ಜಪಾನ್ | ಜಿ7 ಶೃಂಗಸಭೆಯಲ್ಲಿ ಮೋದಿ-ರಿಷಿ ಸುನಕ್‌ ದ್ವಿಪಕ್ಷೀಯ ಮಾತುಕತೆ

Date:

Advertisements
  • ರಿಷಿ ಸುನಕ್‌, ಉಕ್ರೇನ್ ಅಧ್ಯಕ್ಷ ವೊಲೊಡೊಮಿರ್ ಝೆಲೆನ್ಸ್ಕಿ ಜೊತೆಗೂ ಪ್ರಧಾನಿ ಮೋದಿ ಸಭೆ
  • ಜಪಾನ್‌ನ ಹಿರೋಷಿಮಾದಲ್ಲಿ ಮೇ 19-21ರವರೆಗೆ ನಡೆಯುತ್ತಿರುವ ಜಿ7 ಶೃಂಗಸಭೆ

ಪ್ರಧಾನಿ ನರೇಂದ್ರ ಮೋದಿ ಅವರು ಜಪಾನ್‌ನ ಹಿರೋಷಿಮಾದಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯಲ್ಲಿ ಭಾನುವಾರ (ಮೇ 21) ಭಾಗವಹಿಸಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರ ಜೊತೆ ಮುಕ್ತ ವ್ಯಪಾರ ಸೇರಿ ಅನೇಕ ವಿಷಯಗಳ ಬಗ್ಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

ಈ ವೇಳೆ ಪ್ರಧಾನಿ ಮೋದಿ ಅವರು ಭಾರತ ಮತ್ತು ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದದ (ಎಫ್‌ಟಿಎ) ಮಾತುಕತೆಗಳ ಪ್ರಗತಿ ಸೇರಿದಂತೆ ದ್ವಿಪಕ್ಷೀಯ ಕಾರ್ಯತಂತ್ರದ ಪಾಲುದಾರಿಕೆ ಪರಿಶೀಲಿಸಿದರು.

ರಿಷಿ ಸುನಕ್ ಹಾಗೂ ಪ್ರಧಾನಿ ಮೋದಿ ಅವರು ವ್ಯಾಪಾರ ಹೂಡಿಕೆ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರ ಗಾಢಗೊಳಿಸುವ ಸಂಬಂಧ ಚರ್ಚಿಸಿದ್ದಾರೆ.

Advertisements

ವಿದೇಶಾಂಗ ವ್ಯವಹಾರಗಳ ಸಚಿವಾಲಯ ಟ್ವೀಟ್ ಮೂಲಕ ಪ್ರಧಾನಿ ಮೋದಿ ಭೇಟಿಯ ಬಗ್ಗೆ ಮಾಹಿತಿ ನೀಡಿದೆ.

“ಹಿರೋಷಿಮಾದಲ್ಲಿ ಪ್ರಧಾನಿ ಮೋದಿ ಮತ್ತು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಎರಡು ದೇಶಗಳಲ್ಲಿ ಎಫ್‌ಟಿಎ ಪ್ರಗತಿ, ಸಮಗ್ರ ಕಾರ್ಯತಂತ್ರಕ್ಕೆ ಉತ್ತೇಜನ ಸೇರಿದಂತೆ ಪ್ರಮುಖ ವಿಷಯಗಳ ಕುರಿತು ಮಾತನಾಡಿದರು. ರಿಷಿ ಸುನಕ್ ಹಾಗೂ ಪ್ರಧಾನಿ ಮೋದಿ ಅವರು, ಭಾರತ ಹಾಗೂ ಬ್ರಿಟನ್‌ನಲ್ಲಿ ವ್ಯಾಪಾರ, ವಿಜ್ಞಾನ ಮತ್ತು ತಂತ್ರಜ್ಞಾನ, ಉನ್ನತ ಶಿಕ್ಷಣ ಮತ್ತು ಜನರ ಬಾಂಧವ್ಯ ಸೇರಿದಂತೆ ವ್ಯಾಪಕ ಶ್ರೇಣಿಯ ಕ್ಷೇತ್ರಗಳಲ್ಲಿ ಸಹಕಾರ ಗಾಢವಾಗಿಸುವ ಸಂಬಂಧದ ಯೋಜನೆಗಳಿಗೆ ಸಮ್ಮತಿಸಿದರು” ಎಂದು ಸಚಿವಾಲಯ ಹೇಳಿದೆ.

