ಪ್ರಿಯಾಂಕ್ ಖರ್ಗೆ, ಡಿಸಿಗೆ ಅವಮಾನ; FIR ದಾಖಲಾದ ಬೆನ್ನಲ್ಲೇ ಕ್ಷಮೆ ಕೇಳಿದ ಬಿಜೆಪಿ ಶಾಸಕ

Date:

ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಹಾಗೂ ದಲಿತ ಸಮುದಾಯಕ್ಕೆ ಅಪಮಾನ ಮಾಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಎನ್ ರವಿಕುಮಾರ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರವಿಕುಮಾರ್, ತಮ್ಮ ಹೇಳಿಕೆಗೆ ವಿಷಾಧ ವ್ಯಕ್ತಪಡಿಸುತ್ತೇನೆ. ಹೇಳಿಕೆ ಹಿಂಪಡೆಯುತ್ತೇನೆ ಎಂದಿದ್ದಾರೆ.

- Advertisement -

“ನನ್ನ ಅಜಾಗರೂಕ ಹೇಳಿಕೆಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಜಿಲ್ಲಾಧಿಕಾರಿ ಅತ್ಯಂತ ಗೌರವಪಾತ್ರರು. ಆ ಹೇಳಿಕೆಯನ್ನು ಉದ್ದೇಶಪೂರ್ವಕವಾಗಿ ಹೇಳಿಲ್ಲ. ಬಾಯಿ ತಪ್ಪಿನಿಂದ ಬಂದ ಹೇಳಿಕೆಯಷ್ಟೇ. ನನ್ನ ಹೇಳಿಕೆಯನ್ನು ಕೂಡಲೇ ಹಿಂಪಡೆಯುತ್ತಿದ್ದೇನೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇತ್ತೀಚೆಗೆ ಕಲಬುರಗಿಯಲ್ಲಿ ಬಿಜೆಪಿ ಪ್ರತಿಭಟನೆ ಆಯೋಜಿಸಿತ್ತು. ಆ ಪ್ರತಿಭಟನೆಯಲ್ಲಿ ವಿಧಾನ ಪರಿಷತ್‌ನ ವಿರೋಧ ಪಕ್ಷದ (ಬಿಜೆಪಿ) ಮುಖ್ಯ ಸಚೇತಕರಾಗಿರುವ ಎನ್‌ ರವಿಕುಮಾರ್ ಭಾವಹಿಸಿ ಮಾತನಾಡಿದ್ದರು. ತಮ್ಮ ಭಾಷಣದಲ್ಲಿ, “”ಕಲಬುರಗಿ ಕರ್ನಾಟಕದಲ್ಲಿದೆಯೇ ಅಥವಾ ಪಾಕಿಸ್ತಾನದಲ್ಲಿದೆಯೇ. ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ಪಾಕಿಸ್ತಾನದವರೋ ಅಥವಾ ಭಾರತದವರೋ ಖಚಿತವಾಗಿ ಗೊತ್ತಿಲ್ಲ” ಎಂದಿದ್ದರು.

ಅಲ್ಲದೆ, “ಶಹಾಬಾದ್ ಡಿವೈಎಸ್ ಪಿ ಶಂಕರಗೌಡ ಪಾಟೀಲ, ಸಿಪಿಐ ಚಂದ್ರಶೇಖರ ತಿಗಡಿ ಮತ್ತು ನಟರಾಜ ಲಾಡೆ ತಮ್ಮ ಕರ್ತವ್ಯ ನಿರ್ವಹಣೆಲ್ಲಿ ಅಸಮರ್ಥರಾಗಿದ್ದಾರೆ. ಅವರು ಸರ್ಕಾರದ ಗುಲಾಮರಾಗಿದ್ದಾರೆ” ಎಂದು ಆರೋಪಿಸಿದ್ದರು. ಮಾತ್ರವಲ್ಲ, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧವೂ ಜಾತಿ ನಿಂದನೆ ಮಾಡಿದ್ದರು.

ಈ ಲೇಖನ ಓದಿದ್ದೀರಾ?: ಅರಣ್ಯಗಳು ಅಕ್ಷಯ ಪಾತ್ರೆಗಳಲ್ಲ: ಎಲ್ಲರೂ ಅರಿಯಬೇಕಾದ ಸತ್ಯ

ಅವರ ಭಾಷಣ ವರದಿಯಾದ ಬಳಿಕ, ಕಾಂಗ್ರೆಸ್‌ ಕಾರ್ಯಕರ್ತ ದತ್ತಾತ್ರೇಯ ಇಕ್ಕಳಕಿ ಅವರು ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. “ರವಿಕುಮಾರ್ ಅವರು ಮುಸ್ಲಿಮರ ವಿರುದ್ಧ ಕೋಮುದ್ವೇಷ ಪ್ರಚೋದನೆ ಮಾಡಿದ್ದಾರೆ. ಪೊಲೀಸರು ಮತ್ತು ಅಧಿಕಾರಿಗಳನ್ನು ಗುಲಾಮರೆಂದು ಅವಮಾನಿಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜಾತಿ ನಿಂದನೆ ಮಾಡಿದ್ದಾರೆ. ದಲಿತ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದರು.

ಖರ್ಗೆ ಮತ್ತು ದಲಿತ ಸಮುದಾಯಕ್ಕೆ ಜಾತಿ ನಿಂದನೆ ಹಾಗೂ ಜಿಲ್ಲಾಧಿಕಾರಿ ವಿರುದ್ಧ ಕೋಮುದ್ವೇಷದ ಹೇಳಿಕೆ ನೀಡಿದ ಆರೋಪದ ಮೇಲೆ ರವಿಕುಮಾರ್ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...