ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಸಮಯ ನಿಗದಿ, ದೆಹಲಿಗೆ ತೆರಳುವೆ: ಸಿದ್ದರಾಮಯ್ಯ

Date:

Advertisements

ಜೂನ್ 29ರ ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಸಮಯ ನಿಗದಿಯಾಗಿದೆ. ಪ್ರಧಾನಿ ಹಾಗೂ ಕೇಂದ್ರದ ಹಲವು ಸಚಿವರು ಹಾಗೂ ರಾಜ್ಯದಿಂದ ಆಯ್ಕೆಯಾದ ಎಲ್ಲ ಸಂಸದ ಜತೆ ಮಾತುಕತೆ ನಡೆಸಲಿದ್ದೇನೆ. ಇದಕ್ಕಾಗಿ ಇಂದೇ ದೆಹಲಿಗೆ ತೆರಳಲಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದಲ್ಲಿ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

“ದೆಹಲಿಗೆ ತೆರಳುವ ಮುನ್ನ ಇಂದು ರಾಜ್ಯದ ಸಂಸದರ ಜೊತೆ ಸಭೆ ನಡೆಸುತ್ತೇನೆ. ರಾಜ್ಯಕ್ಕೆ ಬರಬೇಕಿರುವ ಅನುದಾನ, ಯೋಜನೆಗಳ ಬಗ್ಗೆ ಚರ್ಚೆ ನಡೆಸಿ ಮಾಹಿತಿ ಸಂಗ್ರಹಿಸಲಿದ್ದೇನೆ” ಎಂದು ತಿಳಿಸಿದರು.

Advertisements

“ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ ಅನುಷ್ಠಾನಗೊಳಿಸಬೇಕಿರುವ ಯೋಜನೆಗಳ ಬಗ್ಗೆ ಪ್ರಧಾನಿ ಹಾಗೂ ಕೇಂದ್ರ ಸಚಿವರ ಜತೆ ಚರ್ಚಿಸಲಿದ್ದೇನೆ. ರಾಜ್ಯದ ಯೋಜನೆಗಳಿಗೆ ಕೇಂದ್ರದಿಂದ ಬರಬೇಕಿರುವ ಅನುದಾನದ ಬಗ್ಗೆಯೂ ಪ್ರಸ್ತಾಪಿಸಲಿದ್ದೇನೆ” ಎಂದು ಹೇಳಿದರು.

“ವಿವಿಧ ಇಲಾಖೆಗಳ ಸಚಿವರೂ ನನ್ನ ಜತೆ ದೆಹಲಿಗೆ ಬರಲಿದ್ದಾರೆ. ಅಲ್ಲಿ ಭೂಸಾರಿಗೆ ಸಚಿವರನ್ನು ಭೇಟಿಯಾಗಲಿದ್ದೇವೆ. ಗೃಹ ಸಚಿವರನ್ನೂ ಭೇಟಿಯಾಗಿ ಮಾತುಕತೆ ನಡೆಸಲಿದ್ದೇವೆ. ಹಣಕಾಸು ಸಚಿವರನ್ನೂ ಭೇಟಿಯಾಗಲು ಪ್ರಯತ್ನಿಸುತ್ತೇವೆ. ಪ್ರಧಾನಿ ಹಾಗೂ ಗಡ್ಕರಿ ಭೇಟಿಗೆ ಸಮಯ ನಿಗದಿಯಾಗಿದೆ. ಗೃಹ ಸಚಿವರ ಭೇಟಿಗೆ ಇನ್ನಷ್ಟೇ ಸಮಯ ನಿಗದಿಯಾಗಬೇಕಿದೆ” ಎಂದರು.

