ಪ್ರತಾಪ್‌ ಸಿಂಹನಿಂದ ರಾಜ್ಯ ತಲೆತಗ್ಗಿಸುವಂತಾಗಿದೆ: ಸಚಿವ ಪ್ರಿಯಾಂಕ್‌ ಖರ್ಗೆ ವಾಗ್ದಾಳಿ

Date:

ಸಂಸದ ಪ್ರತಾಪ್ ಸಿಂಹ ಅವರು ಸಂಸತ್‌ ದಾಳಿ ಘಟನೆಯ ಬಳಿಕ ಎಲ್ಲಿದ್ದಾರೆ? ಅವರು ಮಾಡಿರುವ ಕೆಲಸದಿಂದ ನಮ್ಮ ರಾಜ್ಯ ತಲೆತಗ್ಗಿಸುವಂತಾಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ವಾಗ್ದಾಳಿ ನಡೆಸಿದರು.

ಕಲಬುರಗಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ದೇಶದಲ್ಲಿರುವ ನಿರುದ್ಯೋಗ ಸಮಸ್ಯೆಯೇ ಲೋಕಸಭೆ ಅಧಿವೇಶನ ದಾಳಿಗೆ ಕಾರಣ. ಈ ಬಗ್ಗೆ ನಮ್ಮ ನಾಯಕ ರಾಹುಲ್ ಗಾಂಧಿ ಅವರು ಹೇಳಿರುವುದರಲ್ಲಿ ಯಾವುದೇ ತಪ್ಪಿಲ್ಲ” ಎಂದರು.

“ಎಲ್ಲ ವಿಚಾರಕ್ಕೂ ಮಾಧ್ಯಮಗಳ ಮುಂದೆ ಬರುವ ಪ್ರತಾಪ್‌ ಸಿಂಹ ಈಗ ಕಾಣಿಸುತ್ತಿಲ್ಲ. ಈ ಘಟನೆ ಬಗ್ಗೆ ಕಾಂಗ್ರೆಸ್‌ನವರೂ ಮಾತನಾಡಬಾರದಂತೆ? ಘಟನೆ ಬಗ್ಗೆ ಇಲ್ಲಿಯವರೆಗೆ ಅಮಿತ್ ಶಾ ಒಂದೇ ಒಂದು ಹೇಳಿಕೆ ಕೊಟ್ಟಿಲ್ಲ ಯಾಕೆ” ಎಂದು ಪ್ರಶ್ನಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜಕೀಯ ಸಂಸ್ಕೃತಿಯನ್ನು ಅಧೋಗತಿಗೆ ತಳ್ಳುತ್ತಿರುವ ಬಿಜೆಪಿ ಅಂತಃಕಲಹ

ರಾಹುಲ್‌ ಗಾಂಧಿ ಹೇಳಿಕೆಯಲ್ಲಿ ತಪ್ಪಿಲ್ಲ

“ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಇದರಲ್ಲಿ ತಪ್ಪೇನಿದೆ? ನಮ್ಮ ದೇಶದಲ್ಲಿ ‌ನಿರುದ್ಯೋಗ ಸಮಸ್ಯೆ ಎಷ್ಟಿದೆ ಗೊತ್ತಿಲ್ವಾ? ಇಂತಹ ಗಂಭೀರ ವಿಚಾರಕ್ಕೆ ರಾಜ್ಯಕೀಯ ಲೇಪ ಮಾಡುವುದು ಸರಿಯಲ್ಲ” ಎಂದು ಹೇಳಿದರು.

ಸಿಟಿ ರವಿ ಬಗ್ಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್‌ ಖರ್ಗೆ, “ಮೊದಲು ತಮ್ಮ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಪಡೆದು, ಬಳಿಕ ಮಾತನಾಡಲಿ” ಎಂದು ಲೇವಡಿ ಮಾಡಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೈಲಿಗೆ ಬೆಂಕಿ ಹಚ್ಚಿ ಸುಡುತ್ತೇವೆ ಎಂದವರನ್ನು ಒದ್ದು ಒಳಗೆ ಹಾಕಬೇಕು: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಅಯೋಧ್ಯೆಯ ರಾಮ ಮಂದಿರಕ್ಕೆ ತೆರಳುತ್ತಿದ್ದ ರೈಲಿಗೆ ಹೊಸಪೇಟೆಯಲ್ಲಿ ಬೆಂಕಿ ಹಚ್ಚಿ ಸುಡುತ್ತೇವೆ...

ವಿಪಕ್ಷ ನಾಯಕ ಸ್ಥಾನದಿಂದ ಅಶೋಕ್‌ರನ್ನು ಕೆಳಗಿಳಿಸಿ: ಬಿಜೆಪಿ ರಾಜ್ಯಾಧ್ಯಕ್ಷರಿಗೆ ಬಜರಂಗದಳ ಒತ್ತಾಯ

ಬಜೆಟ್ ಅಧಿವೇಶನದ ವೇಳೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್,...

ನಟ ದರ್ಶನ್ ವಿರುದ್ಧ ಮತ್ತೆರಡು ದೂರು ದಾಖಲು; ಕ್ಷಮೆ ಕೇಳಿದ ಶಫಿ

ನಟ ದರ್ಶನ್ ಮತ್ತು ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ನಡುವಿನ ಗಲಾಟೆ...