಆರ್‌ಎಸ್‌ಎಸ್‌ ಗರ್ಭಗುಡಿಗೆ ಪ್ರವೇಶ ಇಲ್ಲ ಎಂಬುದು ಮತ್ತೆ ಸಾಬೀತು: ಸಿದ್ದರಾಮಯ್ಯ

ಹೊರಬಾಗಿಲಲ್ಲಿ ನಿಂತು 'ಜೀ..ಜೀ..ಹುಜೂರ್' ಎಂದಷ್ಟೇ ಹೇಳಬೇಕು:‌ ಸಿದ್ದರಾಮಯ್ಯ ಗೂಳಿಹಟ್ಟಿ ಶೇಖರ್...

ಪ್ರಜಾಪ್ರಭುತ್ವ, ಜಾತ್ಯತೀತತೆ ಹಾಗೂ ಮಾನವ ಹಕ್ಕುಗಳ ಉಳಿವಿಗಾಗಿ ಆಂದೋಲನಕ್ಕೆ ಕರೆ

ಸೆಂಟರ್ ಫಾರ್ ಪ್ರೊಟೆಕ್ಟಿಂಗ್ ಡೆಮಾಕ್ರೆಟಿಕ್ ರೈಟ್ಸ್ ಅಂಡ್ ಸೆಕ್ಯುಲರಿಸಂ ಕರೆ ...