ಮೋದಿಗೆ ಚುನಾವಣಾ ಪ್ರಚಾರದಲ್ಲಿದ್ದ ಆಸಕ್ತಿ ಮಣಿಪುರ ಗಲಭೆ ಬಗ್ಗೆ ಇರಲಿಲ್ಲ: ದಿನೇಶ್‌ ಗುಂಡೂರಾವ್‌

Date:

ಮಣಿಪುರದಲ್ಲಿ ಮಹಿಳೆಯರಿಬ್ಬರನ್ನು ನಗ್ನಗೊಳಿಸಿ ಮೆರವಣಿಗೆ ಮಾಡಿರುವ ಕೃತ್ಯಕ್ಕೆ ಸುಪ್ರೀಂ ಕೋರ್ಟ್ ಹಾಕಿರುವ ಛೀಮಾರಿ, ಕೇಂದ್ರದ ನಿಷ್ಕ್ರಿಯತೆಗೆ ಹಿಡಿದ ಕೈಗನ್ನಡಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಆರೋಪಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, “ಈ ಹೇಯ ಕೃತ್ಯ ನಡೆಯಲು ಅಲ್ಲಿನ ರಾಜ್ಯ ಸರ್ಕಾರದ ಎಷ್ಟು ಪಾಲಿದೆಯೋ ಕೇಂದ್ರದ ಪಾಲೂ ಅಷ್ಟೇ ಇದೆ. ಮಣಿಪುರದ ಗಲಭೆಯನ್ನು ಆರಂಭದಲ್ಲೇ ನಿಯಂತ್ರಿಸಿದ್ದರೆ ಈ ಘಟನೆ ನಡೆಯುತಿತ್ತೆ” ಎಂದು ಪ್ರಶ್ನಿಸಿದ್ದಾರೆ.

“ಮಣಿಪುರದಲ್ಲಿ ಮಹಿಳೆಯರನ್ನು ವಿವಸ್ತ್ರಗೊಳಿಸಿದ್ದು ಮೇ 4 ರಂದು. ಆಗ ನಮ್ಮ ಘನವೆತ್ತ ಪ್ರಧಾನಿ ಮೋದಿ ರೋಡ್ ಶೋ ಮಾಡಲು ಕರ್ನಾಟಕದಲ್ಲಿದ್ದರು. ಇದಕ್ಕೂ ಮೊದಲೇ ಮಣಿಪುರದಲ್ಲಿ ಗಲಭೆ ಪ್ರಾರಂಭವಾಗಿತ್ತು. ಮೋದಿಯವರಿಗೆ ಚುನಾವಣಾ ಪ್ರಚಾರದಲ್ಲಿ ಇದ್ದ ಆಸಕ್ತಿ ಮಣಿಪುರದ ಗಲಭೆ ಬಗ್ಗೆ ಇದ್ದಿದ್ದರೆ ಇಂತಹ ಹೇಯ ಕೃತ್ಯ ತಡೆಯಬಹುದಿತ್ತಲ್ಲವೆ?” ಎಂದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಯಾರೊಂದಿಗೂ ಮೈತ್ರಿ ಇಲ್ಲ, ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಸಮರ: ಎಚ್ ಡಿ ದೇವೇಗೌಡ

“ಮಣಿಪುರದ ಘಟನೆ ವಿಶ್ವದ ಮುಂದೆ ನಾವು ತಲೆತಗ್ಗಿಸುವಂತೆ ಮಾಡಿದೆ. ಇಂತಹ ಅಮಾನವೀಯ ಕೃತ್ಯಕ್ಕೆ ಈ ದೇಶ ಸಾಕ್ಷಿಯಾಗಿದ್ದು, ಈ ನೆಲದ ದುರಂತ. ಬಿಜೆಪಿಯ ಫ್ಯಾಸಿಸ್ಟ್ ಮನಸ್ಸುಗಳು ಧರ್ಮ ಧರ್ಮಗಳ ನಡುವೆ ವಿಷ ಬೀಜ ಬಿತ್ತಿದ ಫಲವಿದು. ಮೋದಿಯವರೇ, ಈಗಲಾದರೂ ನೀವು ನಿಮ್ಮ ಪರಿವಾರದವರು ಮನಸ್ಸು ಬದಲಾಯಿಸಿಕೊಳ್ಳಿ. ಪ್ರೀತಿ ಹಂಚಲು ಪ್ರಯತ್ನಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ, ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ: ಸಚಿವ ಕೆ ಎನ್ ರಾಜಣ್ಣ

"ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ, ನಾನು ಮಂತ್ರಿ ಸ್ಥಾನಕ್ಕೆ ರಾಜೀನಾಮೆ...

‘ಈ ದಿನʼ ಗ್ರೌಂಡ್‌ ರಿಪೋರ್ಟ್‌ 3 | ವಿಡಿಯೊ ಪ್ರಕರಣ; ಹಲವು ಮಹಿಳೆಯರ ರಾಜಕೀಯ ಮಹತ್ವಾಕಾಂಕ್ಷೆ ಮಣ್ಣುಪಾಲು

ಹಾಸನದ ಸಂಸದನ ಕಾಮಕಾಂಡ ಬಯಲಾಗುತ್ತಿದ್ದಂತೆ ಆ ಪಕ್ಷದ ಹಲವು ನಾಯಕಿಯರ ರಾಜಕೀಯ...

ಬೆಂಗಳೂರು | ಐಸಿಯುನಲ್ಲಿದ್ದ ರೋಗಿಗೆ ರಕ್ತ ಬರುವ ಹಾಗೆ ಥಳಿಸಿದ ಕೆ.ಸಿ.ಜನರಲ್ ಆಸ್ಪತ್ರೆ ಸಿಬ್ಬಂದಿ

ರಾಜ್ಯ ರಾಜಧಾನಿ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯ ಐಸಿಯುನಲ್ಲಿದ್ದ ರೋಗಿಯೊಬ್ಬರಿಗೆ ಆಸ್ಪತ್ರೆ ಸಿಬ್ಬಂದಿ...

ರೈತರ ಪಾಲಿಗೆ ಸತ್ತು ಹೋದ ಕಾಂಗ್ರೆಸ್ ಸರ್ಕಾರ: ಎ ಎಸ್ ಪಾಟೀಲ ನಡಹಳ್ಳಿ ವಾಗ್ದಾಳಿ

ರಾಜ್ಯದ ಕಾಂಗ್ರೆಸ್ ಸರ್ಕಾರವು ರೈತರ ಪಾಲಿಗೆ ಸತ್ತು ಹೋಗಿದೆ. ಕೇಂದ್ರ ಸರಕಾರ...