ಸಿ ಟಿ ರವಿ ನೀಡಿರುವ ಅಂಡಮಾನ್ ಜೈಲು ಭೇಟಿ ಆಫರ್ ಸ್ವೀಕರಿಸಿದ ಸಚಿವ ಪ್ರಿಯಾಂಕ್ ಖರ್ಗೆ

Date:

  • ಬರಗಾಲ ಮುಗಿಸಿ ಜುಲೈನಲ್ಲಿ ಭೇಟಿ ಮಾಡುವೆ, ಅಲ್ಲಿಯವರಗೆ ಈ ಆಫರ್ ಇರುತ್ತಾ?
  • ಅಂಡಮಾನ್ ಪ್ರವಾಸದ ಸಂಪೂರ್ಣ ಖರ್ಚುವೆಚ್ಚ ನಾನೇ ಭರಿಸುತ್ತೇನೆ: ಸಿ ಟಿ ರವಿ

ವಿಧಾನಸಭೆಯಲ್ಲಿ ಸಾವರ್ಕರ್ ಫೋಟೋ ವಿವಾದಕ್ಕೆ‌ ಸಂಬಂಧಿಸಿದಂತೆ ಮಾಜಿ ಶಾಸಕ ಸಿ ಟಿ ರವಿ ಅವರು ನೀಡಿರುವ ಅಂಡಮಾನ್ ಜೈಲು ಭೇಟಿ ಆಫರ್ ಅನ್ನು ಸಚಿವ ಪ್ರಿಯಾಂಕ್ ಖರ್ಗೆ ಸ್ವೀಕರಿಸಿದ್ದಾರೆ.

- Advertisement -

“ಸಿ ಟಿ ರವಿ‌ ಅವರು ಫಂಡ್ ಮಾಡೋದರಿಂದ ನಾನು ಹೋಗಿ ಸಾವರ್ಕರ್ ಇದ್ದ ಜೈಲಿಗೆ ಹೋಗಿ ನೋಡಿಕೊಂಡು ಬರ್ತೀನಿ. ಆದರೆ ಇವಾಗ ರಾಜ್ಯದಲ್ಲಿ ಬರ ಪರಿಸ್ಥಿತಿ ಇದೆ. ಬರ ಮುಗಿದ ಮೇಲೆ ಜುಲೈ ತಿಂಗಳಲ್ಲಿ ಭೇಟಿ ಮಾಡುತ್ತೇನೆ. ಆದರೆ ಅಲ್ಲಿಯವರಗೆ ಈ ಆಫರ್ ಇರುತ್ತಾ ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ನನ್ನ ಸಿದ್ದಾಂತ ನನಗೆ ಕ್ಲಿಯರ್ ಇದೆ. ಬಸವ ತತ್ವ, ಅಂಬೇಡ್ಕರ್ ತತ್ವದ ಸಿದ್ದಾಂತ ನನ್ನದು. ಬಿಜೆಪಿಗೆ ನಾನು 3-4 ಪ್ರಶ್ನೆ ಕೇಳಿದ್ದೇನೆ. ಸಾವರ್ಕರ್ ಬ್ರಿಟಿಷರ ಪಿಂಚಣಿಗೆ ಅರ್ಜಿ ಹಾಕಿರಲಿಲ್ಲವಾ? ವೀರ ಅಂತ ಬಿರುದು ಸಾವರ್ಕರ್ ಗೆ ಯಾರು ಕೊಟ್ಟಿದ್ದು? ದೇಶ ವಿಭಜನೆ ಮಾಡೋಕೆ ಮೊದಲು ಪ್ರಸ್ತಾಪ ಮಾಡಿದ್ದು ಯಾರು ಅಂತ ಬಿಜೆಪಿ ಅವರು ಹೇಳಲಿ” ಎಂದು ಆಗ್ರಹಿಸಿದ್ದಾರೆ.

ವಿಧಾನಸಭೆಯಲ್ಲಿ ಹಾಕಲಾಗಿರುವ ಸಾವರ್ಕರ್ ಫೋಟೋವನ್ನು ತೆಗೆಯಲು ನನಗೆ ಅವಕಾಶ ಸಿಕ್ಕರೆ ಈಗಲೇ ತೆರವು ಮಾಡುತ್ತೇನೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದರು. ಸಚಿವರ ಈ ಹೇಳಿಕೆಗೆ ವಿವಾದಕ್ಕೆ ಕಾರಣವಾಗಿತ್ತು. ಪ್ರಿಯಾಂಕ್‌ ಖರ್ಗೆ ಹೇಳಿಕೆಗೆ ಸಿ ಟಿ ರವಿ ಟ್ವೀಟ್‌ ಮಾಡಿದ್ದರು.

