ಪರಿಶಿಷ್ಟರ ಮೀಸಲು ಹೆಚ್ಚಳ ಪ್ರಸ್ತಾವ | ಸಮುದಾಯಗಳ ಭಾವನೆ ಜೊತೆ ಬಿಜೆಪಿ ಆಟ ಆಡುತ್ತಿದೆ: ಜೆಡಿಎಸ್‌

Date:

  • ಮೀಸಲು ಹೆಚ್ಚಳಕ್ಕೆ ನಮ್ಮ ಸರ್ಕಾರ ಬದ್ಧ ಎಂದ ಸಿಎಂ ಬೊಮ್ಮಾಯಿ
  • ಸರಣಿ ಟ್ವೀಟ್ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್‌ ಕಿಡಿ

ಬಿಜೆಪಿ ಪಂಚಮಸಾಲಿ, ಒಕ್ಕಲಿಗ ಸಮುದಾಯಗಳ ಹಣೆಗೆ ತುಪ್ಪ ಹಚ್ಚಿದ್ದಾಯ್ತು. ಈಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಿಸುವ ಕುರಿತು ಅವರಿಗೂ ಮೋಸ ಮಾಡುತ್ತಿದೆ ಎಂದು ಜೆಡಿಎಸ್‌ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದೆ.

ಪರಿಶಿಷ್ಟರ ಮೀಸಲಾತಿ ಹೆಚ್ಚಳದ ಕುರಿತು ರಾಜ್ಯ ಸರ್ಕಾರ ಬಡಾಯಿ ಕೊಚ್ಚಿಕೊಂಡಿತ್ತು. ಆದರೆ, ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಶ್ನೆಗೆ ಲೋಕಸಭೆಯಲ್ಲಿ ಉತ್ತರಿಸಿದ್ದ ಕೇಂದ್ರ ಸರ್ಕಾರ, “ಪರಿಶಿಷ್ಟರ ಮೀಸಲಾತಿ ಹೆಚ್ಚಳದ ಕುರಿತು ಕರ್ನಾಟಕ ಸರ್ಕಾರ ಯಾವುದೇ ಪ್ರಸ್ತಾವ ಸಲ್ಲಿಸಿಲ್ಲ” ಎಂದು ಹೇಳಿತ್ತು.

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಪಕ್ಷಗಳ ತೀವ್ರ ಟೀಕೆಗೆ ಗುರಿಯಾಗಿದ್ದರು. ಇದೀಗ ಜೆಡಿಎಸ್‌ ಸರಣಿ ಟ್ವೀಟ್ ಮಾಡುವ ಮೂಲಕ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

“ಸುಳ್ಳಿನ ಬುರುಡೆ ಬಿಡುವುದನ್ನೇ ಕರಗತ ಮಾಡಿರುವ ರಾಜ್ಯ ಬಿಜೆಪಿ ಸರ್ಕಾರ ಮೀಸಲಾತಿ ಹೆಸರಲ್ಲಿ ಲಿಂಗಾಯತ ಪಂಚಮಸಾಲಿ, ಒಕ್ಕಲಿಗ ಸಮುದಾಯಗಳ ಹಣೆಗೆ ತುಪ್ಪ ಹಚ್ಚಿದ್ದಾಯ್ತು. ಈಗ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಹೆಚ್ಚಿಸುವ ಸಂಬಂಧ ಕೇಂದ್ರಕ್ಕೆ ಯಾವುದೇ ಪ್ರಸ್ತಾವವನ್ನೂ ಕಳಿಸದೇ, ಅವರಿಗೂ ಮೋಸ ಮಾಡುತ್ತಿದೆ” ಎಂದು ಟೀಕಿಸಿದೆ.

“ಸುಳ್ಳು ಹೇಳುವ ಮೂಲಕ ಎಲ್ಲ ಸಮುದಾಯಗಳನ್ನು ಭ್ರಮೆಯಲ್ಲಿ ತೇಲಿಸಬಹುದು ಎಂದು ರಾಜ್ಯ ಸರ್ಕಾರ ಭಾವಿಸಿದಂತಿದೆ” ಎಂದು ವ್ಯಂಗ್ಯವಾಡಿದೆ.

“ಮೀಸಲು ಹೆಚ್ಚಳದ ನಿರ್ಣಯವನ್ನು ಸಂವಿಧಾನದ 9ನೇ ವಿಧಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಕಳಿಸಲು ಇನ್ನೂ ಮೀನಾ-ಮೇಷ ಎಣಿಸುತ್ತಿರುವುದು ಏಕೆ? ಫೆ. 9ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿತ್ತಲ್ಲವೆ? ಸಮುದಾಯಗಳ ಭಾವನೆಗಳ ಜತೆ ಆಟವಾಡುವ ಬಿಜೆಪಿಗೆ ಅದರ ನೀಚ ತಂತ್ರಗಳೇ ಮುಳುವಾಗಲಿದೆ” ಎಂದು ಜೆಡಿಎಸ್‌ ಪ್ರಶ್ನಿಸಿದೆ.

