ಪ್ರಧಾನಿ ಪದವೀಧರರಾಗದಿರುವುದು ಅಪರಾಧವಲ್ಲ, ಸುಳ್ಳು ಹೇಳುವುದು ಮಹಾಪರಾಧ: ಪ್ರಕಾಶ್ ರಾಜ್

Date:

Advertisements

ಪ್ರಧಾನಿ ಪದವೀಧರರಾಗದಿರುವುದು ಅಪರಾಧವಲ್ಲ, ಆದರೆ ಸುಳ್ಳು ಹೇಳುವುದು, ಆ ಸುಳ್ಳು ಮರೆಮಾಚಲು ಸಂಸ್ಥೆಗಳನ್ನು ಬಳಸುವುದು ಮಹಾಪರಾಧ ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ಬಗ್ಗೆ ಮತ್ತೆ ಚರ್ಚೆ ಶುರುವಾಗಿದೆ. ಮೋದಿ ತಾವು 1978ರಲ್ಲಿ ಬಿ ಎ ಪದವಿ ಪಡೆದಿರುವುದಾಗಿ ಹೇಳಿದ್ದಾರೆ. ಇದಕ್ಕೆ ಸಂಬಂಧಿಸಿದ ವಿವರಗಳನ್ನು ಒದಗಿಸಲು ಆಗ್ರಹಿಸಿ ನೀರಜ್ ಎಂಬವರು ಹಲವು ವರ್ಷಗಳ ಹಿಂದೆ ಆರ್‌ಟಿಐ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದರು.

ಇದನ್ನು ಓದಿದ್ದೀರಾ? ಗುಜರಾತ್‌ ನರಮೇಧದ ಹಿಂದಿದ್ದವರು ಮೋದಿಯೇ ಎಂದು ನಿರಂತರ ಸಮರ ಸಾರಿದ್ದರು ಝಕಿಯಾ ಜಾಫ್ರಿ

Advertisements

ಈ ಅರ್ಜಿಯ ಆಧಾರದಲ್ಲಿ 2016ರ ಡಿಸೆಂಬರ್ 21ರಂದು ಕೇಂದ್ರ ಮಾಹಿತಿ ಆಯೋಗ(ಸಿಐಸಿ) ಪ್ರಧಾನಿ ಮೋದಿ ಅವರ ಪದವಿ ವ್ಯಾಸಂಗಕ್ಕೆ ಸಂಬಂಧಿಸಿದ ವಿವರಗಳನ್ನು ಬಹಿರಂಗಪಡಿಸುವಂತೆ ಆದೇಶಿಸಿತ್ತು.

ಆದರೆ ಈ ಅರ್ಜಿಯನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ದೆಹಲಿ ವಿಶ್ವವಿದ್ಯಾಲಯ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್‌, 2017ರ ಜನವರಿ 23ರಂದು ಸಿಐಸಿ ಆದೇಶಕ್ಕೆ ತಡೆ ನೀಡಿ ಆದೇಶಿಸಿತ್ತು. ಹಾಗೆಯೇ ತನಿಖೆ ಮುಂದುವರೆದಿದ್ದು, ಹೈಕೋರ್ಟ್ ಸೋಮವಾರ ಸಿಐಸಿ ಆದೇಶವನ್ನು ರದ್ದುಪಡಿಸಿದೆ.

ಪಡೆದ ಅಂಕಗಳು, ಶ್ರೇಣಿ, ಉತ್ತರ ಪತ್ರಿಕೆಗಳು, ವೈಯಕ್ತಿಕ ಮಾಹಿತಿ ಆಗಿದ್ದು, ಈ ವಿವರಗಳನ್ನು ಬಹಿರಂಗಪಡಿಸದಂತೆ ಆರ್‌ಟಿಐ ಕಾಯ್ದೆ ಸೆಕ್ಷನ್ 8(1) ಅಡಿ ರಕ್ಷಣೆ ನೀಡಲಾಗಿದೆ ಎಂದು ಹೈಕೋರ್ಟ್ ಹೇಳಿದೆ. ಹಾಗೆಯೇ ಅಧಿಕಾರದಲ್ಲಿದ್ದುಕೊಂಡು ಕರ್ತವ್ಯ ನಿರ್ವಹಿಸಲು ಶೈಕ್ಷಣಿಕ ಅರ್ಹತೆಗಳು ಶಾಸನಬದ್ಧವಾಗಿ ಅಗತ್ಯವೇನಲ್ಲ ಎಂದು ಹೇಳಿದೆ.

