ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ

Date:

ಮಹಾರಾಷ್ಟ್ರದ ಸೋಲಾಪುರದಲ್ಲಿ ಆಯೋಜಿಸಿರುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ನವದೆಹಲಿಯಿಂದ ಇಂಡಿಯನ್ ಏರ್ ಫೋರ್ಸ್ ವಿಶೇಷ ವಿಮಾನದ ಮೂಲಕ ಶುಕ್ರವಾರ ಬೆಳಗ್ಗೆ 9.30ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಶಿಷ್ಟಾಚಾರದಂತೆ ವಿಮಾನ ನಿಲ್ದಾಣದಲ್ಲಿ ಸ್ವಾಗತ ಕೋರಲಾಯಿತು.

- Advertisement -

ಕೇಂದ್ರ ರಾಸಾಯನಿಕ, ರಸಗೊಬ್ಬರ ಹಾಗೂ ಹೊಸ ನವೀಕರಣ ಇಂಧನ ಖಾತೆಯ ರಾಜ್ಯ ಸಚಿವ ಭಗವಂತ ಖೂಬಾ, ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ, ಸಂಸದ‌ ಡಾ. ಉಮೇಶ್ ಜಾಧವ, ಶಾಸಕರಾದ ಬಸವರಾಜ ಮತ್ತಿಮೂಡು, ವಿಧಾನ ಪರಿಷತ್ ಶಾಸಕರಾದ ಬಿ.ಜಿ.ಪಾಟೀಲ, ಶಶೀಲ ಜಿ. ನಮೋಶಿ, ಕಲಬುರಗಿ‌ ಮಹಾನಗರ ಪಾಲಿಕೆಯ ಮಹಾಪೌರರಾದ ವಿಶಾಲ ಧರ್ಗಿ, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಜಿಲ್ಲಾಧಿಕಾರಿ ಬಿ. ಫೌಝಿಯಾ ತರನ್ನುಮ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಆರ್. ಚೇತನ ಕುಮಾರ, ಎಸ್.ಪಿ. ಅಡ್ಡೂರು ಶ್ರೀನಿವಾಸಲು ಅವರು ಹೂಗುಚ್ಛ ನೀಡಿ ಪ್ರಧಾನಮಂತ್ರಿಗಳನ್ನು ಬರಮಾಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ರಾಜಕುಮಾರ ಪಾಟೀಲ ತೇಲ್ಕೂರ, ಸುಭಾಷ ಗುತ್ತೇದಾರ, ಮಾಲಿಕಯ್ಯ ಗುತ್ತೇದಾರ, ಅಮರನಾಥ ಪಾಟೀಲ, ಬಿ.ಜೆ‌.ಪಿ. ಪಕ್ಷದ ಕಲಬುರಗಿ ನಗರಾಧ್ಯಕ್ಷ ಚಂದು ಪಾಟೀಲ, ಜಿಲ್ಲಾ ಅಧ್ಯಕ್ಷ ಶಿವರಾಜ ಪಾಟೀಲ ರದ್ದೆವಾಡಗಿ ಸೇರಿದಂತೆ ಜಿಲ್ಲೆಯ ಅನೇಕ ಮುಖಂಡರು ಇದ್ದರು. ನಂತರ ಪ್ರಧಾನಮಂತ್ರಿಗಳು ಇಂಡಿಯನ್ ಏರ್ ಫೋರ್ಸ್ ಹೆಲಿಕಾಪ್ಟರ್ ಮೂಲಕ ಸೋಲಾಪುರಕ್ಕೆ ಪ್ರಯಾಣ ಬೆಳೆಸಿದರು.

ಇಂದು ಮಧ್ಯಾಹ್ನ 2.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...

ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ: ಸಿಎಂ ಡಿ ಕೆ ಶಿವಕುಮಾರ್

"ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಮೂಲಕ ವಿಕೇಂದ್ರೀಕರಣ ವ್ಯವಸ್ಥೆಯನ್ನು ಇನ್ನಷ್ಟು...