ಒಂದೂವರೆ ಗಂಟೆಯಾದರೂ ಮಣಿಪುರದ ಬಗ್ಗೆ ತುಟಿ ಬಿಚ್ಚದ ಪ್ರಧಾನಿ ನರೇಂದ್ರ ಮೋದಿ

Date:

ಎನ್‌ಡಿಎ ಸರ್ಕಾರದ ಸಾಧನೆಗಳ ಪಟ್ಟಿ... ವಿಪಕ್ಷಗಳನ್ನು ತೆಗಳಿದ್ದು... ಸ್ವಯಂ ಹೊಗಳುವಿಕೆ... ರಾಹುಲ್ ಗಾಂಧಿಯವರ ವಿಡಿಯೋಗಳ ಬಗ್ಗೆ ಅಣಕ… ಮತ್ತೆ 2024ಕ್ಕೆ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ… 'ಇಂಡಿಯಾ' ಮೈತ್ರಿಕೂಟದ ಬಗ್ಗೆ ವ್ಯಂಗ್ಯ... ಆಡಳಿತ ಪಕ್ಷದ ಬೆಂಬಲಿಗರ ಮೇಜು ಕುಟ್ಟುವಿಕೆ…

ವಿಪಕ್ಷಗಳ ಅವಿಶ್ವಾಸ ನಿರ್ಣಯದ ಮೇಲೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಲೋಕಸಭೆಯಲ್ಲಿ ಆರಂಭಿಸಿರುವ ಭಾಷಣ ಒಂದು ಗಂಟೆಯಾದರೂ ಮಣಿಪುರದ ಬಗ್ಗೆ ಒಂದೇ ಒಂದು ಪದ ಮಾತನಾಡಿಲ್ಲ.

- Advertisement -

ಇಂದು ಸಂಜೆ 05:08ಕ್ಕೆ ಭಾಷಣ ಆರಂಭಿಸಿದ ಪ್ರಧಾನಿ ಮೋದಿ, ಮಣಿಪುರ ಹಿಂಸಾಚಾರ ಸಂಬಂಧ ವಿಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯದ ಮೇಲೆ ಮೋದಿ ಅವರು ಭಾಷಣ ಆರಂಭಿಸಿ, ಮಣಿಪುರ ಘಟನೆಯ ಬಗ್ಗೆ ಒಂದೂ ಮಾತನಾಡಲಿಲ್ಲ. ವಿಪಕ್ಷಗಳನ್ನು ಟೀಕಿಸುವುದರಲ್ಲೇ ಪ್ರಧಾನಿ ಮೋದಿ ತಮ್ಮ ಭಾಷಣ ಮುಗಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

‘ನನ್ನನ್ನು ಟೀಕಿಸಲು ವಿಪಕ್ಷ ನಾಯಕರು ಡಿಕ್ಷನರಿ ಹುಡುಕುತ್ತಾರೆ. ಅವರ ಮನಸ್ಥಿತಿ ಏನು ಅನ್ನೋದನ್ನ ನಾನು ವಿವರಿಸಬಲ್ಲೆ. ಪ್ರತಿ ದಿನ ಕೂಡ ಇಂತಹ ಜನರು ಟೀಕೆ ಮಾಡುತ್ತಾರೆ. ಮೋದಿಯವರೇ ನಿಮಗೆ ಸಮಾಧಿ ತೋಡುತ್ತಿದ್ದೇವೆ ಎಂದು ಹೇಳುತ್ತಾರೆ. ಈ ಶಬ್ದಗಳು, ಇವರ ಭಾಷೆ ನನಗೆ ಟಾನಿಕ್ ಆಗಿದೆ’ ಎಂದರು.

‘2024ರಲ್ಲೂ ನಾವೇ ಅಧಿಕಾರಕ್ಕೆ ಬರುತ್ತೇವೆ’ ಎಂದ ಪ್ರಧಾನಿ ಮೋದಿ, ವಿಪಕ್ಷಗಳ ಆಡುವ ಒಂದೊಂದು ಮಾತನ್ನು ದೇಶದ ಜನರು ಗಮನಿಸುತ್ತಿದ್ದಾರೆ. ವಿಪಕ್ಷಗಳು ಯಾವಾಗಲೂ ನಿರಾಸೆಯಿಂದಲೇ ಮಾತನಾಡುತ್ತಿವೆ. ಅವಿಶ್ವಾಸ ನಿರ್ಣಯ ಮಂಡಿಸಿದ್ದಾರೆ’ ಎಂದು ಟೀಕಿಸಿದರು.

ವಿಪಕ್ಷಗಳ ಅವಿಶ್ವಾಸ ನಿರ್ಣಯ ಯಾಚನೆಯು ನಮಗೆ ಶುಭ ಸೂಚನೆ ಎಂದ ಮೋದಿ, ವಿಪಕ್ಷಗಳ ಸದಸ್ಯರು ಬರೀ ನೋ ಬಾಲ್ ಎಸೆಯುತ್ತಿದ್ದಾರೆ. ನಮ್ಮ ಸದಸ್ಯರು ಸೆಂಚುರಿ ಬಾರಿಸುತ್ತಿದ್ದಾರೆ. ವಿಪಕ್ಷ ನಾಯಕರೇ ಫೀಲ್ಡಿಂಗ್ ಆರ್ಗನೈಸ್‌ ಮಾಡಿದ್ದರು. ಆದರೆ ಸಿಕ್ಸ್, ಫೋರ್​ಗಳು ನಮ್ಮ ಕಡೆಯಿಂದ ಹೋದವು ಎಂದು ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯವಾಡಿದರು.

ತಮ್ಮ ಭಾಷಣದುದ್ದಕ್ಕೂ ಕೇವಲ ಕಾಂಗ್ರೆಸ್‌ನ ಹೆಸರನ್ನು ಉಲ್ಲೇಖಿಸಿದ ಮೋದಿ, ಯಾವ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್‌ ಅಧಿಕಾರದಲ್ಲಿತ್ತು ಎಂಬುದನ್ನು ಪಟ್ಟಿ ಮಾಡಿ ಓದಿದರು.

ಮಣಿಪುರದ ಬಗ್ಗೆ ಮಾತನಾಡದ್ದಕ್ಕೆ ಆಕ್ರೋಶಗೊಂಡ ಇಂಡಿಯಾ ಮೈತ್ರಿಕೂಟದ ಸದಸ್ಯರು, ಮಣಿಪುರದ ಬಗ್ಗೆ ಮಾತನಾಡುವಂತೆ ಪಟ್ಟು ಹಿಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...