ಇಂದು ಬೆಳಗ್ಗೆ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ರಾಷ್ಟ್ರಪತಿ ಕಚೇರಿ, “ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೇಂದ್ರ ಸಚಿವ ಸಂಪುಟದ ಜೊತೆಗೆ ಆಗಮಿಸಿ, ತಮ್ಮ ರಾಜೀನಾಮೆಯನ್ನು ಸಲ್ಲಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜೀನಾಮೆಯನ್ನು ಅಂಗೀಕರಿಸಿದರು ಮತ್ತು ಹೊಸ ಸರ್ಕಾರ ರಚನೆಯಾಗುವವರೆಗೆ ಅಧಿಕಾರದಲ್ಲಿ ಮುಂದುವರಿಯುವಂತೆ ಪ್ರಧಾನ ಮಂತ್ರಿ ಮತ್ತು ಕೇಂದ್ರ ಸಚಿವ ಸಂಪುಟಕ್ಕೆ ಮನವಿ ಮಾಡಿದ್ದಾರೆ” ಎಂದು ತಿಳಿಸಿದೆ.
Prime Minister @narendramodi called on President Droupadi Murmu at Rashtrapati Bhavan. The Prime Minister tendered his resignation along with the Union Council of Ministers. The President accepted the resignation and requested the Prime Minister and the Union Council of Ministers… pic.twitter.com/1ZeSwQFU1y
— President of India (@rashtrapatibhvn) June 5, 2024
ಎನ್‌ಡಿಎ ಒಕ್ಕೂಟ 292 ಕ್ಷೇತ್ರಗಳಲ್ಲಿ ಜಯಗಳಿಸಿ ಬಹುಮತಗಳಿಸಿದೆ. ಒಂದು ವೇಳೆ ಎನ್‌ಡಿಎ ಕೂಟವೇ ಸರ್ಕಾರ ರಚಿಸಿದರೆ ಮಾಜಿ ಪ್ರಧಾನಿ ದಿವಂಗತ ಜವಾಹರ್‌ಲಾಲ್ ನೆಹರೂ ನಂತರ ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗುವ ಎರಡನೇ ನಾಯಕರಾಗಲಿದ್ದಾರೆ. ಮೂರನೇ ಬಾರಿ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಅವರು ಜೂನ್ 8ರಂದು ಸಂಜೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
