ಆಯುಷ್ ಆಸ್ಪತ್ರೆಗಳಿಗೆ ಸೂಕ್ತ ಮೇಲ್ವಿಚಾರಣೆ: ಸಚಿವ ದಿನೇಶ್ ಗುಂಡೂರಾವ್

Date:

ಆಯುಷ್ ಆಸ್ಪತ್ರೆಗಳಲ್ಲಿ ಒಳ ರೋಗಿಗಳ ದಾಖಲಾತಿ ವ್ಯವಸ್ಥೆ ಮಾಡುವುದು ಸೇರಿದಂತೆ ಎಲ್ಲ ರೀತಿಯಿಂದ ಸೂಕ್ತ ಮೇಲ್ವಿಚಾರಣೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ವಿಧಾನ ಪರಿಷತ್‌ನಲ್ಲಿ ಸದಸ್ಯ ಪಿ ಎಚ್‌ ಪೂಜಾರ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, “ರಾಜ್ಯದಲ್ಲಿರುವ 80 ಆಸ್ಪತ್ರೆಗಳಲ್ಲಿ ಈಗಾಗಲೇ 55 ಆಯುಷ್ ಆಸ್ಪತ್ರೆಗಳಲ್ಲಿ ಒಳರೋಗಿಗಳ ದಾಖಲಾತಿಯನ್ನು ಪ್ರಾರಂಭಿಸಲಾಗಿದ್ದು ಉಳಿದ 25 ಆಯುಷ್ ಆಸ್ಪತ್ರೆಗಳಲ್ಲಿ ಒಳ ರೋಗಿಗಳ ದಾಖಲಾತಿಯನ್ನು ಪ್ರಾರಂಭಿಸಲು ಕ್ರಮ ವಹಿಸಲಾಗುತ್ತಿದೆ” ಎಂದರು.

“ಜಿಲ್ಲಾ ಆಯಷ್ ಅಧಿಕಾರಿಗಳ ಪ್ರತಿ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರತಿ ಆಸ್ಪತ್ರೆಗಳ ಒಳರೋಗಿಗಳ ದಾಖಲಾತಿಯನ್ನು ಪ್ರಾರಂಭಿಸಲು ಸೂಚಿಸಲಾಗಿದೆ. ಆಯುಷ್ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಕೊರತೆ ಇರುವ ಕಡೆ ಗಮನ ಕೊಟ್ಟು ಔಷಧಿ ಖರೀದಿ, ಸಿಬ್ಬಂದಿ ನೇಮಕ ಮತ್ತು ಆಯುಷ್ ತಜ್ಞ ವೈದ್ಯರ ನೇಮಕಕ್ಕೆ ಒತ್ತು ಕೊಡಲಾಗುತ್ತಿದೆ” ಎಂದು ವಿವರಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕೇಂದ್ರ ಸರ್ಕಾರವು ಆಯುಷ್ ಆಸ್ಪತ್ರೆಗಳಿಗೆ ಔಷಧಿ, ಸಲಕರಣೆ ಮತ್ತು ಉಪಕರಣಕ್ಕೆ ನೀಡಿದ ಅನುದಾನದ ಸದ್ಭಳಕೆ ಮಾಡಲಾಗುತ್ತಿದೆ. ಎರಡು ತಿಂಗಳೊಳಗೆ ಅವಶ್ಯವಿರುವ ಸಿಬ್ಬಂದಿ ನೇಮಕಕ್ಕೆ ಕ್ರಮ ವಹಿಸಲಾಗುವುದು” ಎಂದು ಸಚಿವರು ತಿಳಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. KPSC AYURVEDHA DEPTMENT ADDISITIONAL LIST PUBLISIHED 15/11/2023 Staff Nurse and pharmacy officers kindly ayush deptment subit the form no 7

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಈ ದಿನʼ ಸಮೀಕ್ಷೆ | ಬಿಗಡಾಯಿಸಿದ ನಿರುದ್ಯೋಗ ; ಮೋದಿ ಆಡಳಿತಕ್ಕೆ ಬೇಸರಗೊಂಡ ಮತದಾರ

“ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸಲಾಗುವುದು” ಎಂಬ ಘೋಷಣೆಯನ್ನು ನರೇಂದ್ರ ಮೋದಿಯವರು...

ನೇಹಾ ಕನ್ನಡ ನಾಡಿನ ಮಗಳು, ಸಾವಿನ ಮನೆಯಲ್ಲಿ ಬಿಜೆಪಿ ರಾಜಕಾರಣ ಬೇಡ: ಸುರ್ಜೇವಾಲ್

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೇವಾಲ್ ಅವರು ಹುಬ್ಬಳ್ಳಿಯ ಬಿಡ್ನಾಳದಲ್ಲಿರುವ ನೇಹಾ...

‘ಈ ದಿನ’ ಸಮೀಕ್ಷೆ | ಬೆಲೆ ಏರಿಕೆಗೆ ಬಿಜೆಪಿಯೇ ಕಾರಣ ಅಂತಾರೆ ಮತದಾರರು!

2014ರಲ್ಲಿ ಚುನಾವಣಾ ಪ್ರಚಾರಕ್ಕೆ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಪ್ರಮುಖ ವಿಚಾರವಾಗಿದ್ದು...

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...