ನೂರಾರು ಮಹಿಳೆಯರ ಅತ್ಯಾಚಾರವೆಸಗಿ ವಿದೇಶಕ್ಕೆ ಓಡಿ ಹೋದವನನ್ನು ಕರೆತಂದು ಮಂಗಳಸೂತ್ರದ ಬಗ್ಗೆ ಮಾತನಾಡಿ: ಪ್ರಿಯಾಂಕಾ ಗಾಂಧಿ

Date:

ಹಾಸನದ ಸಂಸದ ಪ್ರಜ್ವಲ್ ರೇವಣ್ಣನವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣವು ದೇಶಾದ್ಯಂತ ಸುದ್ದಿಯಲ್ಲಿರುವ ಮಧ್ಯೆಯೇ ಪ್ರಧಾನಿ ನರೇಂದ್ರ ಮೋದಿಯವರ ಮೌನವನ್ನು ಪ್ರಶ್ನಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಪ್ರಧಾನಿಗಳೇ, ಸಾವಿರಾರು ಮಹಿಳೆಯರ ಅತ್ಯಾಚಾರವೆಸಗಿ ವಿದೇಶಕ್ಕೆ ಓಡಿ ಹೋದವನನ್ನು ಕರೆತಂದ ಬಳಿಕ ಮಂಗಳಸೂತ್ರದ ಬಗ್ಗೆ ಮಾತನಾಡಿ” ಎಂದು ತಿರುಗೇಟು ನೀಡಿದ್ದಾರೆ.

- Advertisement -

ಕಲಬುರಗಿಯ ಸೇಡಂನಲ್ಲಿ ನಡೆದ ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, “ಕರ್ನಾಟಕದಲ್ಲಿ ಮೋದಿ ಅವರ ಮೈತ್ರಿ ಅಭ್ಯರ್ಥಿ ಸಾವಿರಾರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ವಿದೇಶಕ್ಕೆ ಓಡಿ ಹೋಗಿದ್ದಾನೆ. ವಿರೋಧ ಪಕ್ಷದ ನಾಯಕರು ವಿದೇಶಕ್ಕೆ ಹೋಗುವಾಗ ಮಾಹಿತಿ ಪಡೆದುಕೊಳ್ಳುವ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅವರಿಗೆ ಈತ ಓಡಿ ಹೋಗಿದ್ದು ಗೊತ್ತಾಗಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಮಾತ್ರವಲ್ಲದೇ, ‘ಆ ವ್ಯಕ್ತಿಯನ್ನು ಮರಳಿ ದೇಶಕ್ಕೆ ಕರೆತಂದ ಬಳಿಕವೇ ಮಂಗಳಸೂತ್ರದ ಬಗ್ಗೆ ಮಾತನಾಡಿ” ಎಂದು ವಾಗ್ದಾಳಿ ನಡೆದಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ನಾನು ನನ್ನ ಮಗಳನ್ನು ನೋಡಲು ವಿದೇಶಕ್ಕೆ ಹೋದರೆ ಮೋದಿ – ಅಮಿತ್ ಶಾ ಅವರು ಪ್ರಿಯಾಂಕ ಗಾಂಧಿ ಬೇರೆ ದೇಶಕ್ಕೆ ಹೋದರು ಎಂದು ಆಡಿಕೊಂಡರು. ನಾನು ವಿದೇಶಕ್ಕೆ ಹೋಗುವುದು ಮೋದಿ, ಅಮಿತ್ ಶಾ ಅವರಿಗೆ ತಿಳಿಯುತ್ತದೆ. ಆದರೆ ಒಬ್ಬ ರಾಕ್ಷಸ ಅವರ ಮೂಗಿನ ನೇರದಲ್ಲೇ ದೇಶ ಬಿಟ್ಟು ಹೋಗುವುದು ಅವರಿಗೆ ಗೊತ್ತಾಗಲಿಲ್ಲವೇ? ಇದನ್ನ ಯಾರಾದರೂ ನಂಬಲು ಸಾಧ್ಯವೇ? ಮೋದಿಯವರನ್ನ ಪ್ರಶ್ನಿಸಿ, ಎಲ್ಲಿಯವರೆಗೂ ಅಪರಾಧಿ ವಾಪಸ್ ಬರುವುದಿಲ್ಲವೋ ಅಲ್ಲಿಯವರೆಗೂ ಅವರಿಗೆ ನಮ್ಮ ತಾಯಂದಿರ ಮಂಗಳಸೂತ್ರದ ಬಗ್ಗೆ ಮಾತನಾಡುವ ಧೈರ್ಯ ಬರಬಾರದು” ಎಂದು ಪ್ರಿಯಾಂಕಾ ಗಾಂಧಿ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