ರಣದೀಪ್‌ ಸುರ್ಜೇವಾಲ ಅವರಿಗೆ ಸಿಎಂ ತಿರುಗೇಟು

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಹೆಚ್ಚಿಸುವ ಕುರಿತು ರಾಜ್ಯ ಸರ್ಕಾರ ಯಾವುದೇ ಪ್ರಸ್ತಾವ ಸಲ್ಲಿಸದ ಕುರಿತು ಪ್ರತಿಕ್ರಿಯೆ ನೀಡಿದ್ದ ಎಐಸಿಸಿ ರಾಜ್ಯ ಚುನಾವಣಾ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರು ಬಸವರಾಜ ಬೊಮ್ಮಾಯಿ ಅವರ ರಾಜೀನಾಮೆಗೆ ಆಗ್ರಹಿಸಿದ್ದರು. ಇದೀಗ ಸುರ್ಜೇವಾಲ ಹೇಳಿಕೆಗೆ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಗೃಹ ಕಚೇರಿಯ ಹೊರಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಬಸವರಾಜ ಬೊಮ್ಮಾಯಿ, “ಮೀಸಲಾತಿ ಬಗ್ಗೆ ಮಾತನಾಡುವ ನೈತಿಕತೆ ಮತ್ತು ರಾಜಕೀಯ ಅಧಿಕಾರ ಕಾಂಗ್ರೆಸ್‌ಗೆ ಇಲ್ಲ” ಎಂದು ಹೇಳಿದರು.

ಶೆಡ್ಯೂಲ್ 9ಕ್ಕೆ ಸೇರಿಸಲು ಸೂಚನೆ

“ಈಗಾಗಲೇ ಮೀಸಲಾತಿಗೆ ಕಾನೂನು ರಚಿಸಿದ್ದು, ಆ ಪ್ರಕಾರ ನೇಮಕಾತಿ ಹಾಗೂ ಬಡ್ತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಸಂವಿಧಾನದ ಶೆಡ್ಯೂಲ್ 9ಕ್ಕೆ ಸೇರಿಸಲು ಸಚಿವ ಸಂಪುಟದ ಅನುಮೋದನೆಯಾಗಿದ್ದು, ರಾಜ್ಯಪಾಲರಿಗೆ ಕಳುಹಿಸಲಾಗಿದೆ. ಕಾನೂನು ಇಲಾಖೆ ಸಲಹೆ ಪಡೆದು ಪ್ರಕ್ರಿಯೆ ಜಾರಿಗೊಳಿಸಿದೆ. ಶೆಡ್ಯೂಲ್ 9ಕ್ಕೆ ಸೇರ್ಪಡೆ ಮಾಡುವ ಬದ್ಧತೆ ಸರ್ಕಾರಕ್ಕಿದೆ” ಎಂದರು.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಸ್ಟ್ರೇಲಿಯನ್ ಹೂಡಿಕೆದಾರರಿಗೆ ಸಿಎಂ ಸಿದ್ದರಾಮಯ್ಯ ಆಹ್ವಾನ

ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ವಲಯದಲ್ಲಿ ಹೂಡಿಕೆ ಗ್ರೀನ್ ಫೀಲ್ಡ್...

ಸರ್ಕಾರದ ಉಚಿತ ಕೊಡುಗೆಗಳು ಜನರಲ್ಲಿ ಖರೀದಿಸುವ ಶಕ್ತಿ ಹೆಚ್ಚಿಸುತ್ತವೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರಿನಲ್ಲಿ ನಡೆಯುತ್ತಿರುವ ಬೆಂಗಳೂರು ಟೆಕ್‌ ಸಮ್ಮಿಟ್‌ನಲ್ಲಿ ಇನ್ಫೋಸಿಸ್‌ ಸ್ಥಾಪಕಾಧ್ಯಕ್ಷ ನಾರಾಯಣ ಮೂರ್ತಿ...

ಅನ್ ಬಾಕ್ಸಿಂಗ್ ಬಿಎಲ್‌ಆರ್‌ ಹಬ್ಬಕ್ಕೆ ಚಾಲನೆ ನೀಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ಅನ್‌ಬಾಕ್ಸಿಂಗ್ ಬೆಂಗಳೂರು ಫೌಂಡೇಷನ್’ ವತಿಯಿಂದ ಡಿಸೆಂಬರ್‌ 1ರಿಂದ...

ಅರ್ಹ ರೈತರಿಗೆ ತಲಾ 2000 ರೂ.ವರೆಗೆ ಬೆಳೆ ಪರಿಹಾರ: ಸಿದ್ದರಾಮಯ್ಯ ಘೋಷಣೆ

ಕೇಂದ್ರದಿಂದ ಹಣ ಬರುವವರೆಗೂ ಕಾಯಲು ಸಾಧ್ಯವಿಲ್ಲ: ಸಿಎಂ ಮೊದಲನೇ ಕಂತಿನಲ್ಲಿ...