ಕೇಂದ್ರ ಬಜೆಟ್​​​ನಲ್ಲಿ ಕರ್ನಾಟಕದ ಬೇಡಿಕೆಗಳೇನು ಎಂದು ಪ್ರಶ್ನಿಸಿದಾಗ, “ಈಗಾಗಲೇ ಪ್ರಸ್ತಾವನೆಗಳನ್ನು ಸಲ್ಲಿಸಲಾಗಿದೆ. ಬಜೆಟ್ ಪೂರ್ವಭಾವಿ ಸಭೆಯಲ್ಲಿ ಖುದ್ದು ಭಾಗವಹಿಸಲು ಸಾಧ್ಯವಾಗಿಲ್ಲ. ಹೀಗಾಗಿ ಸಚಿವ ಕೃಷ್ಣ ಭೈರೇಗೌಡರ ಮೂಲಕ ಪ್ರಸ್ತಾವನೆ ಕಳುಹಿಸಲಾಗಿದೆ. ಏನೇನು ಆಗಬೇಕೆಂಬ ಹೇಳಿಕೆ ರೆಕಾರ್ಡ್ ಮಾಡಿ ಕಳುಹಿಸಿದ್ದೇನೆ” ಎಂದರು.

“ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿದ್ದಾರೆ. ರಾಹುಲ್ ಗಾಂಧಿಯವರು ವಿಪಕ್ಷ ನಾಯಕನಾಗಿದ್ದಾರೆ. ರಾಹುಲ್ ಗಾಂಧಿ ಚುನಾವಣೆಗೂ ಮುನ್ನ ಇಡೀ ದೇಶ ಸುತ್ತಿದ್ದಾರೆ. ಅವರಿಗೆ ಜನರ ಸಮಸ್ಯೆಗಳ ಬಗ್ಗೆ ಅರಿವಿದೆ. ಅದನ್ನವರು ಸಂಸತ್​​ನಲ್ಲಿ ಸಮರ್ಥವಾಗಿ ಮಂಡಿಸಲಿದ್ದಾರೆ. ಸಮರ್ಥ ವಿಪಕ್ಷ ನಾಯಕನಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂಬ ವಿಶ್ವಾಸ ಇದೆ” ಎಂದು ಹೇಳಿದರು.

“ಬೆಂಗಳೂರಿನ ನಿರ್ಮಾತೃ ಕೆಂಪೇಗೌಡ ಅವರು ನಮಗೆಲ್ಲ ಮಾದರಿ. ಅನೇಕ ಕೆರೆಗಳನ್ನು ಬೆಂಗಳೂರಿನಲ್ಲಿ ನಿರ್ಮಿಸಿದ್ದರು. ಅವರ ಅವಧಿಯಲ್ಲಿ ಪೇಟೆಗಳು ನಿರ್ಮಾಣವಾದವು. ಪರಿಣಾಮ ಬೆಂಗಳೂರು ವ್ಯಾಪಾರ ಕೇಂದ್ರವಾಗಿ ಮುನ್ನೆಲೆಗೆ ಬಂದು ಈಗ ವಿಶ್ವ ವಿಖ್ಯಾತಿ ಗಳಿಸಿದೆ. ಇದರ ಶ್ರೇಯಸ್ಸು ಕೆಂಪೇಗೌಡರಿಗೆ ಸಲ್ಲಬೇಕು” ಎಂದು ತಿಳಿಸಿದರು.

“ಮೊದಲ ಬಾರಿಗೆ ಸರ್ಕಾರದ ವತಿಯಿಂದ ಕೆಂಪೇಗೌಡ ಜಯಂತಿ ನಾನು ಆರಂಭಿಸಿದೆ. ಪ್ರಾಧಿಕಾರ ರಚನೆ ಕೂಡ ಮಾಡಿದೆ. ಅಂದಿನಿಂದ ನಿರಂತರವಾಗಿ ಸರ್ಕಾರಗಳು ಜಯಂತಿ ಆಚರಿಸುತ್ತ ಬಂದಿವೆ. ಕೆಂಪೇಗೌಡ ಆಡಳಿತ ನಮಗೆಲ್ಲ ಮಾದರಿ. ಎಲ್ಲರಿಗೂ ಕೆಂಪೇಗೌಡ ಜಯಂತಿ ಶುಭಾಶಯಗಳು” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X