ಸಿ ಟಿ ರವಿ ಟ್ವೀಟ್‌

ಆತ್ಮೀಯರಾದ ಪ್ರಿಯಾಂಕ್‌ ಖರ್ಗೆ ಅವರೇ, ತಾಯಿ ಭಾರತಿಯ ಮಡಿಲಿನಲ್ಲಿ ಜನಿಸಿದ ಮಹಾನ್ ರಾಷ್ಟ್ರೀಯವಾದಿ, ಕರಿನೀರ ವೀರ, ಹುತಾತ್ಮ ವೀರ್ ಸಾವರ್ಕರ್ ಅವರು, ಬ್ರಿಟಿಷರಿಂದ ಕಠಿಣ ಕಾರಾಗ್ರಹ ಶಿಕ್ಷೆಗೊಳಪಡಿಸುವ ತೀರ್ಪಿನಂತೆ, ಘೋರ ಕರಿನೀರಿನ ಶಿಕ್ಷೆ ಅನುಭವಿಸಿದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇರುವ ಸೆಲ್ಯುಲರ್ ಜೈಲಿಗೆ ಭೇಟಿ ನೀಡಲು ನಿಮ್ಮನ್ನು ಆಹ್ವಾನಿಸುತ್ತೇನೆ. ಅಂದ ಹಾಗೆ ನಿಮ್ಮ ಪ್ರವಾಸದ ಸಂಪೂರ್ಣ ಖರ್ಚುವೆಚ್ಚ ನಾನೇ ಭರಿಸುತ್ತೇನೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಂಚೆ- ಪಾರ್ಸೆಲುಗಳ ತೆರೆಯುವ ನಿರಂಕುಶ ಅಧಿಕಾರ ಅಪಾಯಕರ

ಅತ್ತ ನಿಮ್ಮ ನೆಚ್ಚಿನ ನೆಹರು, ಶಿಕ್ಷೆಯ ನೆಪದಲ್ಲಿ, ಬ್ರಿಟಿಷರ ಜೈಲುಗಳಲ್ಲಿ ಐಷಾರಾಮಿ ಉಪಚಾರ ಪಡೆಯುತ್ತಿರುವಾಗ, ಇತ್ತ ಅಂಡಮಾನಿನ ಜೈಲಿನಲ್ಲಿ ವೀರ್ ಸಾವರ್ಕರ್ ಯಾವ ರೀತಿಯ ನೋವು ಮತ್ತು ಸಂಕಟವನ್ನು ಅನುಭವಿಸಿದರು ಎಂಬ ಸಣ್ಣ ಅನುಭೂತಿ ನಿಮಗಾಗಬಹುದು.

ಸೆಲ್ಲ್ಯುಲರ್ ಜೈಲಿನ ಆವರಣದಲ್ಲೇ “ಸಾವರ್ಕರ್ ಮತ್ತು ನೆಹರು ಇವರಿಬ್ಬರಲ್ಲಿ ನಿಜವಾದ ಸ್ವಾತಂತ್ರ್ಯ ಹೋರಾಟಗಾರ ಯಾರು?” ಎಂಬುದರ ಕುರಿತು ಬಹಿರಂಗ ಚರ್ಚೆ ನಡೆಸಲು ನಾನು ನಿಮಗೆ ಸವಾಲು ಹಾಕುತ್ತೇನೆ. ವಿನಾಯಕ ದಾಮೋದರ್ ಸಾವರ್ಕರ್ ಅವರ ಫೋಟೋವನ್ನು ವಿಧಾನಸಭೆ ಅಥವಾ ಪರಿಷತ್ತಿನಿಂದ ತೆಗೆಯುವ ದುಸ್ಸಾಹಸ ಮಾಡಿದರೆ ಇಡೀ ರಾಜ್ಯದ ಜನತೆಯಾದಿಯಾಗಿ ನಾವೆಲ್ಲರೂ ಉಗ್ರ ಪ್ರತಿಭಟನೆ ನಡೆಸುತ್ತೇವೆ.

ಇಂದು ನೀವು ಅಧಿಕಾರದಲ್ಲಿರಬಹುದು, ನೆನಪಿಡಿ, ಮುಂದೆ ನಾವು ಅಧಿಕಾರಕ್ಕೆ ಬಂದಾಗ ನೆಹರೂ ಅವರ ಭಾವಚಿತ್ರ ವಿಧಾನಸೌಧದಲ್ಲಿ ಹೇಗೆ ಇರುತ್ತದೆ ನೋಡೋಣ. ನೆನಪಿಡಿ, ಪರಿವಾರವಾದದ ಬಲದಿಂದ ಬೆಳೆದಂತಹ ಹೊಗಳುಭಟರು ಬೇಕು ಎಂದಾಗ ಭಾವಚಿತ್ರ ಇಡಲಿಕ್ಕೆ, ಬೇಡ ಅಂದಾಗ ತೆಗೆಯಲಿಕ್ಕೆ, ವೀರ ಸಾವರ್ಕರ್ ಅವರು ನಿಮ್ಮ ಹಾಗೆ ಅಥವಾ ನೆಹರು ಅವರ ಹಾಗೆ ವಂಶವಾದದಿಂದ ಬೆಳೆದವರಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೀವರಕ್ಷಕ ಔಷಧಗಳ ಬೆಲೆ ನಿಯಂತ್ರಣ: ತ್ವರಿತ ಕ್ರಮ ಜಾರಿಗೊಳಿಸಲು ಕೇಂದ್ರಕ್ಕೆ ರಾಜ್ಯದ ಒತ್ತಾಯ

ಕ್ಯಾನ್ಸರ್ ಔಷಧಿಗಳು ಸೇರಿದಂತೆ ಅತ್ಯಗತ್ಯ ಔಷಧಗಳ ಮೇಲೆ ವಿಧಿಸಲಾಗುತ್ತಿರುವ ಹೆಚ್ಚಿನ ದರದ...

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...