ಪ್ರಧಾನಿಗಳೇ, ಜಾತೀಯತೆಯನ್ನು ಹೇಗೆ ತೊಡೆದು ಹಾಕಬೇಕೆಂದು ಸ್ವಲ್ಪ ವಿವರಿಸುವಿರಾ? ಸಿದ್ದರಾಮಯ್ಯ

Date:

ಜಾತೀಯತೆ ಮತ್ತು ಪ್ರಾದೇಶಿಕತೆಯನ್ನು ತೊಡೆದುಹಾಕಬೇಕು ಎಂದು ಸನ್ಮಾನ್ಯ ನರೇಂದ್ರ ಮೋದಿ ಅವರು ವಿಜಯದಶಮಿ ಪ್ರಯುಕ್ತ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರೆ ನೀಡಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಾತೀಯತೆಯನ್ನು ತೊಡೆದುಹಾಕಬೇಕೆಂಬ ಪ್ರಧಾನಿ ಕರೆಗೆ ನನ್ನ ಸಹಮತವಿದೆ. ಆದರೆ ಅದನ್ನು ತೊಡೆದುಹಾಕುವ ಬಗೆ ಹೇಗೆ ಎಂಬುದನ್ನು ತುಸು ವಿವರಿಸಿದ್ದರೆ ಅವರ ಉದ್ದೇಶ ಸ್ಪಷ್ಟವಾಗುತ್ತಿತ್ತು ಎಂದು ತಿಳಿಸಿದ್ದಾರೆ.

- Advertisement -

ಸರಣಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಜಾತೀಯತೆಯ ಜೊತೆ ಪ್ರಾದೇಶಿಕತೆಯನ್ನು ಕೂಡಾ ಪ್ರಧಾನಿ ಅವರು ಥಳುಕು ಹಾಕಿ ಏನು ಹೇಳಲಿಕ್ಕೆ ಹೊರಟಿದ್ದಾರೆ? ಭಾರತ ಎನ್ನುವುದು ದೇಶ ಮಾತ್ರವಲ್ಲ ಅದು ರಾಜ್ಯಗಳ ಒಕ್ಕೂಟ ಎನ್ನುವುದನ್ನು ಸಂವಿಧಾನವೇ ಹೇಳಿದೆ. ನಮ್ಮ ಒಕ್ಕೂಟ ವ್ಯವಸ್ಥೆಯಲ್ಲಿ ಪ್ರತಿಯೊಂದು ರಾಜ್ಯ ಕೂಡಾ ಭಾಷೆ, ಸಂಸ್ಕೃತಿ, ಆಚಾರ, ವಿಚಾರಗಳ ವೈವಿಧ್ಯವನ್ನು ಹೊಂದಿವೆ. ಈ ಪ್ರಾದೇಶಿಕತೆಯನ್ನು ತೊಡೆದುಹಾಕುವುದೆಂದರೆ ವೈವಿಧ್ಯತೆಯನ್ನು ನಾಶಮಾಡುವುದೇ? ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮತ್ತು ಅವರ ಪಕ್ಷ ಹಾಗೂ ಪರಿವಾರ ಆಗಾಗ ಏಕಭಾಷೆ, ಏಕ ಸಂಸ್ಕೃತಿಯ ಭಜನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರಾದೇಶಿಕತೆಯನ್ನು ತೊಡೆದುಹಾಕಲು ನೀಡುವ ಕರೆ ರಾಜ್ಯಗಳ ಅಸ್ಮಿತೆಗೆ ನೀಡಿರುವ ಬೆದರಿಕೆಯ ರೀತಿ ಕಾಣುತ್ತಿದೆ. ಇದನ್ನು ಒಪ್ಪಲು ಸಾಧ್ಯ ಇಲ್ಲ. ಇಂತಹದ್ದೊಂದು ಹೇಳಿಕೆ ಸಾಕ್ಷಾತ್ ಪ್ರಧಾನ ಮಂತ್ರಿಯವರಿಂದಲೇ ಬಂದಿರುವುದರಿಂದ ಅವರೇ ಇದಕ್ಕೆ ಸ್ಪಷ್ಟೀಕರಣ ನೀಡಬೇಕಾಗುತ್ತದೆ ಎಂದು ಸಿಎಂ ಆಗ್ರಹಿಸಿದ್ದಾರೆ.

ಹಿಂದೂ ಧರ್ಮದ ಬಗ್ಗೆ ದಣಿವಿಲ್ಲದಂತೆ ರಾತ್ರಿ-ಹಗಲು ಮಾತನಾಡುವ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತವರ ಪಕ್ಷ ಜಾತಿಯ ಪ್ರಶ್ನೆ ಎದುರಾದ ಕೂಡಲೇ ಭೀತಿಗೀಡಾಗುತ್ತಿರುವುದು ಯಾಕೆ? ಜಾತೀಯತೆಯನ್ನು ತೊಡೆದು ಹಾಕಬೇಕಾದರೆ ಮೊದಲು ಅದು ನಮ್ಮ ನಡುವೆ ಇರುವುದನ್ನು ಒಪ್ಪಿಕೊಳ್ಳಬೇಕಲ್ಲವೇ? ಜಾತಿ ಕುರುಡಿನಿಂದ ಜಾತೀಯತೆಯ ನಿರ್ಮೂಲನೆ ಅಸಾಧ್ಯ ಎನ್ನುವುದನ್ನು ಮಾನ್ಯ ನರೇಂದ್ರ ಮೋದಿ ಅವರು ಅರಿತಿದ್ದಾರೆ ಎಂದು ಭಾವಿಸುವೆ ಎಂದು ಸಿಎಂ ಸಿದ್ದರಾಮಯ್ಯ ಕಿವಿಮಾತು ಹೇಳಿದ್ದಾರೆ.

ಜಾತೀಯತೆಯನ್ನು ತೊಡೆದುಹಾಕಬೇಕಾದರೆ ಮೊದಲು ಅದಕ್ಕೆ ಅಂಟಿ ಕೊಂಡಿರುವ ಅಸ್ಪೃಶ್ಯತೆ, ಅಸಮಾನತೆ, ಲಿಂಗ ತಾರತಮ್ಯ ಮತ್ತು ಶೋಷಕ ವ್ಯವಸ್ಥೆಯನ್ನು ತೊಡೆದುಹಾಕಬೇಕು. ಜಾತಿ ಆಧಾರಿತ ಅಸಮಾನತೆಯನ್ನು ನಿವಾರಣೆ ಮಾಡುವ ಉದ್ದೇಶದಿಂದಲೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮೀಸಲಾತಿಯನ್ನು ಜಾರಿಗೆ ತಂದಿದ್ದರು. ಮೀಸಲಾತಿಯನ್ನು ಜಾತಿ ಆಧಾರದಲ್ಲಿಯೇ ನೀಡಲಾಗುತ್ತಿದೆ. ಪ್ರಧಾನಿ ಮೋದಿಯವರು ಜಾತೀಯತೆಯನ್ನು ತೊಡೆದು ಹಾಕಲು ನೀಡಿರುವ ಕರೆ ಮೀಸಲಾತಿಯನ್ನು ವಿರೋಧಿಸಲು ನೀಡಿರುವ ಪ್ರಚೋದನೆಯಂತೆ ಕಾಣುತ್ತಿದೆ. ಈ ಬಗ್ಗೆ ದೇಶದ ಜನ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಕೊಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...