ಪ್ರತಿಯೊಬ್ಬರ ಸಂವಿಧಾನಬದ್ಧ ಹಕ್ಕುಗಳನ್ನು ರಕ್ಷಿಸಿ: ಸಿಎಂ ಸಿದ್ದರಾಮಯ್ಯ ಕರೆ

Date:

Advertisements
  • ಕರ್ನಾಟಕ ಪೊಲೀಸ್ ಅಕಾಡೆಮಿ ತರಬೇತಿಯಲ್ಲಿ ಉನ್ನತ ಪ್ರತಿಷ್ಠೆ ಗಳಿಸಿದೆ: ಮೆಚ್ಚುಗೆ
  • ಶಿಸ್ತಿನ ಜತೆಗೆ ಸಾಮಾಜಿಕ ಜವಾಬ್ದಾರಿಯನ್ನು ಪ್ರಶಿಕ್ಷಣಾರ್ಥಿಗಳಿಗೆ ನೀಡಲಾಗುತ್ತಿದೆ

ಪ್ರತಿಯೊಬ್ಬರ ಸಂವಿಧಾನಬದ್ಧ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ ಎಂದು ನೂತನ ಡಿವೈಎಸ್ ಪಿ ಮತ್ತು ಅಬಕಾರಿ ಡಿವೈಎಸ್ ಪಿ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ 37ನೇ ತಂಡದ ಪ್ರೊಬೆಷನರಿ ಪೊಲೀಸ್ ಉಪಾಧೀಕ್ಷಕರು ಮತ್ತು ಅಬಕಾರಿ ಉಪಾಧೀಕ್ಷಕರು ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

“ಅಸಮಾನತೆ, ಜಾತಿ ತಾರತಮ್ಯ ಇರುವ ಸಮಾಜದಲ್ಲಿ ಅಶಕ್ತರಿಗೂ ನ್ಯಾಯ ಸಿಗುವಂತಾಗಬೇಕು. ಕೇವಲ ಬಲಾಢ್ಯರಿಗೆ ಮಾತ್ರ ನ್ಯಾಯ ಸಿಗುವಂತಾದರೆ ಇಷ್ಟೆಲ್ಲಾ ತರಬೇತಿ ಪಡೆದು ಪ್ರಯೋಜನ ಆಗುವುದಿಲ್ಲ. ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಅತ್ಯಂತ ಕಡಿಮೆ ಇದ್ದು, ಇದು ಸರಿಯಾಗಬೇಕಿದೆ” ಎಂದರು.

Advertisements

“ಸುಳ್ಳು ಮತ್ತು ದ್ವೇಷದ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವವರ ವಿರುದ್ಧ ಅತ್ಯಂತ ನಿಷ್ಠುರವಾಗಿ ವರ್ತಿಸಿ ಪ್ರತಿಯೊಬ್ಬರ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಸವಾಲು ನಿಮ್ಮ ಮೇಲಿದೆ. ದ್ವೇಷ ಕಾರುವವರಿಗೆ ಎಷ್ಟೇ ರಾಜಕೀಯ ಶಕ್ತಿ ಇದ್ದರೂ ಅವರನ್ನು ಮಟ್ಟ ಹಾಕದಿದ್ದರೆ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯವಿಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಷ್ಟ್ರಧ್ವಜ ತಯಾರಿಕೆಯ ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ

“ಸಾರ್ವಜನಿಕ ಜೀವನದಲ್ಲಿ ಇರುವವರೆಗೆ ನಾವು ಸಾಮಾಜಿಕ ಜವಾಬ್ದಾರಿಯನ್ನು , ಜನಸ್ನೇಹಿಗಳಾಗಿರುವುದನ್ನು ಮರೆಯಬಾರದು. ಜನರ ಕಷ್ಟಗಳನ್ನು ಆಲಿಸುವ ಮತ್ತು ಪರಿಹಾರ ಹುಡುಕುವ ತಾಳ್ಮೆ ಇಟ್ಟುಕೊಂಡವರು ಮಾತ್ರ ಸಾರ್ವಜನಿಕ‌ ಜೀವನದಲ್ಲಿರುವ ಅರ್ಹತೆ ಪಡೆದುಕೊಳ್ಳುತ್ತಾರೆ” ಎಂದರು.

“ಜನರು ನಿಮ್ಮ ಮೇಲೆ ಇಟ್ಟ ವಿಶ್ವಾಸವನ್ನು ಜವಾಬ್ದಾರಿಯಿಂದ ನಿರ್ವಹಿಸಿ. ಪೊಲೀಸರು ಅನೇಕ ಸಂದರ್ಭಗಳಲ್ಲಿ ಕ್ಲಿಷ್ಟ ಪರಿಸ್ಥಿತಿಗಳಲ್ಲಿ ಕೆಲಸ ಮಾಡಬೇಕಾಗುತ್ತದೆ. ಎಂಥಾದ್ದೇ ಸಂದರ್ಭದಲ್ಲೂ ತಾಳ್ಮೆ ಕಳೆದುಕೊಳ್ಳದೆ ಕರ್ತವ್ಯ ನಿರ್ವಹಿಸಬೇಕು” ಎಂದು ಕಿವಿಮಾತು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X