ಪ್ರಧಾನಿಗಳ ಎರಡು ದಿನಗಳ ರಾಜ್ಯ ಪ್ರವಾಸ : ಮೈಸೂರಿಗೆ ಇಂದು ಮೋದಿ

Date:

  • ಇಂದು ರಾತ್ರಿ ಮೈಸೂರಿಗೆ ಬರಲಿರುವ ಪ್ರಧಾನಿ ನರೇಂದ್ರ ಮೋದಿ
  • ಬಂಡೀಪುರ ಹುಲಿ ಯೋಜನೆ 50 ವರ್ಷದ ಕಾರ್ಯಕ್ರಮದಲ್ಲಿ ಭಾಗಿ


ಏಪ್ರಿಲ್ 8 ಮತ್ತು 9ರಂದು ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ರಾಜ್ಯ ಪ್ರವಾಸ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು(ಏ.8) ರಾತ್ರಿ ಅವರು ಮೈಸೂರಿಗೆ ಆಗಮಿಸಲಿದ್ದಾರೆ.

ಇಲ್ಲಿಯವರೆಗೆ 7 ಬಾರಿ ಮೈಸೂರಿಗೆ ಆಗಮಿಸಿರುವ ಪ್ರಧಾನಿಗಳು 4ನೇ ಬಾರಿ ಮೈಸೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಬಧುವಾರ ರಾತ್ರಿ 8.45ಕ್ಕೆ ಚೆನೈನಿಂದ ಹೊರಟು ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು ರಾಡಿಸನ್ ಬ್ಲೂ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಏಪ್ರಿಲ್ 9ರ ಬೆಳಗ್ಗೆ ಚಾಮರಾಜನಗರದ ಮೇಲುಕಾಮನಹಳ್ಳಿ ಹೆಲಿಪ್ಯಾಡ್‌ಗೆ ತೆರಳಲಿರುವ ನರೇಂದ್ರ ಮೋದಿ, ಬೆಳಗ್ಗೆ 7.15ಕ್ಕೆ ಬಂಡೀಪುರಕ್ಕೆ ಭೇಟಿ ನೀಡಿ ಸಫಾರಿ ನಡೆಸಲಿದ್ದಾರೆ. ಅಲ್ಲಿಂದ ನೀಲಗಿರಿಯಲ್ಲಿ ಆನೆ ಶಿಬಿರಕ್ಕೆ ಭೇಟಿ ನೀಡಿ 2 ಗಂಟೆಗಳ ಕಾಲ ವಿಹರಿಸಲಿದ್ದಾರೆ.ಮೈಸೂರಿಗೆ

ನಂತರ ಕರ್ನಾಟಕ ಮುಕ್ತವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ನಡೆಯಲಿರುವ ಬಂಡೀಪುರ ಹುಲಿ ಯೋಜನೆ 50 ವರ್ಷದ ಸಂಭ್ರಮ ಕಾರ್ಯಕ್ರಮದಲ್ಲಿ ಪ್ರಧಾನಿಗಳು ಭಾಗಿಯಾಗಿ, ಹುಲಿಗಣತಿ ವರದಿ, ಹುಲಿಸಂರಕ್ಷಣೆಗಾಗಿ ಸರ್ಕಾರ ಕೈಗೊಂಡ ಕ್ರಮಗಳ ವರದಿ, ನಾಣ್ಯ ಸ್ಮರಣಿಕೆ ಬಿಡುಗಡೆ ಮಾಡಲಿದ್ದಾರೆ.

ಈ ಸುದ್ದಿ ಓದಿದ್ದೀರಾ? :ಪಕ್ಷಕ್ಕೆ ಸೇರುವ ಯಾರೊಬ್ಬರಿಗೂ ನಾವು ಟಿಕೆಟ್ ಭರವಸೆ ನೀಡುವುದಿಲ್ಲ: ಡಿ ಕೆ ಶಿವಕುಮಾರ್

ಇನ್ನು ಮಧ್ಯಾಹ್ನ 12.10ಕ್ಕೆ ಹೆಲಿಕಾಪ್ಟರ್ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಿ 12.40ಕ್ಕೆ ದೆಹಲಿಗೆ ವಾಪಸ್ ಆಗಲಿದ್ದಾರೆ. ಪ್ರಧಾನಿಗಳ ಕಾರ್ಯಮ್ರದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುತ್ತಿಗೆದಾರರ ಬಾಕಿ ಹಣ ಪಾವತಿ ವಿಚಾರ: ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್‌ ಕಿಡಿ

'ಇನ್ನೆಷ್ಟು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಬೇಕು?' ಹೈಕೋರ್ಟ್‌ ಕಿಡಿ ಬಾಕಿ ಪಾವತಿಯಲ್ಲೂ...

ಝೀರೋ ಟ್ರಾಫಿಕ್‌ನಲ್ಲಿ ಬಂದ ಮಗುವಿಗೆ ಚಿಕಿತ್ಸೆ ನೀಡದ ನಿಮ್ಹಾನ್ಸ್‌; ಸಾವು

ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಒಂದು ವರ್ಷದ ಪುಟ್ಟ ಕಂದಮ್ಮನಿಗೆ...

ಬಟ್ಟೆ ನೋಡಬೇಡಿ, ಮಾನವೀಯವಾಗಿ ಆರೋಗ್ಯ ಸೇವೆ ನೀಡಿ: ಸಿಎಂ ಸಿದ್ದರಾಮಯ್ಯ 

'ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದವಾಗಿದೆ' ...

ಬೆಂಗಳೂರು | ಪ್ರಿಯಕರನ ಮೊಬೈಲ್‌ನಲ್ಲಿತ್ತು 13 ಸಾವಿರ ನಗ್ನ ಫೋಟೋ: ದೂರು ದಾಖಲಿಸಿದ ಪ್ರಿಯತಮೆ

ಸಹೋದ್ಯೋಗಿ, ಪ್ರಿಯತಮೆ ಸೇರಿದಂತೆ ಮಹಿಳೆಯರ 13,000ಕ್ಕೂ ಹೆಚ್ಚು ನಗ್ನ ಫೋಟೋಗಳನ್ನು ಮೊಬೈಲ್‌ನಲ್ಲಿ...