ಈ ವಿಚಾರದಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ನಟ ಪ್ರಕಾಶ್ ರಾಜ್, “ಪ್ರಧಾನಿಯೊಬ್ಬರು ಪದವೀಧರ ಆಗದಿರುವುದು ಅಪರಾಧವಲ್ಲ. ಆದರೆ ಪದವೀಧರನೆಂದು ಸುಳ್ಳು ಹೇಳುವುದು, ಆ ಸುಳ್ಳು ಮುಚ್ಚಿಡಲು ಸಂಸ್ಥೆಗಳನ್ನು ಬಳಸಿಕೊಳ್ಳುವುದು, ಕೇವಲ ಅಪರಾಧ ಮಾತ್ರವಲ್ಲ. ಮಹಾಪರಾಧ” ಎಂದು ಬರೆದುಕೊಂಡಿದ್ದಾರೆ.

ಇನ್ನು, “ತಮ್ಮ ಪದವಿ ವಿವರಗಳನ್ನು ಮುಚ್ಚಿಡಲು ನ್ಯಾಯಾಲಯದ ಮೊರೆ ಹೋದ ದೇಶದ ಮೊದಲ ಪ್ರಧಾನಿ ನರೇಂದ್ರ ಮೋದಿ” ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿಯ ಪದವಿ ವಿವರ ಬಹಿರಂಗಪಡಿಸುವ ಅಗತ್ಯವಿಲ್ಲ: ದೆಹಲಿ ಹೈಕೋರ್ಟ್ ತೀರ್ಪು

ದೆಹಲಿ ವಿಶ್ವವಿದ್ಯಾಲಯವು ಪ್ರಧಾನಿ ನರೇಂದ್ರ ಮೋದಿಯ ಪದವಿ ವಿವರಗಳನ್ನು ಬಹಿರಂಗಪಡಿಸುವ ಅಗತ್ಯವಿಲ್ಲ...

ಮೂರು ವರ್ಷದ ಅವಧಿಯಲ್ಲಿ ರಾಜ್ಯಾದ್ಯಂತ 6,635 ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣ ದಾಖಲು: ಸಿಎಂ ಸಿದ್ದರಾಮಯ್ಯ

ಮೂರು ವರ್ಷದ ಅವಧಿಯಲ್ಲಿ ರಾಜ್ಯಾದ್ಯಂತ 6,635 ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣ ದಾಖಲಾಗಿದ್ದು,...

ಬಿಹಾರ ಸಿಎಂ ಅಭ್ಯರ್ಥಿ | ಮಹಾಘಟಬಂಧನ ನಿರ್ಧರಿಸಲಿದೆ; ಆರ್‌ಜೆಡಿಗೂ ಹಕ್ಕಿದೆ: ಎಸ್‌ಪಿ ನಾಯಕ

ಬಿಹಾರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ವಿರೋಧ ಪಕ್ಷಗಳ...

ಸುಪ್ರೀಂನಿಂದ ಪ್ರೊಫೆಸರ್ ಅಲಿ ಖಾನ್‌ಗೆ ರಕ್ಷಣೆ: ಆರೋಪ ಪಟ್ಟಿಯನ್ನು ಪರಿಗಣಿಸದಂತೆ ಮ್ಯಾಜಿಸ್ಟ್ರೇಟ್‌ಗೆ ಸೂಚನೆ

'ಆಪರೇಷನ್ ಸಿಂಧೂರ್' ಕುರಿತ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ ಹರಿಯಾಣದ ಅಶೋಕ...

Download Eedina App Android / iOS

X