ಆಸ್ಪತ್ರೆ ನಿರ್ಮಾಣ ಹಗರಣ: ಎಎಪಿಯ ಸೌರಭ್ ಭಾರದ್ವಾಜ್ ನಿವಾಸದ ಮೇಲೆ ಇಡಿ ದಾಳಿ

Date:

Advertisements

ದೆಹಲಿ ಆರೋಗ್ಯ ಸಚಿವರಾಗಿದ್ದ ಅವಧಿಯಲ್ಲಿ ಆಸ್ಪತ್ರೆಗಳ ನಿರ್ಮಾಣದಲ್ಲಿ ಹಗರಣ ನಡೆದಿದೆ ಎಂಬ ಆರೋಪದ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ಮಂಗಳವಾರ ರಾಷ್ಟ್ರ ರಾಜಧಾನಿಯಲ್ಲಿರುವ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸೌರಭ್ ಭಾರದ್ವಾಜ್ ಅವರ ನಿವಾಸದ ಮೇಲೆ ದಾಳಿ ನಡೆಸಿದೆ. ದೆಹಲಿಯಲ್ಲಿ ಕನಿಷ್ಠ 12 ಸ್ಥಳಗಳಲ್ಲಿ ತನಿಖಾ ಸಂಸ್ಥೆ ಶೋಧ ನಡೆಸುತ್ತಿದೆ.

ಆಸ್ಪತ್ರೆ ನಿರ್ಮಾಣ ಹಗರಣವು ಸುಮಾರು 5,590 ಕೋಟಿ ರೂ.ಗಳಷ್ಟಿದೆ ಎಂದು ಹೇಳಲಾಗಿದೆ. 2018-2019ರಲ್ಲಿ, ಎಎಪಿ ನೇತೃತ್ವದ ದೆಹಲಿ ಸರ್ಕಾರವು 24 ಆಸ್ಪತ್ರೆಗಳ ನಿರ್ಮಾಣಕ್ಕಾಗಿ 5,590 ಕೋಟಿ ರೂ.ಗಳ ಯೋಜನೆಗಳನ್ನು ಅನುಮೋದಿಸಿತ್ತು.

ಇದನ್ನು ಓದಿದ್ದೀರಾ? ಅಬಕಾರಿ ನೀತಿ ಹಗರಣ | ಬಿಆರ್‌ಎಸ್‌ ನಾಯಕಿ ಕವಿತಾಗೆ ಮಧ್ಯಂತರ ಜಾಮೀನು ನಿರಾಕರಣೆ

Advertisements

ಐಸಿಯು ಆಸ್ಪತ್ರೆಯನ್ನು ಆರು ತಿಂಗಳಲ್ಲಿ ಪೂರ್ಣಗೊಳಿಸಬೇಕಾಗಿತ್ತು, ಆದರೆ ಮೂರು ವರ್ಷಗಳ ನಂತರವೂ ಕೆಲಸ ಅಪೂರ್ಣವಾಗಿಯೇ ಉಳಿದಿದೆ. 800 ಕೋಟಿ ರೂ. ಖರ್ಚು ಮಾಡಿದರೂ, ಕೇವಲ ಶೇಕಡ 50ರಷ್ಟು ಕೆಲಸ ಪೂರ್ಣಗೊಂಡಿದೆ ಎಂದು ಆರೋಪಿಸಲಾಗಿದೆ.

ಎಲ್‌ಎನ್‌ಜೆಪಿ ಆಸ್ಪತ್ರೆಯ ವೆಚ್ಚವು 488 ಕೋಟಿ ರೂ.ಗಳಿಂದ 1,135 ಕೋಟಿ ರೂ.ಗಳಿಗೆ ಏರಿದೆ. ಹಲವಾರು ಸ್ಥಳಗಳಲ್ಲಿ ಅನುಮೋದನೆಯಿಲ್ಲದೆ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಲಾಗಿದೆ.

ಆಸ್ಪತ್ರೆ ಮಾಹಿತಿ ನಿರ್ವಹಣಾ ವ್ಯವಸ್ಥೆ (ಎಚ್‌ಐಎಂಎಸ್) 2016ರಿಂದ ಬಾಕಿ ಉಳಿದಿದೆ, ಉದ್ದೇಶಪೂರ್ವಕ ವಿಳಂಬದ ಆರೋಪಗಳಿವೆ. ಈ ಪ್ರಕರಣದಲ್ಲಿ ಭಾರದ್ವಾಜ್ ಜೊತೆಗೆ ಎಎಪಿ ನಾಯಕ ಸತ್ಯೇಂದರ್ ಜೈನ್ ಕೂಡ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಕಚೇರಿಗಳಲ್ಲಿ ಯುಎಸ್‌ಬಿ, ಪೆನ್‌ಡ್ರೈವ್‌ಗಳ ಬಳಕೆ ನಿಷೇಧಿಸಿದ ಜಮ್ಮು ಕಾಶ್ಮೀರ ಸರ್ಕಾರ

ಸೂಕ್ಷ್ಮವಾಗಿರುವ ಸರ್ಕಾರಿ ಮಾಹಿತಿಯನ್ನು ರಕ್ಷಿಸುವ ನಿಟ್ಟಿನಲ್ಲಿ ಕೇಂದ್ರಾಡಳಿತ ಪ್ರದೇಶ ಜಮ್ಮು ಕಾಶ್ಮೀರದ...

‘ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ’ ಎಂದ ಬಿಜೆಪಿ ನಾಯಕ ಅನುರಾಗ್ ಠಾಕೂರ್; ಟ್ರೋಲ್‌ಗೆ ಗುರಿ

"ಭಗವಾನ್ ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ" ಎಂದು ಹೇಳುವ ಮೂಲಕ ಬಿಜೆಪಿ...

ಅಂಗವಿಕಲರ ಕುರಿತು ಹಾಸ್ಯ: ಕ್ಷಮೆಯಾಚಿಸಲು ಕಾಮಿಡಿಯನ್‌ಗಳಿಗೆ ಸುಪ್ರೀಂ ಸೂಚನೆ

ನೀವು ಮಾತುಗಳನ್ನು ವಾಣಿಜ್ಯೀಕರಣಗೊಳಿಸುವಾಗ ಯಾವುದೇ ಒಂದು ಸಮುದಾಯದ ಭಾವನೆಗಳನ್ನು ನೋಯಿಸಲು ಸಾಧ್ಯವಿಲ್ಲ...

Download Eedina App Android / iOS

X