ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್‌ ಶಿಫಾರಸು; ರಾಜಕೀಯ ದುರುದ್ದೇಶ: ಎಚ್‌ಡಿಕೆ

Date:

ಕೋವಿಡ್ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್‌ಗೆ ಶಿಫಾರಸು ಮಾಡಿರುವುದು ರಾಜಕೀಯ ‌ದುರುದ್ದೇಶ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

- Advertisement -

ಚನ್ನಪಟ್ಟಣ ಕ್ಷೇತ್ರದಲ್ಲಿ ಪ್ರಚಾರದ ನಡುವೆ ಮಾಧ್ಯಮಗಳ ಜತೆ ಮಾತನಾಡಿದ ಅವರು, “ತಮ್ಮ ಅಧೀನ ಸಂಸ್ಥೆಗಳನ್ನು, ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡು ಪ್ರತಿಪಕ್ಷ ನಾಯಕರನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ. ಇಂತಹ ಕೆಟ್ಟ ರಾಜಕೀಯಕ್ಕೆ ಜನರೇ ಪಾಠ ಕಲಿಸುತ್ತಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇನ್ನು ಈ ಸಂದರ್ಭದಲ್ಲೇ ಸರ್ಕಾರ ಕಿತ್ತೊಗೆಯುವುದು ಎಂದರೆ ಕಡಲೆಕಾಯಿ ಕಿತ್ತ ಹಾಗಲ್ಲ ಎಂಬ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಎಚ್‌ಡಿಕೆ, “ನಾವು ಕಡಲೆಕಾಯಿ ಗಿಡ ಕೀಳುತ್ತೇವೆ ಎಂದಿಲ್ಲ. ಸರ್ಕಾರವ್ನನೇ ಕಿತ್ತೊಗೆಯುತ್ತೇವೆ ಎಂದಿರುವುದು. ಈ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕು ಎಂಬುದು ಜನರ ಆಸೆ. ಜನರ ಭಾವನೆಯನ್ನಷ್ಟೇ ದೇವೇಗೌಡರು ಹೇಳಿದ್ದಾರೆ” ಎಂದರು.

ಇದನ್ನು ಓದಿದ್ದೀರಾ? ಕೋವಿಡ್​ ಹಗರಣ | ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಕಾನೂನು ಕ್ರಮಕ್ಕೆ ನ್ಯಾ. ಡಿ’ಕುನ್ಹಾ ಆಯೋಗ ಶಿಫಾರಸು

ಮೇಕೆದಾಟಿಗೆ ಪರ್ಮಿಷನ್ ನೀಡಿದರೆ ಮೂರೇ ವರ್ಷದಲ್ಲಿ ಅಣೆಕಟ್ಟು ನಿರ್ಮಾಣ ಮಾಡುತ್ತೇವೆ ಎಂಬ ಡಿಕೆಶಿ ಹೇಳಿಕೆಗೂ ಪ್ರತಿಕ್ರಿಯೆ ನೀಡಿದರು. “ಮೊದಲು ಅವರ ಮಿತ್ರಪಕ್ಷ ಡಿಎಂಕೆಯನ್ನು ಒಪ್ಪಿಸಲಿ. ಕೇಂದ್ರ ಸರ್ಕಾರವನ್ನು ಒಪ್ಪಿಸುವ ಭಾರ ನಮ್ಮದು. ಅವರ ಮಿತ್ರಪಕ್ಷ ಕ್ಯಾತೆ ತೆಗೆದುಕೊಂಡು ಕೂತಿದೆಯಲ್ಲ, ಅದರ ಬಗ್ಗೆ ಅವರು ಮೊದಲು ಬಾಯಿ ತೆರೆಯಲಿ” ಎಂದು ಕುಟುಕಿದರು.

“ಚನ್ನಪಟ್ಟಣ ಕ್ಷೇತ್ರದಲ್ಲಿ ಜನರ ಒಲವು ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ವಿಭಿನ್ನ ಪಕ್ಷಗಳಿಂದ ಐದು ಬಾರಿ ಶಾಸಕರಾಗಿ ಮಾಡಿದ ಕೆಲಸವನ್ನು ಜನರು ನೋಡಿದ್ದಾರೆ. ಈಗ ಒಬ್ಬ ಯುವಕ ಸ್ಪರ್ಧೆ ಮಾಡಿದ್ದಾನೆ, ಆತನನ್ನು ಒಮ್ಮೆ ನೋಡೋಣ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ” ಎಂದು ಕುಮಾರಸ್ವಾಮಿ ಹೇಳಿದರು.

“ನಾನು ಕೂಡ ಈ ಬಾರಿ 122 ಹಳ್ಳಿಗಳಿಗೆ ಭೇಟಿ ನೀಡಿದ್ದೇನೆ. ನಿಖಿಲ್ 190 ಹಳ್ಳಿಗಳಿಗೆ ಭೇಟಿ ಕೊಟ್ಟಿದ್ದಾರೆ. ದೇವೇಗೌಡರು, ಬಿಜೆಪಿ ನಾಯಕರು ಕೂಡ ಕಾಂಗ್ರೆಸ್ ದಾಳಿ ತಡೆಯಲು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ನಿಖಿಲ್ ಗೆಲ್ಲುವುದು ಖಚಿತ” ಎಂದು ಭರವಸೆ ವ್ಯಕ್ತಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...