ಭಾರತ ಹಾಗೂ ಬ್ರಿಟನ್ ದೇಶಗಳು ಕಳೆದ ವರ್ಷ ಜನವರಿಯಿಂದ ಎಫ್‌ಟಿಎ ಕುರಿತು ಮಾತುಕತೆ ನಡೆಸುತ್ತಿವೆ. 2022ರ ಅಂದಾಜು 34 ಬಿಲಿಯನ್ ಪೌಂಡ್‌ಗಳ ಮೌಲ್ಯದ ದ್ವಿಪಕ್ಷೀಯ ವ್ಯಾಪಾರ ಸಂಬಂಧ ಹೆಚ್ಚಿಸುವ ಒಪ್ಪಂದದ ಕುರಿತು ರಿಷಿ ಸುನಕ್‌ ಹಾಗೂ ಪ್ರಧಾನಿ ಚರ್ಚೆ ನಡೆಸಿದರು.

ಕಳೆದ ತಿಂಗಳು ಭಾರತ ಹಾಗೂ ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದದ (ಎಫ್‌ಟಿಎ) ಒಂಬತ್ತನೇ ಸುತ್ತಿನ ಮಾತುಕತೆಯನ್ನು ಚರ್ಚೆಗಳ ಮೂಲಕ ಮುಕ್ತಾಯಗೊಳಿಸಿದ್ದವು.

ರಿಷಿ ಸುನಕ್ ಅವರಿಗೂ ಮುನ್ನ ಶನಿವಾರ (ಮೇ 20) ಪ್ರಧಾನಿ ಮೋದಿ ಜಿ7 ಶೃಂಗಸಭೆಯಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡೊಮಿರ್ ಝೆಲೆನ್ಸ್ಕಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ಸುದ್ದಿ ಓದಿದ್ದೀರಾ? ನೈರುತ್ಯ ಮಾನ್ಸೂನ್ | ದೇಶದಲ್ಲಿ ಲಘು ಹಾಗೂ ಭಾರೀ ಪ್ರಮಾಣದ ಮಳೆ: ಐಎಂಡಿ

ಯುದ್ಧಪೀಡಿತ ಉಕ್ರೇನ್‌ಗೆ ಎಲ್ಲ ರೀತಿಯ ನೆರವು ನೀಡುವುದಾಗಿ ಪ್ರಧಾನಿ ಮೋದಿ ಝೆಲೆನ್ಸ್ಕಿಗೆ ಭರವಸೆ ನೀಡಿದರು.

ಮೇ 19ರಿಂದ 21ರವರೆಗೆ ಜಪಾನ್‌ನ ಹಿರೋಷಿಮಾದಲ್ಲಿ ಜಿ7 ಶೃಂಗಸಭೆ ನಡೆಯುತ್ತಿದೆ. ಇದರಲ್ಲಿ ಇಂಗ್ಲೆಂಡ್, ಅಮೆರಿಕ, ಜಪಾನ್, ಭಾರತ, ಫ್ರಾನ್ಸ್, ಜರ್ಮನಿ, ಕೆನಡಾ, ಇಟಲಿ ದೇಶದ ನಾಯಕರು ಭಾಗವಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಅಮೆರಿಕದ ‘ಅಕ್ಕರೆಯ ನ್ಯಾಯಾಧೀಶ’ ಫ್ರಾಂಕ್ ಕ್ಯಾಪ್ರಿಯೊ ನಿಧನ

ರೋಡ್ ಐಲ್ಯಾಂಡ್‌ನ ನಿವೃತ್ತ ಮುನಿಸಿಪಲ್ ನ್ಯಾಯಾಧೀಶರಾಗಿದ್ದ, ಸಾಮಾಜಿಕ ಜಾಲತಾಣಗಳಲ್ಲಿ 'ಅಕ್ಕರೆಯ ನ್ಯಾಯಾಧೀಶ'...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X