“ನೂರಾರು ಹೆಣ್ಣುಮಕ್ಕಳ ಜೀವನ ಹಾಳು ಮಾಡಿದ ವ್ಯಕ್ತಿಯ ಭುಜದ ಮೇಲೆ ಪ್ರಧಾನಿ ಮೋದಿ ಕೈಯಿಟ್ಟು ಫೋಟೋಗೆ ಫೋಸ್ ನೀಡಿದ್ದರು. 10 ದಿನಗಳ ಹಿಂದೆ ಆ ನಾಯಕನನ್ನೇ ಮೋದಿ ಹಾಡಿ ಹೊಗಳಿದ್ದರು. ಈಗ ಅದೇ ನಾಯಕ ದೇಶದಿಂದ ಪರಾರಿಯಾಗಿದ್ದಾನೆ. ಅವನ ಘೋರ ಅಪರಾಧಗಳ ಬಗ್ಗೆ ಕೇಳಿದರೆ ಹೃದಯ ಕಂಪಿಸುತ್ತದೆ. ಅವನು ನೂರಾರು ಮಹಿಳೆಯರ ಬದುಕನ್ನೇ ಹಾಳು ಮಾಡಿದ್ದಾನೆ. ಮೋದಿಜಿ ಇನ್ನೂ ಸುಮ್ಮನಿರುತ್ತೀರಾ?” ಎಂದು ಪ್ರಶ್ನಿಸಿದ್ದಾರೆ.

“ನಾನು ಪ್ರಧಾನಮಂತ್ರಿಗಳನ್ನು ಕೇಳುತ್ತೇನೆ, ಅವರ ಪಕ್ಕದಲ್ಲೇ ಕುಳಿತು ವೇದಿಕೆ ಹಂಚಿಕೊಂಡವರು, ಮೋದಿಯವರು ಅವರ ಪರವಾಗಿ ಮತಯಾಚನೆ ಮಾಡಿದ್ದ ವ್ಯಕ್ತಿ ಸಾವಿರಾರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಮೋದಿಯವರು ಏನು ಹೇಳುತ್ತಾರೆ? ಗೃಹ ಸಚಿವರು ಏನು ಹೇಳುತ್ತಾರೆ?” ಎಂದು ಪ್ರಿಯಾಂಕಾ ಗಾಂಧಿ ಆಕ್ರೋಶ ಹೊರಹಾಕಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪಚುನಾವಣೆ: ನಂದಿಗ್ರಾಮ, ನಗಾಂವ್‌ ಫಲಿತಾಂಶದತ್ತ ಎಲ್ಲರ ಚಿತ್ತ

ಅಸ್ಸಾಂನ ಒಂದು ಲೋಕಸಭಾ ಕ್ಷೇತ್ರ ಮತ್ತು ಪಶ್ಚಿಮ ಬಂಗಾಳ, ತಮಿಳುನಾಡು, ಕೇಂದ್ರಾಡಳಿತ...

ಅಕ್ಟೋಬರ್ 10ರ ಜಂತರ್ ಮಂತರ್ ಪ್ರತಿಭಟನೆ: ಸಿಜೆಪಿ ಧರಣಿಯಲ್ಲಿ ಮಮತಾ ಬ್ಯಾನರ್ಜಿ ಭಾಗಿ ಸಾಧ್ಯತೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...